Court Jobs: ಮಂಡ್ಯದ ಕೋರ್ಟ್‌ನಲ್ಲಿ 41 ಹುದ್ದೆಗಳು ಖಾಲಿ ಇದೆ; ಈಗಲೇ ಅರ್ಜಿ ಸಲ್ಲಿಸಿ

Advertisements

Mandya District Court Peon Recruitment 2024: ಮಂಡ್ಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು, ಮಂಡ್ಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 41 ಹುದ್ದೆಗಳು ಖಾಲಿ ಇದ್ದು ಆಸಕ್ತರು ಈ ಕೆಳಗೆ ನೀಡಲಾದ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. 41 ಜವಾನರು (ಪೀವನ್‌) ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್‌ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಆರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಹುದ್ದೆಯ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.

ಪ್ರಮುಖ ದಿನಾಂಕಗಳು:
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 03-05-2024
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-06-2024 (11.59 ರಾತ್ರಿ)
ಆನ್‌ಲೈನ್‌ ಮೂಲಕ ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ: 04-06-2024 (ರಾತ್ರಿ 11.59 ರವರೆಗೆ)

ಹುದ್ದೆಯ ಕುರಿತ ವಿವರ ಇಲ್ಲಿದೆ: ಮಂಡ್ಯ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ 41 ಹುದ್ದೆಗಳು ಇದ್ದು, ಜವಾನ ಹುದ್ದೆಗೆ ಭರ್ತಿ ಮಾಡಲಾಗುವುದು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.17 ಸಾವಿರದಿಂದ ರೂ.28950 ರವರೆಗೆ ವೇತನ ಸಿಗಲಿದೆ.

ಶೈಕ್ಷಣಿಕ ಅರ್ಹತೆ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಮಾಡಿರಬೇಕು. ಕನ್ನಡ ಭಾಷೆ ಓದಲು, ಬರೆಯಲು ಬರಬೇಕು.

ವಯೋಮಿತಿ: ಕನಿಷ್ಠ 18 ವರ್ಷ ಹೊಂದಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಸಾಮಾನ್ಯ ವರ್ಗದವರಿಗೆ 35 ವರ್ಷ, ಒಬಿಸಿ ವರ್ಗದವರಿಗೆ 38 ವರ್ಷ, ಎಸ್‌ಸಿ/ಎಸ್‌ಟಿ, ಪ್ರವರ್ಗ-1-40 ವರ್ಷ ಗರಿಷ್ಠ ವಯೋಮಿತಿಯನ್ನು ಮೀರರಬಾರದು.

ಆಯ್ಕೆ ಪ್ರಕ್ರಿಯೆ: ಎಸ್‌ಎಸ್‌ಎಲ್‌ಸಿ ತರಗತಿಯ ಗರಿಷ್ಠ ಅಂಕಗಳ ಆಧಾರದಲ್ಲಿ, ಒಂದು ಹುದ್ದೆಗೆ 10 ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್‌ ಮಾಡಲಾಗುವುದು. ನಂತರ ಸಂದರ್ಶನಕ್ಕೆ ಕರೆದು ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.300, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.150, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ -1 ವಿಶೇಷ ಚೇತನ ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿ ಮಾಡಬೇಕಾಗಿಲ್ಲ.