Job Alerts: ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗೆ ಅರ್ಜಿ ಆಹ್ವಾನ; ಪದವಿ ಪಾಸಾದವರಿಗೆ ಆದ್ಯತೆ

Advertisements

NCB Recruitment 2024: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 14 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಸಬ್‌ ಇನ್ಸ್‌ಪೆಕ್ಟರ್‌ ಪೋಸ್ಟ್‌ ಗೆ ಆಸಕ್ತಿ ಇರುವ, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅಖಿಲ ಭಾರತ ಸರ್ಕಾರದಲ್ಲಿ ಪೋಸ್ಟಿಂಗ್‌ ನಡೆಯಲಿದೆ. ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗೆ ಅರ್ಜಿ ಸಲ್ಲಿಸಲು ದಿ.16-Jul-2024 ಕೊನೆಯ ದಿನಾಂಕವಾಗಿದ್ದು, ಅಭ್ಯರ್ಥಿಗಳು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

ಪ್ರಮುಖ ದಿನಾಂಕಗಳು;
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; 17-05-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ; 16-07-2024

ಹುದ್ದೆಯ ಕುರಿತ ಹೆಚ್ಚಿನ ವಿವರ ಇಲ್ಲಿದೆ;
ಸಂಸ್ಥೆಯ ಹೆಸರು: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಇಲ್ಲಿ ಖಾಲಿ ಇರುವ ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.9300-34800/- ವೇತನ ದೊರಕಲಿದೆ. ಭಾರತದಾದ್ಯಂತ ಈ ಹುದ್ದೆಗೆ ಪೋಸ್ಟಿಂಗ್‌ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ: ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ತೇರ್ಗಡೆ ಹೊಂದಿರಬೇಕು. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 16-ಜುಲೈ-2024 ರಂತೆ 56 ವರ್ಷಗಳನ್ನು ಮೀರಿರಬಾರದು. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ಅಭ್ಯರ್ಥಿಗಳಿಗೆ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗೆ ನೀಡಲಾದ ವಿಳಾಸಕ್ಕೆ ಕಳುಹಿಸಬೇಕು.
ವಿಳಾಸ ಇಲ್ಲಿದೆ;
Director (Admn.), Narcotics Control Bureau, 2nd Floor, August Kranti Bhawan, Bhikaji Cama Place, New Delhi-110066 ಇಲ್ಲಿಗೆ 16-07-2024 ದಿನಾಂಕದೊಳಗೆ ತಲುಪಬೇಕು.