ಅಪರ ಸರಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

Advertisements

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಒಂದು ಹುದ್ದೆಯನ್ನು ಕರ್ನಾಟಕ ಕಾನೂನು ಅಧಿಕಾರಿಗಳ ( ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977 ರನ್ವಯ ತುಂಬಲು ಸರಕಾರವು ಉದ್ದೇಶಿಸಿದ್ದು, ಏಳು ವರ್ಷ ವಕೀಲ ವೃತ್ತಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೆಳಗಿನಂತೆ ಸೂಚನೆ ನೀಡಲಾಗಿದೆ.

ಅಭ್ಯರ್ಥಿಯು ಈ ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ ಕನಿಷ್ಠ 7 ವರ್ಷ ಅಥವಾ ಮೇಲ್ಪಟ್ಟು ವಕೀಲ ವೃತ್ತಿಯಲ್ಲಿ ಸೇವೆ ಸಲ್ಲಿಸಿರಬೇಕು. ಹಾಗೂ ಈ ಬಗ್ಗೆ ದೃಢೀಕರಿಸಿದ ದಾಖಲೆಗಳನ್ನು ಸಲ್ಲಿಸುವುದು. ಜನ್ಮ ದಿನಾಂಕದ ಬಗ್ಗೆ ಎಸ್ ಎಸ್ ಎಲ್ ಸಿ ಅಂಕಪಟ್ಟಿಯ ದೃಢೀಕೃತ ದಾಖಲಾತಿ ಸಲ್ಲಿಸುವುದು. ಪಾಸ್ ಪೋರ್ಟ್ ಸೈಜ್ ನ ಎರಡು ಭಾವಚಿತ್ರಗಳನ್ನು ಲಗತ್ತಿಸಬೇಕು. ಅರ್ಜಿಯನ್ನು ನಿಗದಿತ ನಮೂನೆಯಲ್ಲಿಯೇ ಸಲ್ಲಿಸಬೇಕು. ಅರ್ಜಿ ನಮೂನೆಯನ್ನು ಕಚೇರಿ ಸಹಾಯಕರು, ಜಿಲ್ಲಾಧಿಕಾರಿಯವರ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೊಠಡಿ ಸಂಖ್ಯೆ : 104, 1 ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ ದೇವನಹಳ್ಳಿ ತಾಲ್ಲೂಕು ಇಲ್ಲಿಂದ ಪಡೆಯಬಹುದು ಮತ್ತು ಭರ್ತಿ ಮಾಡಿದ ಅರ್ಜಿಯನ್ನು ಇದೇ ವಿಳಾಸಕ್ಕೆ ಕಳುಹಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-08-2021

Leave a Comment