NABARD : 162 ಹುದ್ದೆಗಳು

Advertisements

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ( NABARD) ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾತ್ರ ಅವಕಾಶವಿದೆ.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 17-07-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07-08-2021

ಹುದ್ದೆ : ಅಸಿಸ್ಟೆಂಟ್ ಮ್ಯಾನೇಜರ್ 148 ಹುದ್ದೆಗಳು
ರಾಜಭಾಷಾ 05 ಹುದ್ದೆಗಳು
ಸೆಕ್ಯುರಿಟಿ ಸರ್ವಿಸ್ 02 ಹುದ್ದೆಗಳು
ಮ್ಯಾನೇಜರ್ ಇನ್ ಗ್ರೇಡ್ ಬಿ 07 ಹುದ್ದೆಗಳು

ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ‌ರೂ. 100/- ಹಾಗೂ ಸಾಮಾನ್ಯ ಹಾಗೂ ಇತರೆ ವರ್ಗಗಳ ಅಭ್ಯರ್ಥಿಗಳಿಗೆ ರೂ.750/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

ವಯೋಮಿತಿ : ಜುಲೈ 1 ಕ್ಕೆ 2021 ಕ್ಕೆ ಅನ್ವಯವಾಗುವಂತೆ 21 ರಿಂದ 30 ವರ್ಷದೊಳಗಿನವರಾಗಿರಬೇಕು. ಸಾಮಾನ್ಯ ಹಾಗೂ ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಹಾಗೂ ಗರಿಷ್ಠ 30 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10ವರ್ಷ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವಿದ್ಯಾರ್ಹತೆ : ಪದವಿ, ಸ್ನಾತಕೋತ್ತರ ಪದವಿ ಅಥವಾ ಹುದ್ದೆಗಳಿಗೆ ‌ಸಂಬಂಧಿಸಿದಂತೆ ಡಿಪ್ಲೋಮಾ ಕೋರ್ಸ್ ಪಡೆದಿರಬೇಕು. ಹೆಚ್ಚಿನ ಮಾಹಿತಿಗಾಗಿ ನೇಮಕಾತಿಯ ಅಧಿಸೂಚನೆಯನ್ನು ವೀಕ್ಷಿಸಬಹುದು.

ಆಯ್ಕೆ ಪ್ರಕ್ರಿಯೆ : ಮೂರು ಹಂತಗಳಲ್ಲಿ ನೇಮಕಾತಿಯು ನಡೆಯಲಿದೆ. ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಅಂತಿಮ ನೇಮಕಾತಿ ನಡೆಯಲಿದೆ.

Leave a Comment