ಎಂಸಿಎಲ್ ನಲ್ಲಿ ಹುದ್ದೆಗೆ ಅರ್ಜಿ ಆಹ್ವಾನ: ಇಲ್ಲಿದೆ ಹೆಚ್ಚಿನ ವಿವರ

Advertisements

ಮಹಾನದಿ ಕೋಲ್ ಪೀಲ್ಡ್ಸ್ ಲಿಮಿಟೆಡ್ ನಲ್ಲಿ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 10 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

ಮಹಾನದಿ ಕೋಲ್ ಪೀಲ್ಡ್ಸ್ ಲಿಮಿಟೆಡ್(ಎಂಸಿಎಲ್) ನಲ್ಲಿ ಸಾಮಾನ್ಯ ವೈದ್ಯಕೀಯ ಸಲಹೆಗಾರ (8)ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08-03-2021

ವೇತನ : ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ‌.85,000/- ವೇತನ ನೀಡಲಾಗುವುದು.

ವಿದ್ಯಾರ್ಹತೆ : ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯ ದಿಂದ ಎಂಬಿಬಿಎಸ್ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಅಭ್ಯರ್ಥಿಗಳನ್ನು ಮಾರ್ಚ್ 16 ರಂದು ನಡೆಯುವ ನೇರಸಂದರ್ಶನದಲ್ಲಿ ಆಯ್ಕೆ ಮಾಡಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಮಾರ್ಚ್ 10 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು‌.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ https://www.mahanadicoal.in/

Leave a Comment