ಮೈಸೂರು ಯುನಿವರ್ಸಿಟಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ದಿನಾಂಕ 05, ಮೇ 2021 ರೊಳಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ.
ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸ ಬಹುದು.
ಹುದ್ದೆ : ಜ್ಯೂನಿಯರ್ ರಿಸರ್ಚ್ ಫೆಲೋ, ರಿಸರ್ಚ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ ಸಂಖ್ಯೆ : 02
ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅಭ್ಯರ್ಥಿಗಳು ಎಂ.ಎಸ್ಸಿ ವಿದ್ಯಾರ್ಹತೆ ಯನ್ನು ಹೊಂದಿರಬೇಕು. ಮಾಸಿಕ ರೂ.31,000/- ವೇತನವಿರುತ್ತದೆ. ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಎಂ.ಟೆಕ್, ಪಿಹೆಚ್‌ಡಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಈ ಹುದ್ದೆಗೆ ಮಾಸಿಕ ರೂ. 47,000/- ವೇತನವಿರುತ್ತದೆ.
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಈ ವಿಳಾಸಕ್ಕೆ ದಿನಾಂಕ 05-05-2021 ರೊಳಗೆ ಸ್ಪೀಡ್ ಪೋಸ್ಟ್/ ರಿಜಿಸ್ಟರ್ ಪೋಸ್ಟ್ ಮೂಲಕ ಸಲ್ಲಿಸಬೇಕು.
ವಿಳಾಸ ಈ ರೀತಿ ಇದೆ :
Prof. H. B. Manjunatha, Coordinator, B/RAC Project, Department of Sericulture, University of Mysore, Mysore