Legislative Assembly Recruitment: ಕರ್ನಾಟಕ ವಿಧಾನ ಸಭೆ ಸಚಿವಾಲಯದಲ್ಲಿ ವಿವಿಧ ವೃಂದಗಳ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 3 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು. ಕನ್ನಡ ವರದಿಗಾರರು, ಆಂಗ್ಲ ವರದಿಗಾರರು ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ಕುರಿತ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-04-2024
ಹುದ್ದೆಯ ಹೆಸರು: ವರದಿಗಾರರು
ಹುದ್ದೆಗಳ ಸಂಖ್ಯೆ:
ಕನ್ನಡ ವರದಿಗಾರರು-02 ಹುದ್ದೆಗಳು
ಆಂಗ್ಲ ವರದಿಗಾರರು- 01 ಹುದ್ದೆ
ವೇತನ ಶ್ರೇಣಿ: ಮೇಲ್ಕಂಡ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.37900-ರೂ.70850 ವೇತನ ನಿಗದಿಪಡಿಸಲಾಗಿದೆ.
ವಿದ್ಯಾರ್ಹತೆ: ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳ ಪ್ರಕಾರ ನೇರ ನೇಮಕಾತಿಗೆ ಅರ್ಹತೆಯನ್ನು ಪಡೆದಿರಬೇಕು. ಹಾಗೂ ವಿದ್ಯಾರ್ಹತೆಯನ್ನು ಹೊಂದಿರತಕ್ಕದ್ದು.
ಕಾನೂನು ರೀತ್ಯಾ ಸ್ಥಾಪಿತವಾದ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.
ಕನ್ನಡ ವರದಿಗಾರರಿಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸಿರುವ ಪ್ರವೀಣ ದರ್ಜೆಯ ಕನ್ನಡ ಶೀಘ್ರಲಿಪಿ ಹಾಗೂ ಪ್ರೌಢ ದರ್ಜೆಯ ಕನ್ನಡ ಬೆರಳಚ್ಚು ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.
ಆಂಗ್ಲ ವರದಿಗಾರರಿಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸಿರುವ ಪ್ರವೀಣ ದರ್ಜೆಯ ಆಂಗ್ಲ ಶೀಘ್ರಲಿಪಿ ಹಾಗೂ ಪ್ರೌಢ ದರ್ಜೆಯ ಆಂಗ್ಲ ಬೆರಳಚ್ಚು ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು
ಹಿಂದಿ ಪ್ರವೀಣ ದರ್ಜೆಯ ಶ್ರೀಘ್ರಲಿಪಿಯಲ್ಲಿ ಉತ್ತೀರ್ಣರಾದವರಿಗೆ ಆದ್ಯತೆ ನೀಡಲಾಗುವುದು.
ವಯೋಮಿತಿ: ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳ ವಯೋಮಿತಿಯು ಕನಿಷ್ಠ 18 ವರ್ಷ ಆಗಿರಬೇಕು. ಉಳಿದಂತೆ ಗರಿಷ್ಠ ವಯೋಮಿತಿಯನ್ನು ಈ ಕೆಳಗೆ ನೀಡಲಾಗಿದೆ.
ಸಾಮಾನ್ಯ ವರ್ಗ-35 ವರ್ಷ, ಪ್ರವರ್ಗ IIಎ, IIಬಿ,IIIಎ ಮತ್ತು IIIಬಿ ಅಭ್ಯರ್ಥಿಗಳಿಗೆ 38 ವರ್ಷ, ಪ.ಜಾ/ಪ.ಪಂ/ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ. ಸಾಮಾನ್ಯ ವರ್ಗದ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ರೂ.500 ಅರ್ಜಿ ಶುಲ್ಕ ಪಾವತಿಸಬೇಕು. ಇಂಡಿಯನ್ ಪೋಸ್ಟಲ್ ಆರ್ಡರ್ ಅನ್ನು ಈ ಅಧಿಸೂಚನೆ ಹೊರಡಿಸಿರುವ ದಿನಾಂಕದಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಿರುವಂತೆ ಖರೀದಿಸಿ.
ನಂತರ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ, ಮೊದಲನೆ ಮಹಡಿ, ವಿಧಾನಸೌಧ, ಬೆಂಗಳೂರು-560001 ಈ ವಿಳಾಸಕ್ಕೆ ಪಾವತಿ ಮಡಬೇಕು.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವುಳ್ಳ ದಾಖಲೆಗಳನ್ನು ಲಗತ್ತಿಸಿ, ಕೊನೆಯ ದಿನಾಂಕ 30-04-2024 ರಂದು ಸಂಜೆ 4 ಗಂಟೆಯ ಒಳಗಾಗಿ ಖುದ್ದಾಗಿ ಅಥವಾ ಅಂಚೆಯ ಮೂಲಕ ತಲುಪಿಸತಕ್ಕದ್ದು.
ಅರ್ಜಿ ಸಲ್ಲಿಸಬೇಕಾದ ವಿಳಾಸ: ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ, ಅಂಚೆ ಪೆಟ್ಟಿಗೆ ಸಂಖ್ಯೆ-5074, ಮೊದಲನೆ ಮಹಡಿ, ವಿಧಾನಸೌಧ, ಬೆಂಗಳೂರು-560001