NHPC Recruitment 2024: ಎನ್‌ಎಚ್‌ಪಿಸಿ ನಿಗಮದಿಂದ 269 ಹುದ್ದೆಗಳ ನೇಮಕ; ಅರ್ಜಿ ಸಲ್ಲಿಕೆಗೆ 26 ಮಾರ್ಚ್‌ ಕೊನೆಯ ದಿನಾಂಕ

Written By sarkari

Lorem ipsum dolor sit amet consectetur pulvinar ligula augue quis venenatis. 

Advertisements

NHPC Recruitment 2024: ನ್ಯಾಷನಲ್ ಹೈಡ್ರೊ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ (NHPC) ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 269 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಟ್ರೈನಿ ಇಂಜಿನಿಯರ್/ಟ್ರೇನಿ ಆಫೀಸರ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಭಾರತ ಸರ್ಕಾರದಲ್ಲಿ ಉದ್ಯೋಗ ಹುಡುಕುವವರಿಗೆ ಇದೊಂದು ಸುವರ್ಣಾವಕಾಶ. ಆಸಕ್ತ ಅಭ್ಯರ್ಥಿಗಳು 26-Mar-2024 ರಂದು ಅಥವಾ ಮೊದಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಪ್ರಮುಖ ದಿನಾಂಕಗಳು;
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; 06-03-2024
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ; 26-03-2024

ಹುದ್ದೆಗಳ ಕುರಿತ ಮಾಹಿತಿ ಇಲ್ಲಿದೆ
ಹುದ್ದೆ ಹೆಸರು; ಟ್ರೈನಿ ಇಂಜಿನಿಯರ್/ಟ್ರೇನಿ ಆಫೀಸರ್‌ ಹುದ್ದೆಗಳನ್ನು ಎನ್‌ಎಚ್‌ಪಿಸಿಯಲ್ಲಿ ಭರ್ತಿ ಮಾಡಲಾಗುತ್ತಿದೆ.

ಹುದ್ದೆ ಹೆಸರು ಮತ್ತು ಹುದ್ದೆ ಸಂಖ್ಯೆ;
ಟ್ರೈನಿ ಇಂಜಿನಿಯರ್ (ಸಿವಿಲ್) 91, ಟ್ರೈನಿ ಇಂಜಿನಿಯರ್ (ಮೆಕ್ಯಾನಿಕಲ್) 74, ಟ್ರೈನಿ ಇಂಜಿನಿಯರ್ (ಎಲೆಕ್ಟ್ರಿಕಲ್) 72, ಟ್ರೈನಿ ಇಂಜಿನಿಯರ್ (ಇ & ಸಿ) 4, ಟ್ರೈನಿ ಇಂಜಿನಿಯರ್/ಅಧಿಕಾರಿ (IT) 19, ತರಬೇತಿ ಅಧಿಕಾರಿ (ಭೂವಿಜ್ಞಾನ) 3, ತರಬೇತಿ ಇಂಜಿನಿಯರ್/ಅಧಿಕಾರಿ (ಪರಿಸರ) 6 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಒಟ್ಟು 269 ಹುದ್ದೆಗಳು ಖಾಲಿ ಇದೆ.

ವೇತನ: ಮೇಲ್ಕಂಡ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.50000-160000/-ರೂ. ವೇತನವಿರಲಿದೆ.

ವಿದ್ಯಾರ್ಹತೆ: ಮೇಲ್ಕಂಡ ಹುದ್ದೆಗಳಿಗೆ ತಕ್ಕಂತೆ ಅಭ್ಯರ್ಥಿಗಳು ವಿದ್ಯಾರ್ಹತೆಯನ್ನು ಹೊಂದಿರಏಕು. ಸಿವಿಲ್‌ ಇಂಜಿನಿಯರಿಂಗ್‌/ಟೆಕ್ನಾಲಜಿ/ಮೆಕ್ಯಾನಿಕಲ್‌ ಇಂಜಿನಿಯರಿಂಗ್‌/ಎಲೆಕ್ಟ್ರಿಕಲ್‌ ಇಂಜಿನಿಯರಿಂಗ್‌, ಕಮ್ಯುನಿಕೇಷನ್‌ ಇಂಜಿನಿಯರಿಂಗ್‌,ಡಿಗ್ರಿ, ಎಂಸಿಎ,ಎಂ.ಎಸ್ಸಿ ಇನ್‌ ಜಿಯೋಲಾಜಿ/ಎನ್‌ವೈರ್‌ಮೆಂಟಲ್‌ ಇಂಜಿನಿಯರಿಂಗ್‌ ಪದವಿಯನ್ನು ಹೊಂದಿರಬೇಕು.

ವಯೋಮಿತಿ: ನ್ಯಾಷನಲ್ ಹೈಡ್ರೋ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 30 ವರ್ಷಗಳನ್ನು ಮೀರಿರಬಾರದು. ಉಳಿದ ಹಾಗೆ, OBC (NCL) ಅಭ್ಯರ್ಥಿಳಿಗೆ 03 ವರ್ಷ, SC/ST ಅಭ್ಯರ್ಥಿಗಳಿಗೆ 05 ವರ್ಷ, PwBD (ಸಾಮಾನ್ಯ) ಅಭ್ಯರ್ಥಿಗಳಿಗೆ 10 ವರ್ಷ, PwBD [OBC (NCL)] ಅಭ್ಯರ್ಥಿಗಳಿಗೆ 13 ವರ್ಷ, PwBD (SC/ST) ಅಭ್ಯರ್ಥಿಗಳಿಗೆ 15 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಅರ್ಜಿ ಶುಲ್ಕ: SC/ST/ಮಹಿಳೆಯರು/ಮಾಜಿ ಸೈನಿಕರು/PwBD ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. UR/EWS/OBC (NCL) ಅಭ್ಯರ್ಥಿಗಳಿಗೆ ರೂ.708/- ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ. ಅರ್ಜಿ ಶುಲ್ಕ ಪಾವತಿಯನ್ನು ಆನ್‌ಲೈನ್‌ ಮೂಲಕ ಪಾವತಿ ಮಾಡಲು ಸೂಚಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ಗೇಟ್ 2023 ಅಂಕಗಳು, ಗುಂಪು ಚರ್ಚೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು, ಹುದ್ದೆಯ ನೋಟಿಫಿಕೇಶನ್‌ಗೆ ಕ್ಲಿಕ್‌ ಮಾಡಿ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ