ಎನ್ ಡಿಆರ್ ಐ ವಿವಿಧ ಹುದ್ದೆಗಳಿಗೆ ನೇಮಕ

Advertisements

ನ್ಯಾಷನಲ್ ಡೈರಿ ರಿಸರ್ಚ್ ಇನ್ಸ್ಟಿಟ್ಯೂಟ್ (ಎನ್ ಡಿ ಆರ್ ಐ) ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 04, ಮಾರ್ಚ್ ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

ಕ್ವಿಕ್ ಲುಕ್
ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಜ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 25-02-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-03-2021(5pm)
ಅರ್ಜಿ ಶುಲ್ಕ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಎನ್ ಡಿಆರ್ ಐ ನಲ್ಲಿರುವ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸುವಂತೆ ಇಲ್ಲ.

ನ್ಯಾಷನಲ್ ಡೈರಿ ರಿಸರ್ಚ್ ಇನ್ಸ್ಟಿಟ್ಯೂಟ್ (ಎನ್ ಡಿ ಆರ್ ಐ) ನಲ್ಲಿ ಎಕ್ಸಿಕ್ಯುಟಿವ್ ಮತ್ತು ಸಿಇಒ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಸಿಇಓ ಹುದ್ದೆಗೆ ಆನ್ಲೈನ್ ಸಂದರ್ಶನ ದಿನಾಂಕ : 05-03-2021

ಬಿಸಿನೆಸ್ ಎಕ್ಸಿಕ್ಯುಟಿವ್ ಆನ್ಲೈನ್ ಸಂದರ್ಶನ ದಿನಾಂಕ : 06-03-2021

ಹುದ್ದೆ ಸಂಖ್ಯೆ :3

ವಿದ್ಯಾರ್ಹತೆ: ಚೀಫ್ ಎಕ್ಸಿಕ್ಯುಟಿವ್ (ಸಿಇಒ) -1 – ಎಂಬಿಎ, ಪೋಸ್ಟ್ ಗ್ರಾಜ್ಯುಯೇಶನ್

ಬ್ಯುಸಿನೆಸ್ ಡೆವಲಪ್ಮೆಂಟ್ ಎಕ್ಸಿಕ್ಯುಟಿವ್( ಡೈರಿ ಆಂಡ್ ಫುಡ್ ಪ್ರೊಸೆಸಿಂಗ್)-1-ಬಿ.ಟೆಕ್

ಬ್ಯುಸಿನೆಸ್ ಡೆವಲಪ್ಮೆಂಟ್ ಎಕ್ಸಿಕ್ಯುಟಿವ್( ಡೈರಿ ಪ್ರೊಡಕ್ಷನ್)-1-ಬಿವಿಎಸ್ ಸಿ ಮತ್ತು ಎ.ಎಚ್

ವಯೋಮಿತಿ: ಚೀಫ್ ಎಕ್ಸಿಕ್ಯುಟಿವ್ ಆಫೀಸರ್ (ಸಿಒಇ) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 50 ವರ್ಷ ವಯಸ್ಸಾಗಿರಬೇಕು.

ಬಿಸ್ಯುನೆಸ್ ಡೆವಲಪ್ಮೆಂಟ್ ಎಕ್ಸಿಕ್ಯುಟಿವ್ ಹುದ್ದೆಗೆ ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ವಯಸ್ಸಾಗಿರಬೇಕು.

ವೇತನ : ಸಿಓಇ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.1,00,000/- ವೇತನವಿರುತ್ತದೆ.

ಬ್ಯುಸಿನೆಸ್ ಡೆವಲಪ್ಮೆಂಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 35,000/- ವೇತನ ನಿಗದಿಪಡಿಸಲಾಗಿದೆ.

ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅರ್ಜಿ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ಇ-ಮೈಲ್ ಗೆ 04-03-2021 ( 5 pm)ರೊಳಗೆ ಇ- ಮೈಲ್ ಮೂಲಕ ಸಲ್ಲಿಸಬೇಕು.

ಇ-ಮೈಲ್ ಐಡಿ – [email protected]

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ

http://www.ndri.res.in/ndri/Design/Index.html

Leave a Comment