NMPA Recruitment 2024: ನವಮಂಗಳೂರು ಬಂದರಿನಲ್ಲಿ ಉದ್ಯೋಗಾವಕಾಶ; 15-03-2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಈ ಕೂಡಲೇ ಅರ್ಜಿ ಸಲ್ಲಿಸಿ

Written By sarkari

Lorem ipsum dolor sit amet consectetur pulvinar ligula augue quis venenatis. 

Advertisements

NMPA Recruitment 2024: ನ್ಯೂ ಮಂಗಳೂರು ಬಂದರು ಪ್ರಾಧಿಕಾರ (NMPA) ದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 01 ಹುದ್ದೆ ಖಾಲಿ ಇದ್ದು, ಆಸಕ್ತರು ಉಪ ನಿರ್ದೇಶಕ (ಸಂಶೋಧನೆ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಸಲ್ಲಿಸಬಹುದು. ಮಂಗಳೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಅಭ್ಯರ್ಥಿಗಳು 15-Mar-2024 ರಂದು ಅಥವಾ ಮೊದಲು ಅರ್ಜಿ ಸಲ್ಲಿಸಬೇಕು. ಹುದ್ದೆಯ ಕುರಿತ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 15-02-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-03-2024

ಹುದ್ದೆ ವಿವರ:
ಹುದ್ದೆ: ಡೆಪ್ಯುಟಿ ಡೈರೆಕ್ಟರ್‌ (ರಿಸರ್ಚ್‌) ಹುದ್ದೆಗೆ ಎನ್‌ಎಂಪಿಟಿಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ವೇತನ: ಉಪನಿರ್ದೇಶಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.50000-160000ರೂ. ವರೆಗೆ ವೇತನ ದೊರಕಲಿದೆ.

ಶೈಕ್ಷಣಿಕ ಅರ್ಹತೆ: NMPA ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯಗಳಿಂದ ಎಲೆಕ್ಟ್ರಾನಿಕ್ಸ್/ಸ್ಟ್ಯಾಟಿಸ್ಟಿಕ್ಸ್/ಗಣಿತದಲ್ಲಿ ಪದವಿಯನ್ನು ಮಾಡಿರಬೇಕು.

ವಯೋಮಿತಿ: ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷ ಮೀರರಬಾರದು. ನ್ಯೂ ಮಂಗಳೂರು ಬಂದರು ಪ್ರಾಧಿಕಾರ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅಭ್ಯರ್ಥಿಗಳು ಅರ್ಜಿಯನ್ನು ಆಫ್‌ಲೈನ್‌ ಮೂಲಕ ಸಲ್ಲಿಸಬೇಕು. ಅರ್ಜಿ ನಮೂನೆಯನ್ನು ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್, ಅಥವಾ ಯಾವುದೇ ಇತರ ಸೇವೆಗಳ ಮೂಲಕ, Manager, New Mangalore Port Authority, Panambur, Mangalore-575010 ಇಲ್ಲಿಗೆ ದಿನಾಂಕ 15-ಮಾರ್ಚ್-2024ರಂದು ಅಥವಾ ಮೊದಲು ಕಳುಹಿಸಬೇಕು.