ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

Advertisements

ಪೌರಾಡಳಿತ ನಿರ್ದೇಶನಾಲಯದ ವ್ಯಾಪ್ತಿಗೊಳಪಡುವ ಮಹಾನಗರ ಪಾಲಿಕೆಗಳು, ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅಧಿಕಾರಿ/ ನೌಕರರುಗಳು ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ದಾಖಲಿಸುವ ನ್ಯಾಯಾಲಯ ಪ್ರಕರಣಗಳ ನಿರ್ವಹಣೆಗಾಗಿ ಉಪಕಾನೂನು ಅಧಿಕಾರಿ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನಿವೃತ್ತ ಜಿಲ್ಲಾ ನ್ಯಾಯಾಧೀಶರನ್ನು ಕೆಳಕಂಡ ಷರತ್ತುಗಳನ್ವಯ ನೇಮಕ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

1.ಜಿಲ್ಲಾ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿರಬೇಕು.
2.ಸರಕಾರಿ ಕಛೇರಿಗಳಲ್ಲಿ/ ಸಚಿವಾಲಯದಲ್ಲಿ ಕಾನೂನು ಸಲಹೆಗಾರರಾಗಿ ಉತ್ತಮ ಸೇವೆ ಸಲ್ಲಿಸಿದವರನ್ನು ಆದ್ಯತೆಯ ಮೇರೆ ಪರಿಗಣಿಸಲಾಗುವುದು.
3.ಆಯ್ಕೆಯಾದ ನಿವೃತ್ತ ಜಿಲ್ಲಾ ನ್ಯಾಯಾಧೀಶರಿಗೆ ಸರಕಾರದ ಸುತ್ತೋಲೆಗಳನ್ವಯ ನಿಯಮಾನುಸಾರ ಗುತ್ತಿಗೆ ಆಧಾರದ ಮೇಲೆ ಸಂಭಾವನೆ ನಿಗದಿಪಡಿಸಲಾಗುವುದು.
4.ಉಪಕಾನೂನು ಅಧಿಕಾರಿ ಹುದ್ದೆಯ ಆಯ್ಕೆಯಲ್ಲಿ ನಿರ್ದೇಶಕರು, ಪೌರಾಡಳಿತ ನಿರ್ದೇಶನಾಯಲಯರವರ ನಿರ್ಧಾರವೇ ಅಂತಿಮ.

ಸ್ವವಿವರಗಳೊಂದಿಗೆ ಅರ್ಜಿಗಳನ್ನು ಅಂಚೆ ಮೂಲಕವಾಗಲೀ ಅಥವಾ ಖುದ್ದಾಗಲೀ ನಿರ್ದೇಶಕರು, ಪೌರಾಡಳಿತ ನಿರ್ದೇಶಾನಲಯ, 9 ನೇ ಮಹಡಿ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, ಡಾ.ಬಿ.ಆರ್ . ಅಂಬೇಡ್ಕರ್ ವೀಧಿ, ಬೆಂಗಳೂರು-01 ಈ ವಿಳಾಸದಲ್ಲಿ ಸಲ್ಲಿಸತಕ್ಕದ್ದು. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 29-03-2021 ರಂದು ಸಾಯಂಕಾಲ 5.30 ಗಂಟೆಗೆ. ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ 080-22868386

Leave a Comment