ಯುನಿವರ್ಸಿಟಿ ಆಫ್ ಮೈಸೂರುನಲ್ಲಿ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, 08 ಮಾರ್ಚ್2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?: ಆಫ್ ಲೈನ್ ಮೂಲಕ.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 23-02-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-03-2021
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಹುದ್ದೆ ವಿವರ : ಅಭ್ಯರ್ಥಿಗಳನ್ನು ಜೆ.ಆರ್.ಎಫ್, ಪ್ರಾಜೆಕ್ಟ್ ಫೆಲೋ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವೇತನ : ಎಂ.ಎಸ್ಸಿ ಫಿಸಿಕ್ಸ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.14,000/- ರಿಂದ ರೂ.16,000/- ರವರೆಗೆ ವೇತನವಿರುತ್ತದೆ.
ಎಂ.ಎಸ್ಸಿ ಫಿಸಿಕ್ಸ್ ವಿತ್ ಎನ್ ಇಟಿ/ ಜಿಎಟಿಇ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.25,000/- ರಿಂದ ರೂ.28,000/- ರವರೆಗೆ ವೇತನ ನಿಗದಿಪಡಿಸಲಾಗಿದೆ.
ವಯೋಮಿತಿ : ಮೈಸೂರು ಯುನಿವರ್ಸಿಟಿ ಯ ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರಬೇಕು.
ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ/ಬೋರ್ಡ್ ನಿಂದ ಎಂ.ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿ ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ದಿನಾಂಕ 08-03-2021 ರೊಳಗೆ ಸ್ಪೀಡ್ ಪೋಸ್ಟ್ ಅಥವಾ ರಿಜಿಸ್ಟರ್ ಪೋಸ್ಟ್ ಮೂಲಕ ಸಲ್ಲಿಸಬೇಕು.
ಕಚೇರಿ ವಿಳಾಸ ಈ ಕೆಳಗಿನಂತಿವೆ :
Prof.A.P.Gnana Prakash,
Department of studies in Physics,University of Mysore,Manasagangotri, Mysore-570006
ಅಥವಾ gnanaprakash@[email protected] ಗೆ ಮೈಲ್ ಮಾಡಬಹುದು.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ