ಮಂಗಳೂರು ವಿಶ್ವವಿದ್ಯಾನಿಲಯ ಆವರಣ, ಮಂಗಳಗಂಗೋತ್ರಿ, ಸ್ನಾತಕೋತ್ತರ ಕೇಂದ್ರ, ಚಿಕ್ಕ ಅಳುವಾರದಲ್ಲಿ ಯೋಗ ವಿಜ್ಞಾನ ಮತ್ತು ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರಿನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆ: ಇಂಗ್ಲೀಷ್ ವಿಷಯದಲ್ಲಿ 2020-21 ನೇ ಶೈಕ್ಷಣಿಕ ಅತಿಥಿ ಉಪನ್ಯಾಸಕರ ಅವಶ್ಯಕತೆ ಇದ್ದು ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ : ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ 55% ( ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಠ 50%) ಅಂಕಗಳನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಕೆ ಹೇಗೆ? ಅರ್ಜಿಯನ್ನು ವಿಶ್ವವಿದ್ಯಾನಿಲಯದ ವೆಬ್‌ಸೈಟ್ ನಿಂದ ಪಡೆದು, ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ದಾಖಲೆಗಳ ( SSLC ಮಾರ್ಕ್ಸ್ ಕಾರ್ಡ್, ಪಿಜಿ ಮಾರ್ಕ್ಸ್ ಕಾರ್ಡ್, ಕಾಸ್ಟ್ ಸರ್ಟಿಫಿಕೇಟ್, ಸರ್ವಿಸ್ ಸರ್ಟಿಫಿಕೇಟ್, ಯುಜಿಸಿ ಎನ್.ಇ.ಟಿ/ ಎಸ್.ಎಲ್.ಇ.ಟಿ ಉತ್ತೀರ್ಣತೆ/ ಎಂಫಿಲ್ / ಪಿ.ಹೆಚ್.ಡಿ ಪದವಿ ಪ್ರಮಾಣ ಪತ್ರ ಜೆರಾಕ್ಸ್ ಪ್ರತಿಗಳೊಂದಿಗೆ ಹಾಜರಿರತಕ್ಕದ್ದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-05-2021 ರಂದು ಸಂಜೆ 5.30 ರ ಒಳಗಾಗಿ ಕುಲಸಚಿವರ ಕಚೇರಿಯ [email protected] ಗೆ ಇ- ಮೇಲ್ ಮೂಲಕ ಸಲ್ಲಿಸಬಹುದು
ಆದ್ಯತೆ : ಯುಜಿಸಿ ಎನ್.ಇ.ಟಿ/ಎಸ್.ಎಲ್.ಇ.ಟಿ ಉತ್ತೀರ್ಣತೆ/ ಎಂಫಿಲ್/ ಪಿಹೆಚ್‌ಡಿ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು.
ಅಭ್ಯರ್ಥಿಗಳು ತಮ್ಮ ಇ- ಮೇಲ್ ವಿಳಾಸ ಮತ್ತು ದೂರವಾಣಿ / ಮೊಬೈಲ್ ಸಂಖ್ಯೆಯನ್ನು ಅರ್ಜಿಯಲ್ಲಿ ಕಡ್ಡಾಯವಾಗಿ ನಮೂದಿಸತಕ್ಕದ್ದು.
ಸಂದರ್ಶನದ ದಿನಾಂಕವನ್ನು ವಿಶ್ವವಿದ್ಯಾನಿಲಯದ ವೆಬ್‌ಸೈಟ್ www.mangaloreuniversity.ac.in ನಲ್ಲಿ ಪ್ರಕಟಿಸಲಾಗುವುದು.