NIA Recruitment 2024: ಎನ್‌ಐಎ ಇಂದ 10 ಹುದ್ದೆಗಳಿಗೆ ಅರ್ಜಿ ಆಹ್ವಾನ

Advertisements

NIA Recruitment 2024: ರಾಷ್ಟ್ರೀಯ ತನಿಖಾ ಸಂಸ್ಥೆ (NIA) ತಮ್ಮಲ್ಲಿ ಖಾಲಿ ಇರುವ ವಿವಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 10 ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ವೆಸ್ಟಿಗೇಶನ್ ಎಕ್ಸ್‌ಪರ್ಟ್ (ಸಲಹೆಗಾರ) ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಖಿಲ ಭಾರತ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 07-ಮೇ-2024 ರಂದು ವಾಕ್-ಇನ್-ಇಂಟರ್ವ್ಯೂಗೆ (ನೇರ ಸಂದರ್ಶನ) ಹಾಜರಾಗಲು ಸೂಚಿಸಲಾಗಿದೆ.

ಪ್ರಮುಖ ದಿನಾಂಕಗಳು;
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 08-04-2024
ವಾಕ್-ಇನ್ ಸಂದರ್ಶನದ ದಿನಾಂಕ: 06ನೇ ಮತ್ತು 07ನೇ ಮೇ 2024

ಹುದ್ದೆಯ ವಿವರ ಇಲ್ಲಿದೆ;
ಸಂಸ್ಥೆಯ ಹೆಸರು; ರಾಷ್ಟ್ರೀಯ ತನಿಖಾ ಸಂಸ್ಥೆ ಅಖಿಲ ಭಾರತದಲ್ಲಿ ಖಾಲಿ ಇರುವ ತನಿಖಾ ತಜ್ಞಾ (ಸಲಹೆಗಾರ) ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 10 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಎನ್‌ಐಎ ನಿಯಮಗಳ ಪ್ರಕಾರ ವೇತನ ನೀಡಲಾಗುವುದು.

ವಿದ್ಯಾರ್ಹತೆ: ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿ ತೇರ್ಗಡೆ ಹೊಂದಿರುವವರು ಅರ್ಜಿ ಸಲ್ಲಿಸಬೇಕು.

ವಯೋಮಿತಿ: ಮೇಲ್ಕಂಡ ಹುದ್ದೆಗಳಿಗೆ ಅಭ್ಯರ್ಥಿಯ ವಯೋಮಿತಿಯು 65 ವರ್ಷಕ್ಕಿಂತ ಕಡಿಮೆ ಇರಬೇಕು. ರಾಷ್ಟ್ರೀಯ ತನಿಖಾ ಸಂಸ್ಥೆಯ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಪಡೆದುಕೊಳ್ಳಬಹುದು.