ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ (KUIDFC) ಕೇಂದ್ರ ಕಚೇರಿ ಬೆಂಗಳೂರು ಇಲ್ಲಿ ಖಾಲಿ ಇರುವ ಹತ್ತು ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆ : ಸಹಾಯಕ ಪ್ರಧಾನ ವ್ಯವಸ್ಥಾಪಕರು ( ಎಡಿಬಿ) ಯೋಜನಾ ಹಣಕಾಸು ವಿಭಾಗ – 1 ಹುದ್ದೆ
ಉಪ ಪ್ರಧಾನ ವ್ಯವಸ್ಥಾಪಕರು/ ಸಹಾಯಕ ಪ್ರಧಾನ ವ್ಯವಸ್ಥಾಪಕರು ( ಟ್ರಸ್ಟ್) – 1 ಹುದ್ದೆ
ವ್ಯವಸ್ಥಾಪಕರು ( ಸಾರ್ವಜನಿಕ ಮತ್ತು ಸಂಪರ್ಕ ವಿಭಾಗ ) – 1 ಹುದ್ದೆ
ಸಹಾಯಕ ವ್ಯವಸ್ಥಾಪಕರು ( ಮೆಗಾಸಿಟಿ) ಹಣಕಾಸು ಮತ್ತು ಲೆಕ್ಕಪತ್ರ ವಿಭಾಗ – 1 ಹುದ್ದೆ
ಸಹಾಯಕ ವ್ಯವಸ್ಥಾಪಕರು ( ಮಾನವ ಸಂಪನ್ಮೂಲ) ಆಡಳಿತ ವಿಭಾಗ – 1 ಹುದ್ದೆ
ಶೀಘ್ರ ಲಿಪಿಗಾರರು – 3 ಹುದ್ದೆ
ಕಿರಿಯ ಕಾರ್ಯ ನಿರ್ವಾಹಕ ಸಹಾಯಕರು ಆಡಳಿತ ವಿಭಾಗ – 2 ಹುದ್ದೆ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 15/07/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29/07/2021
ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ಭರ್ತಿ ಮಾಡಿ ಭಾವಚಿತ್ರ ಸಹಿಯೊಂದಿಗೆ ವಯೋಮಿತಿ, ವಿದ್ಯಾರ್ಹತೆ, ಮೀಸಲಾತಿ, ಅನುಭವ , ಕನ್ನಡ ಭಾಷಾ ಜ್ಞಾನ ಇತ್ಯಾದಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು. ಅಪೂರ್ಣ/ ಅಸ್ಪಷ್ಟ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅರ್ಜಿಗಳನ್ನು ಅಂಚೆ/ ಕೊರಿಯರ್ ಮೂಲಕ ಸಲ್ಲಿಸಲು ಅವಕಾಶವಿಲ್ಲ.
ನೇಮಕಾತಿ ವಿಧಾನ : ವಿದ್ಯಾರ್ಹತೆ, ಮೆರಿಟ್, ಅನುಭವದ ಆಧಾರದ ಮೇಲೆ ಮೌಖಿಕ ಸಂದರ್ಶನಗಳನ್ನು ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ನಮೂನೆಯನ್ನು ಸಂಸ್ಥೆಯ ಅಧಿಕೃತ ವೆಬ್‌ಸೈಟ್ www.kuidfc.com/careers ನಲ್ಲಿ ಅಳವಡಿಸಲಾಗಿದೆ. ಅರ್ಜಿಯನ್ನು 29/07/2021 ರೊಳಗಾಗಿ ಆನ್ಲೈನ್ ಮೂಲಕ ಸಲ್ಲಿಸಬೇಕು.