ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫಾರ್ಮೆಟಿಕ್ಸ್ ಅಂಡ್ ರಿಸರ್ಚ್ (ಎನ್ ಸಿಡಿಐಆರ್) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಈಗಾಗಲೇ ಆರಂಭವಾಗಿದ್ದು, ದಿನಾಂಕ ಮಾರ್ಚ್ 4 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ. ಹುದ್ದೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಅಭ್ಯರ್ಥಿಗಳು ಈ ಕೆಳಗೆ ನೀಡಲಾಗಿದೆ.
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ : 04-03-2021
ಹುದ್ದೆ ವಿವರ : ಎನ್ ಸಿಡಿಐಆರ್ ನಲ್ಲಿ ರಿಸರ್ಚ್ ಫೆಲೋ-1 ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ/ಬೋರ್ಡ್/ವಿಶ್ವವಿದ್ಯಾಲಯದಿಂದ ಎಂ.ಡಿ,ಎಂ.ಎಸ್,ಡಿಎನ್ ಬಿ, ಎಂ.ಎಸ್ಸಿ, ಪಿಹೆಚ್ ಡಿ ಮತ್ತು ಪೋಸ್ಟ್ ಗ್ರಾಜ್ಯುಯೇಟ್ ವಿದ್ಯಾರ್ಹತೆಯನ್ನು ಹೊಂದಿರಬೇಕು.
ವೇತನ : ರಿಸರ್ಚ್ ಅಸೋಸಿಯೇಟ್ -1 ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.46,9೦೦/- ವೇತವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ : ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ವಯೋಮಿತಿ : ಗರಿಷ್ಠ 4೦ ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಮಹಿಳಾ ಅಭ್ಯರ್ಥಿಗಳಿಗೆ 2 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಅರ್ಜಿ ಸಲ್ಲಿಕೆ : ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಭರ್ತಿ ಮಾಡಿ ಈ ಕೆಳಗಿನ ಈ-ಮೈಲ್ ವಿಳಾಸಕ್ಕೆ ಮಾರ್ಚ್ 4, 2021 ರ ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು.
ಈ-ಮೈಲ್ ಐಡಿ : [email protected]
ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್ ಸೈಟ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ