NALCO Recruitment 2024: 277 ಗ್ರಾಜ್ಯುಯೇಟ್‌ ಇಂಜಿನಿಯರ್‌ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ

Advertisements

NALCO Careers: ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ (NALCO), ನವರತ್ನ ಸೆಂಟ್ರಲ್ ಪಿಎಸ್‌ಯು ಮತ್ತು ಏಷ್ಯಾದ ಅತಿದೊಡ್ಡ ಸಂಯೋಜಿತ ಅಲ್ಯೂಮಿನಾ-ಅಲ್ಯೂಮಿನಿಯಂ ಕಾಂಪ್ಲೆಕ್ಸ್‌ಗಳಲ್ಲಿ ಒಂದು. NALCO ಮೆಕ್ಯಾನಿಕಲ್ ವಿಭಾಗಗಳಲ್ಲಿ ಗ್ರಾಜುಯೇಟ್ ಇಂಜಿನಿಯರ್ ಟ್ರೈನಿಗಳಾಗಿ (GET ಗಳು) ಸಂಸ್ಥೆಗೆ ಸೇರಲು ಆಸಕ್ತರಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅಧಿಸೂಚನೆಯ ಪ್ರಕಾರ ಯುವ ಗ್ರಾಜುಯೇಟ್ ಇಂಜಿನಿಯರ್‌ಗಳಿಗೆ ಉದ್ಯೋಗದ ಭರವಸೆಯನ್ನು ನೀಡಿದೆ.

ಒಟ್ಟು 277 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಎಲೆಕ್ಟ್ರಿಕಲ್, ಇನ್ಸ್ಟ್ರುಮೆಂಟೇಶನ್, ಮೆಟಲರ್ಜಿ, ಕೆಮಿಕಲ್ ಮತ್ತು ಕೆಮಿಸ್ಟ್ರಿ ಈ ವಿಭಾಗಗಳಿಗೆ ಅರ್ಜಿ ಆಹ್ವಾನಿಸಿದೆ. ಹುದ್ದೆಯ ಕುರಿತ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ಪ್ರಮುಖ ದಿನಾಂಕಗಳು;
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 04-03-2024
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02-04-2024

ಹುದ್ದೆಯ ಹೆಸರು: ಗ್ರಾಜ್ಯುಯೇಟ್‌ ಇಂಜಿನಿಯರ್‌ ಟ್ರೈನಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಒಟ್ಟು 277 ಹುದ್ದೆಗಳು ಖಾಲಿ ಇದೆ.

ವಿದ್ಯಾರ್ಹತೆ: ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಿವಿಧ ಬ್ರ್ಯಾಂಚ್‌ಗಳಲ್ಲಿ ಇಂಜಿನಿಯರಿಂಗ್‌ ಪದವಿ/ಕೆಮಿಸ್ಟ್ರಿ ವಿಷಯದಲ್ಲಿ ಸ್ನಾತಕೋತ್ತರ ಪದವಿಯಲ್ಲಿ ತೇರ್ಗಡೆ ಹೊದಿರಬೇಕು.

ಯಾವ ಪೋಸ್ಟ್‌ಗೆ ಎಷ್ಟು ಹುದ್ದೆ ಸಂಖ್ಯೆ?
ಮೆಕ್ಯಾನಿಕಲ್‌-127 ಹುದ್ದೆಗಳು
ಎಲೆಕ್ಟ್ರಿಕಲ್‌ -100 ಹುದ್ದೆಗಳು
ಇನ್ಸ್‌ಟ್ರುಮೆಂಟೇಷನ್‌ – 20 ಹುದ್ದೆಗಳು
ಮೆಟಾಲುರ್ಜಿ- 10 ಹುದ್ದೆಗಳು
ಕೆಮಿಕಲ್‌ – 13 ಹುದ್ದೆಗಳು
ಕೆಮಿಸ್ಟ್ರಿ- 7 ಹುದ್ದೆಗಳು

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು. ವರ್ಗಾವಾರು ನಿಯಮದಂತೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಶುಲ್ಕ: ರೂ.500 ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ, ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಡಿ/ಮಾಜಿ ಸೈನಿಕ/ಡಿಪಾರ್ಟ್‌ಮೆಂಟಲ್‌ ಅಭ್ಯರ್ಥಿಗಳು ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ. ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕವೇ ಪಾವತಿ ಮಾಡಬೇಕು.

ಅಭ್ಯರ್ಥಿಗಳು ಅರ್ಜಿಸಲ್ಲಿಸಬೇಕಾದಾಗ ಸಲ್ಲಿಸಬೇಕಾದ ದಾಖಲೆಗಳು ಯಾವುದು?
SSLC ಅಂಕಪಟ್ಟಿ, ಆಧಾರ್‌ಕಾರ್ಡ್‌, ಇಂಜಿನಿಯರಿಂಗ್‌ ಪದವಿ ಪಾಸ್‌ ಸರ್ಟಿಫಿಕೇಟ್‌, ಸಹಿ ಸ್ಕ್ಯಾನ್‌ ಕಾಪಿ, ಜಾತಿ ಪ್ರಮಾಣ ಪತ್ರ, ಇತರೆ ದಾಖಲೆಗಳು.

ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕಗಳ ಆಧಾರದಲ್ಲಿ ಶಾರ್ಟ್‌ ಲಿಸ್ಟ್‌ ಮಾಡಲಾಗುವುದು. ನಂತರ ಸಂದರ್ಶನ, ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್‌ ಕ್ಲಿಕ್‌ ಮಾಡಿ