ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 31, ಮಾರ್ಚ್ ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.
ಕ್ವಿಕ್ ಲುಕ್
ಅರ್ಜಿ ಸಲ್ಲಿಸುವುದು ಹೇಗೆ?: ಆಫ್ ಲೈನ್ ಮೂಲಕ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 15-03-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-03-2021
ಹುದ್ದೆಗಳ ವಿವರ : ಟೆಕ್ನಿಕಲ್ ಅಸಿಸ್ಟೆಂಟ್ಸ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಟೆಕ್ನಿಕಲ್ ಅಸಿಸ್ಟೆಂಟ್ (ಅರಣ್ಯ) -3 ಹಾಗೂ ಟೆಕ್ನಿಕಲ್ ಅಸಿಸ್ಟೆಂಟ್ ( ಅಗ್ರಿಕಲ್ಚರ್) -1
ಹುದ್ದೆ ಸ್ಥಳ: ಮೈಸೂರು-ಕರ್ನಾಟಕ
ಹುದ್ದೆ ಸಂಖ್ಯೆ : 04
ವೇತನ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.24,000/- ವೇತನ ನಿಗದಿಪಡಿಸಲಾಗಿದೆ.
ವಿದ್ಯಾರ್ಹತೆ: ಅಂಗೀಕೃತ ಬೋರ್ಡ್/ಯುನಿವರ್ಸಿಟಿ ಯಿಂದ ಅಭ್ಯರ್ಥಿಗಳು ಬಿ.ಎಸ್ಸಿ, ಎಂಎಸ್ಸಿ ಪಾಸಾಗಿರಬೇಕು.
ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 18 ಹಾಗೂ ಗರಿಷ್ಠ 40 ವಯೋಮಿತಿಯನ್ನು ಮೀರಿರಬಾರದು.
ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ, ಅರ್ಜಿ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.
ವಿಳಾಸ:
Chief Executive Officer, Zilla Panchayat, Mysore – 570005, Karnataka.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ