ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ದ.ಕ.ಜಿಲ್ಲಾಧಿಕಾರಿ ಕಚೇರಿಯ ಜಿಲ್ಲಾ ನಗರಾಭಿವೃದ್ಧಿ ಕೋಶ ವೆಬ್ಸೈಟ್ ಹಾಗೂ ಮಂಗಳೂರು ಮಹಾನಗರಪಾಲಿಕೆಯ ವೆಬ್ಸೈಟ್ ಮೂಲಕ ಸಲ್ಲಿಸಬಹುದಾಗಿದೆ.
ಹುದ್ದೆ : ಪೌರಕಾರ್ಮಿಕರು
ಹುದ್ದೆ ಸಂಖ್ಯೆ : 190
ವಿದ್ಯಾರ್ಹತೆ : ವಿದ್ಯಾರ್ಹತೆ ಅನ್ವಯಿಸುವುದಿಲ್ಲ. ಕನ್ನಡ ಮಾತನಾಡಲು ಗೊತ್ತಿರಬೇಕು. ಪೌರಕಾರ್ಮಿಕ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ಕ್ಷೇಮಾಭಿವೃದ್ಧಿ ದಿನಗೂಲಿ, ಗುತ್ತಿಗೆ, ಹೊರಗುತ್ತಿಗೆ, ಸಮಾನ ಕೆಲಸಕ್ಕೆ ಸಮಾನ ವೇತನ ನೌಕರರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ವಯೋಮಿತಿ : ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದಂದು 18 ವರ್ಷ ಪೂರ್ಣಗೊಂಡಿದ್ದು, ಗರಿಷ್ಠ ವಯೋಮಿತಿ 45 ವರ್ಷ ಮೀರಿರಬಾರದು.
ವೇತನ ಶ್ರೇಣಿ : 17,000- 28,950
ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಅಂಗವಿಕಲರಿಗೆ ರೂ. 100/- , ಇತರರಿಗೆ ರೂ.200/-
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07-10-2021 ರಿಂದ 23-11-2021
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನೋಟಿಫಿಕೇಶನ್ ಕ್ಲಿಕ್ ಮಾಡಿ