NCB Recruitment 2024: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಇಲ್ಲಿ ಖಾಲಿ ಇರುವ ಅರ್ಜಿಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 05 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಸೆಕ್ಷನ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗುತ್ತಿದ್ದು, ಈ ಕೆಳಗೆ ನೀಡಿದ ಮಾಹಿತಿಯನ್ನು ಆಧರಿಸಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ಆಯ್ಕೆಯಾದವರಿಗೆ ಭಾರತದಾದ್ಯಂತ ಪೋಸ್ಟಿಂಗ್ ನಡೆಯಲಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ದಿ.27-Jul-2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 28-05-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-07-2024
ಹುದ್ದೆಯ ಕುರಿತ ಮಾಹಿತಿ ಇಲ್ಲಿದೆ;
ಸಂಸ್ಥೆಯ ಹೆಸರು: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಇಲ್ಲಿ ಖಾಲಿ ಇರುವ ಸೆಕ್ಷನ್ ಆಫೀಸರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ ರೂ.44900-142400/- ವೇತನ ದೊರಕಲಿದೆ.
ವಿದ್ಯಾರ್ಹತೆ: NCB ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿಯಲ್ಲಿ ತೇರ್ಗಡೆ ಹೊಂದಿರಬೇಕು.
ವಯೋಮಿತಿ: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 56 ವರ್ಷ ಮೀರಿರಬಾರದು. ಉಳಿದಂತೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.