KUWSDB Recruitment 2024: ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದಲ್ಲಿರುವ 50 ಸಹಾಯಕ ಅಭಿಯಂತರರು (ಸಿವಿಲ್) ಹಾಗೂ 14 ‘ಸಿʼ ಗ್ರೂಪ್ ವೃಂದದ ಹುದ್ದೆಗಳಿಗೆ ದಿನಾಂಕ 10-03-2024 ರವರೆಗೆ ಅರ್ಜಿಗೆ ಅವಕಾಶ ನೀಡಿತ್ತು. ಆದರೆ ಕೆಲವು ಅಭ್ಯರ್ಥಿಗಳು ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಕೋರಿದ್ದರಿಂದ ಅರ್ಜಿ ಸಲ್ಲಿಸಲು ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ವಿಸ್ತರಿಸಿದ ಕೊನೆಯ ದಿನಾಂಕ: 11-03-2024 ರಿಂದ 21-03-2024
ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ: 22-03-2024
ಹುದ್ದೆಗಳ ವಿವರ:
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಉದ್ಯೋಗ ಇಲಾಖೆಯಿಂದ
ಸಹಾಯಕ ಇಂಜಿನಿಯರ್ (ಸಿವಿಲ್) : 50, ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್ ಸಿ): 14 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 64 ಹುದ್ದೆಗಳಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವೇತನ ಶ್ರೇಣಿ:
ಸಹಾಯಕ ಇಂಜಿನಿಯರ್ (ಸಿವಿಲ್: ರೂ.43,100-ರೂ.83,900
ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್ ಸಿ): ರೂ.27,650-ರೂ.52,650
ಶೈಕ್ಷಣಿಕ ಅರ್ಹತೆ; ಸಹಾಯಕ ಇಂಜಿನಿಯರ್ (ಸಿವಿಲ್) ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ/ಬಿ.ಟೆಕ್ ಇಂಜಿನಿಯರಿಂಗ್ ಪದವಿಯನ್ನು ಸಿವಿಲ್ ವಿಭಾಗದಲ್ಲಿ ಪಡೆದಿರಬೇಕು
ಪ್ರಥಮ ದರ್ಜೆ ಲೆಕ್ಕ ಸಹಾಯಕರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಕಾಂ ಪದವಿ ತೇರ್ಗಡೆ ಹೊಂದಿರಬೇಕು.
ವಯೋಮಿತಿ: ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷಗಳು ತುಂಬಿರತಕ್ಕದ್ದು, ಹಾಗೂ ಈ ಕೆಳಕಂಡ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38ವರ್ಷ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ.
ಅರ್ಜಿ ಶುಲ್ಕ: ಸಾಮಾನ್ಯ ಅರ್ಹತೆ ಮತ್ತು ಇತರೆ ಪ್ರವರ್ಗಗಳು (ಪ್ರವರ್ಗ -2ಎ/2ಬಿ/3ಎ/3ಬಿ) ರೂ.750
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ವಿಕಲ ಚೇತನ ಅಭ್ಯರ್ಥಿಗಳಿಗೆ ರೂ.500 ಅರ್ಜಿ ಶುಲ್ಕ ಪಾವತಿ ಮಾಡಬೇಕಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ; ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ಗೆ ಭೇಟಿ ನೀಡಿ ಅಲ್ಲಿ ಆನ್‌ಲೈನ್ ಮುಖಾಂತರ ಅರ್ಜಿ ಭರ್ತಿ ಮಾಡಿ ಸಲ್ಲಿಸಬೇಕು. ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸಿದ್ದಲ್ಲಿ, ಪ್ರತ್ಯೇಕ ಅರ್ಜಿಯ ಮುಖಾಂತರ ಸಲ್ಲಿಸಬೇಕು. ಆದರೆ ಅಂತಹ ಅಭ್ಯರ್ಥಿಗಳು ಪ್ರತಿ ಹುದ್ದೆಗೆ ಪ್ರತ್ಯೇಕ ಶುಲ್ಕವನ್ನು ಕೂಡಾ ಪಾವತಿ ಮಾಡಬೇಕು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ