ಸಿವಿಲ್ ಪಿಎಸ್‌ಐ ನೇಮಕಕ್ಕೆ ಅರ್ಜಿ ಆಹ್ವಾನ : 402 ಹುದ್ದೆಗಳು : ಈ ಕೂಡಲೇ ಅರ್ಜಿ ಸಲ್ಲಿಸಿ

Advertisements

ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ (ಸಿವಿಲ್‌) (ಪುರುಷ ಮತ್ತು ಮಹಿಳಾ) ಹಾಗೂ ಸೇವೆಯಲ್ಲಿರುವವರು ಒಳಗೊಂಡಂತೆ ಹುದ್ದೆಗಳ ನೇರ ನೇಮಕಾತಿಗಾಗಿ ಕರ್ನಾಟಕ ರಾಜ್ಯ ಪೊಲೀಸ್ ಲಿಪಿಕ ನೌಕರರ ಸೇವೆಗಳು ಸೇರಿದಂತೆ ( ನೇಮಕಾತಿ) ನಿಯಮ 2004 ಮತ್ತು ಅದರ (ತಿದ್ದುಪಡಿ) ನಿಯಮ, 2009, ಕರ್ನಾಟಕ ರಾಜ್ಯ ಪೊಲೀಸ್ ಲಿಪಿಕ ಸೇವೆಗಳನ್ನು ಒಳಗೊಂಡ ( ನೇಮಕಾತಿ)(ತಿದ್ದುಪಡಿ ) ನಿಯಮಗಳು 2014, 2016 ಮತ್ತು 2020 ಕರ್ನಾಟಕ ಸಾರ್ವಜನಿಕ ಉದ್ಯೋಗ (ಕಲ್ಯಾಣ- ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲಾತಿ) ಆದೇಶ, 2013, ಕರ್ನಾಟಕ ಸಾರ್ವಜನಿಕ ಉದ್ಯೋಗ ( ಕಲ್ಯಾಣ – ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲಾತಿ) (ಅರ್ಹತಾ ಪ್ರಮಾಣ ಪತ್ರಗಳ ನೀಡಿಕೆ) ನಿಯಮಗಳು, 2013 ಹಾಗೂ ಕರ್ನಾಟಕ ಸರಕಾರದ ಸುತ್ತೋಲೆ ಪ್ರಕಾರ ಕಾಲ ಕಾಲಕ್ಕೆ ಆಗುವ ತಿದ್ದುಪಡಿಗಳ ಅನುಸಾರ ಈ ಅಧಿಸೂಚನೆಯನ್ನು ಪ್ರಕಟಿಸುತ್ತಾ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 01-04-2021 ಬೆಳಿಗ್ಗೆ 10.00 ಗಂಟೆಗೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 03-05-2021 ಸಂಜೆ 06.00 ಗಂಟೆಗೆ

ಶುಲ್ಕವನ್ನು ಅಧಿಕೃತ ಬ್ಯಾಂಕ್ ಅಥವಾ ಅಂಚೆ ಕಚೇರಿಗಳ ವೇಳೆಯಲ್ಲಿ ಪಾವತಿಸಲು ಕೊನೆಯ ದಿನಾಂಕ : 05-05-2021

ಅರ್ಜಿಗಳನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್ https://recruitment.ksp.gov.in ನಲ್ಲಿ ಆನ್‌ ಲೈನ್ ( ಎಲೆಕ್ಟ್ರಾನಿಕ್ ಮಾರ್ಗ) ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು. ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಅರ್ಜಿ ಶುಲ್ಕ : ಸಾಮಾನ್ಯ ವರ್ಗ, ಪ್ರವರ್ಗ 2 (ಎ), 2(ಬಿ), 3 (ಎ), 3 (ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ರೂ. 5೦೦/-, ಪರಿಶಿಷ್ಟ ಜಾತಿ , ಪರಿಶಿಷ್ಟ ಪಂಗಡ, ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ. 250/- ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ವಯೋಮಿತಿ : ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 03-05-2021 ಕ್ಕೆ ಅಭ್ಯರ್ಥಿಗೆ ಕನಿಷ್ಠ 21 ವರ್ಷ ವಯಸ್ಸಾಗಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 32 ವರ್ಷಗಳು, ಇತರೆ ಅಭ್ಯರ್ಥಿಗಳಿಗೆ 30 ವರ್ಷಗಳು.

ಸೇವಾನಿರತ ಅಭ್ಯರ್ಥಿಗಳಿಗೆ : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 40 ವರ್ಷಗಳು. ಇತರೆ ಅಭ್ಯರ್ಥಿಗಳಿಗೆ 30 ವರ್ಷಗಳು.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್‌ ಮಾಡಿ

Leave a Comment