NCBS Jobs: ಎನ್‌ಸಿಬಿಎಸ್‌ನಲ್ಲಿ ಕ್ಲರ್ಕ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ, ಬೆಂಗಳೂರಿನಲ್ಲಿ ಪೋಸ್ಟಿಂಗ್‌; ಈ ಕೂಡಲೇ ಅಪ್ಲೈ ಮಾಡಿ

Advertisements

NCBS Recruitment 2024: ರಾಷ್ಟ್ರೀಯ ಜೈವಿಕ ವಿಜ್ಞಾನ ಕೇಂದ್ರವು (NCBS) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 10 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಕ್ಲರ್ಕ್, ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ಈ ಪೋಸ್ಟಿಂಗ್‌ ನಡೆಯಲಿದ್ದು, 31-Mar-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹುದ್ದೆಯ ಕುರಿತು ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ಪ್ರಮುಖ ದಿನಾಂಕಗಳು:
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 29-03-2024
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-03-2024

ಹುದ್ದೆಯ ಕುರಿತು ಮಾಹಿತಿ ಇಲ್ಲಿದೆ
ಹುದ್ದೆಯ ಹೆಸರು ಮತ್ತು ಸಂಖ್ಯೆ: ಜೈವಿಕ ವಿಜ್ಞಾನಗಳ ರಾಷ್ಟ್ರೀಯ ಕೇಂದ್ರ ಇಲ್ಲಿ ಒಟ್ಟು 10 ಹುದ್ದೆಗಳು ಖಾಲಿ ಇದ್ದು, ಕ್ಲರ್ಕ್‌, ಆಡಳಿತ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿಲಾಗಿದೆ.

ಹುದ್ದೆಯ ವಿವರ:
ಆಡಳಿತ ಸಹಾಯಕ 1 ಹುದ್ದೆ
ಗುಮಾಸ್ತ (ಯುಆರ್) 7 ಹುದ್ದೆಗಳು
ಗುಮಾಸ್ತ (OBC) 2 ಹುದ್ದೆಗಳು
ಒಟ್ಟು 10 ಹುದ್ದೆಗಳು

ಶೈಕ್ಷಣಿಕ ಅರ್ಹತೆ: NCBS ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿ ಪಡೆದಿರಬೇಕು.

ವಯೋಮಿತಿ: ಆಡಳಿತ ಸಹಾಯಕ ಹುದ್ದೆಗಳಿಗೆ 33 ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಗುಮಾಸ್ತ (UR) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 28 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಗುಮಾಸ್ತ (OBC) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 31 ವರ್ಷ ವಯೋಮಿತಿ ಮೀರಿರಬಾರದು.
ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್ ನಾರ್ಮ್ಸ್ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡುವಂತಿಲ್ಲ.

ಆಯ್ಕೆ ಪ್ರಕ್ರಿಯೆ: ಮೇಲಿನ ಹುದ್ದೆಗಳಿಗೆ ಲಿಖಿತ ಪರೀಕ್ಷೆ / ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ವೇತನ: ಆಡಳಿತ ಸಹಾಯಕ ರೂ.35400/-, ಗುಮಾಸ್ತ (UR), ಗುಮಾಸ್ತ (OBC) ಹುದ್ದೆಗಳಿಗೆ ರೂ.21700/- ಮಾಸಿಕ ವೇತನ ನಿಗದಿಪಡಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಸಂಸ್ಥೆಯ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.