ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಡಿಜಿಟಲ್ ಗ್ರಂಥಾಲಯ ಮತ್ತು ಒಕ್ಕೂಟದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ : ಗ್ರಂಥಾಲಯ ಟ್ರೈನಿ
ಹುದ್ದೆ ಅವಧಿ : 11 ತಿಂಗಳ ಅವಧಿಗೆ
ವಿದ್ಯಾರ್ಹತೆ : ಈ ಹುದ್ದೆಗಳಿಗೆ 2018 ರ ನಂತರ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಕರ್ನಾಟಕದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.
ವೇತನ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳ ರೂ.15,000/- ಮಾಸಿಕ ಸ್ಟೈಫೆಂಡ್ ನೀಡಲಾಗುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ದಿನಾಂಕ 27-04-2021 ರೊಳಗೆ ಸಲ್ಲಿಸತಕ್ಕದ್ದು.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಲಕೋಟೆ ಮೇಲೆ ‘ಗ್ರಂಥಾಲಯ ಟ್ರೈನಿ’ ಎಂದು ನಮೂದಿಸಿರಬೇಕು.
ಅರ್ಜಿಯನ್ನು ಅಭ್ಯರ್ಥಿಗಳು [email protected] ಇ-ಮೇಲ್ ಗೆ ಸಾಫ್ಟ್ ಕಾಪಿ ಕಳುಹಿಸಬಹುದು. ಅಥವಾ ಈ ಕೆಳಗೆ ನೀಡಲಾಗಿರುವ ವಿಳಾಸಕ್ಕೂ ಸಲ್ಲಿಸಬಹುದು.
ಅಗತ್ಯ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ಸ್ವವಿವರಗಳನ್ನು ಸ್ವಯಂ ದೃಡೀಕೃತ ಹೆಚ್.ಎಸ್.ಸಿ ಯಿಂದ ಪ್ರಾರಂಭವಾಗುವ ಶೈಕ್ಷಣಿಕ ಅರ್ಹತೆಗಳನ್ನು ಹಾಗೂ ಒಂದು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರವನ್ನು 27-04-2021 ರೊಳಗೆ ಸಲ್ಲಿಸತಕ್ಕದ್ದು.
ಅರ್ಜಿಯನ್ನು ಸಲ್ಲಿಸಬೇಕಾದ ವಿಳಾಸ : ನಿರ್ದೇಶಕರು, ಗ್ರಂಥಾಲಯ,ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ,ಕರ್ನಾಟಕ, 4ನೇ ಟಿ ಬ್ಲಾಕ್, ಜಯನಗರ, ಬೆಂಗಳೂರು -560041