NCB Recruitment 2024: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ತನ್ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 31 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿದ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಅಖಿಲ ಭಾರತ ಸರ್ಕಾರದಲ್ಲಿ ಪೋಸ್ಟಿಂಗ್ ನಡೆಯಲಿದ್ದು, ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 12-Apr-2024 ರಂದು ಅಥವಾ ಮೊದಲು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು;
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 12-02-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-04-2024
ಹುದ್ದೆಯ ವಿವರ ಇಲ್ಲಿದೆ;
ಹುದ್ದೆಯ ಹೆಸರು ಮತ್ತು ಸಂಖ್ಯೆ: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ತನ್ನಲ್ಲಿ ಖಾಲಿ ಇರುವ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಒಟ್ಟು 31 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅಖಿಲ ಭಾರತ ಸರಕಾರದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು.
ವೇತನ: ಮೇಲೆ ತಿಳಿಸಿದ ಹುದ್ದೆಗೆ ಅಭ್ಯರ್ಥಿಗಳಿಗೆ ಮಾಸಿಕ ರೂ.5200-20200/- ವೇತನವಿರಲಿದೆ.
ಶೈಕ್ಷಣಿಕ ಅರ್ಹತೆ: NCB ನಿಯಮಗಳ ಪ್ರಕಾರ ಶೈಕ್ಷಣಿಕ ಅರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು.
ವಯೋಮಿತಿ: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನೇಮಕಾತಿ ಅಧಿಸೂಚನೆಯ ಪ್ರಕಾರ, ಮೇಲೆ ತಿಳಿಸಿದ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಗರಿಷ್ಠ ವಯಸ್ಸು 12-Apr-2024 ರಂತೆ 56 ವರ್ಷಗಳನ್ನು ಮೀರಿರಬಾರದು. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನಿಯಮಗಳ ಪ್ರಕಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ: ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಚಾಲನಾ ಪರವಾನಗಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಅಭ್ಯರ್ಥಿಗಳು ಈ ಕೆಳಗೆ ನೀಡಲಾದ ವಿಳಾಸಕ್ಕೆ ಕಳುಹಿಸಬೇಕು.
ವಿಳಾಸ ಇಲ್ಲಿದೆ:
Deputy Director (Admn), Narcotics Control Bureau, 2nd Floor, August Kranti Bhawan, Bhikaji Cama Place, New Delhi-110066 ಇಲ್ಲಿದೆ ದಿನಾಂಕ 12-Apr-2024 ರೊಳಗೆ ತಲುಪುವಂತೆ ಕಳುಹಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಸಂಸ್ಥೆಯ ವೆಬ್‌ಸೈಟ್‌ಗೆ ಭೇಟಿ ನೀಡಿ.