NIFT : ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಗೆ ಆದ್ಯತೆ

Advertisements

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾ ಟೆಕ್ನಾಲಜಿ ( ಎ‌ನ್ಐಎಫ್ ಟಿ) ಯಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ತನ್ನ ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆ : ಸಹಾಯಕ ಪ್ರಾಧ್ಯಾಪಕ

ಹುದ್ದೆ ಸಂಖ್ಯೆ : 190

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 08-12-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 31, 2022 ಸಂಜೆ‌ 5.30 ರೊಳಗೆ.

ವಿದ್ಯಾರ್ಹತೆ : ನಿಫ್ಟ್ ನಲ್ಲಿ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ಅಥವಾ ಪಿಹೆಚ್ ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ : ಜನವರಿ 31, 2022 ರ ಅನ್ವಯ ಗರಿಷ್ಠ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು‌. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100/- ರೂ. ವೇತನವನ್ನು ನಿಗದಿಪಡಿಸಲಾಗಿದೆ.

ಆಯ್ಕೆ ಪ್ರಕ್ರಿಯೆ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 1,180/- ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ ಹೇಗೆ ?

ಆನ್ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಮಾಹಿತಿಯನ್ನು ಭರ್ತಿ ಮಾಡಬೇಕು. ಆನ್ಲೈನ್ ಅರ್ಜಿಯನ್ನು ಸಲ್ಲಿಸಿದ ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಫೆಬ್ರವರಿ 15, 2022 ರೊಳಗೆ ಅರ್ಜಿಯನ್ನು ತಲುಪಿಸಬಹುದು.

ಕಚೇರಿ ವಿಳಾಸ : Office of Registrar, Head Office, NIFT Campus, Hauz Khas, New Delhi – 110016

ಹೆಚ್ಚಿನ ಮಾಹಿತಿಗಾಗಿ ಈ ನೋಟಿಫಿಕೇಶನ್ ಕ್ಲಿಕ್ ಮಾಡಿ.

Leave a Comment