ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್ (ಎನ್ ಸಿಬಿಎಸ್) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿಗಳನ್ನು ಆನ್ಲೈನ್ ಮೂಲಕ ಮಾತ್ರ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-06-2021
ಹುದ್ದೆ : ಕ್ಲರ್ಕ್
ವಿದ್ಯಾರ್ಹತೆ : ಅಭ್ಯರ್ಥಿಗಳು ಅಂಗೀಕೃತ ಯುನಿವರ್ಸಿಟಿ / ಇನ್ಸ್ಟಿಟ್ಯೂಟ್ ನಿಂದ ಯಾವುದೇ ಪದವಿಯನ್ನು 50% ಅಂಕಗಳೊಂದಿಗೆ ತೇರ್ಗಡೆ ಹೊಂದಿರಬೇಕು. ಕಂಪ್ಯೂಟರ್ ಮತ್ತು ಟೈಪಿಂಗ್ ಜ್ಞಾನ ಇರಬೇಕು. ಕ್ಲೆರಿಕಲ್ ಡ್ಯೂಟಿ ವಿಷಯದಲ್ಲಿ ಒಂದು ವರ್ಷ ಅನುಭವ ಇರಬೇಕು.
ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಗರಿಷ್ಠ 33 ವರ್ಷ ವಯೋಮಿತಿ ಮೀರಿರಬಾರದು. ಇಡ್ಬ್ಲುಎಸ್ ಮತ್ತು ಅನ್ ರಿಸರ್ವ್ಡ್ ಅಭ್ಯರ್ಥಿಗಳಿಗೆ ಗರಿಷ್ಠ 28 ವರ್ಷ ಮೀರಿರಬಾರದು.
ಹುದ್ದೆ ಸಂಖ್ಯೆ : ಪರಿಶಿಷ್ಟ ಜಾತಿ – 02 ಹುದ್ದೆ
ಇಡ್ಬ್ಯುಎಸ್ – 01 ಹುದ್ದೆ
ಅನ್ ರಿಸರ್ವ್ಡ್ – 02 ಹುದ್ದೆ
ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸ್ಕಿಲ್ ಟೆಸ್ಟ್ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಹ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ದಿನಾಂಕ 15-06-2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ