ಕೋವಿಡ್ -19 ಸಂಬಂಧವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಡಿ ಬರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ, ಮೈಸೂರು ಜಿಲ್ಲೆ ಮೈಸೂರು ಇವರ ಅಧೀನ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಲು ಖಾಲಿ ಇರುವ ಶುಶ್ರೂಷಕರು ಹುದ್ದೆಗಳಿಗೆ ತಾತ್ಕಾಲಿಕವಾಗಿ ದಿನಾಂಕ 30-09-2021 ರವರೆಗೆ ಅಥವಾ ನೇರ ನೇಮಕಾತಿ ಹುದ್ದೆಗಳು ಭರ್ತಿಯಾಗುವವರೆಗೆ ಗುತ್ತಿಗೆ ಆಧಾರದ ಮೇಲೆ ಮೆರಿಟ್ ಕಂ ರೊಸ್ಟರ್ ಆಧಾರದಲ್ಲಿ ನೇರ ಸಂದರ್ಶನದ ಮೂಲಕ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಆಸಕ್ತರು ದಿನಾಂಕ 17-06-2021 ರಂದು ಬೆಳಿಗ್ಗೆ 10.00 ಗಂಟೆಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಎನ್.ಪಿ.ಸಿ. ಆಸ್ಪತ್ರೆ ಆವರಣ, ಮೈಸೂರು ಇಲ್ಲಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹಿಂದೆ ಈ ಉದ್ದೇಶಕ್ಕಾಗಿ ದಿನಾಂಕ 04-06-2021 ರಂದು ಸಂದರ್ಶನಕ್ಕೆ ಹಾಜರಾಗಿದ್ದ ಅಭ್ಯರ್ಥಿಗಳನ್ನು ಈ ಹುದ್ದೆಗೆ ಪರಿಗಣಿಸಲಾಗುವುದರಿಂದ ಈ ಸಂದರ್ಶನಕ್ಕೆ ಹಾಜರಾಗುವಂತಿಲ್ಲ.
ಹುದ್ದೆ : ನರ್ಸಿಂಗ್ ಆಫೀಸರ್
ವಿದ್ಯಾರ್ಹತೆ : ಬಿ.ಎಸ್ಸಿ/ಜಿಎನ್ ಎಂ/ ಡಿಪ್ಲೋಮಾ ನರ್ಸಿಂಗ್
ಹುದ್ದೆ ಸಂಖ್ಯೆ : 13
ವೇತನ : ಅಭ್ಯರ್ಥಿಗಳಿಗೆ ಮಾಸಿಕ ರೂ.25,000/- ವೇತನವಿರುತ್ತದೆ.
ವಯೋಮಿತಿ : ಜನರಲ್ ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 38 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಮೀರಿರಬಾರದು.
ಈ ಮೇಲ್ಕಂಡ ಹುದ್ದೆಗೆ ಆಸಕ್ತಿಯುಳ್ಳ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ತಮ್ಮ ಮೂಲ ಅಂಕಪಟ್ಟಿಗಳು/ ಎಲ್ಲಾ ಪ್ರಮಾಣ ಪತ್ರಗಳೊಂದಿಗೆ ಐಡಿ ಪ್ರೂಫ್ ಮತ್ತು ಅಡ್ರೆಸ್ ಪ್ರೂಫ್ ನೊಂದಿಗೆ ಹಾಗೂ ಇವುಗಳ ಒಂದು ಜೆರಾಕ್ಸ್ ಪ್ರತಿಯೊಂದಿಗೆ ತಿಳಿಸಿರುವ ದಿನಾಂಕದಂದು ಹಾಗೂ ಸಮಯದೊಳಗೆ ಹಾಜರಿರತಕ್ಕದ್ದು.