NIT Karnataka Recruitment 2024: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (NIT) ಕರ್ನಾಟಕ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 02 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಿದ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಎನ್‌ಐಟಿಯಲ್ಲಿ ಖಾಲಿ ಇರುವ ಜೂನಿಯರ್ ರಿಸರ್ಚ್ ಫೆಲೋ (ಜೆಆರ್‌ಎಫ್) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಮೇಲ್ಕಂಡ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸುರತ್ಕಲ್ – ಮಂಗಳೂರು ಇಲ್ಲಿ ಪೋಸ್ಟಿಂಗ್ ಮಾಡಲಿದ್ದು, 27-ಮೇ-2024 ಕೊನೆಯ ದಿನಾಂಕವಾಗಿದ್ದು, ಇದರ ಮೊದಲು ಅಭ್ಯರ್ಥಿಗಳು ಇ-ಮೇಲ್ ಮಾಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಪ್ರಮುಖ ದಿನಾಂಕಗಳು;
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 13-05-2024
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 27-ಮೇ-2024
ಹುದ್ದೆಯ ಕುರಿತ ವಿವರಗಳು;
ಹುದ್ದೆಯ ಹೆಸರು ಮತ್ತು ಇತರ ವಿವರ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NIT ಕರ್ನಾಟಕ) ಇಲ್ಲಿ 2 ಜೂನಿಯರ್ ರಿಸರ್ಚ್ ಫೆಲೋ (JRF) ಹುದ್ದೆ ಖಾಲಿ ಇದ್ದು, ಸುರತ್ಕಲ್ ನಲ್ಲಿ ಪೋಸ್ಟಿಂಗ್ ನಡೆಯಲಿದೆ. ಈ ಹುದ್ದೆಗೆ ಆಯ್ಕೆಯಾದವರಿಗೆ ರೂ.43660/- ಮಾಸಿಕ ವೇತನ ಇರಲಿದೆ.
ವಿದ್ಯಾರ್ಹತೆ: NIT ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ B.E ಅಥವಾ B.Tech ತೇರ್ಗಡೆ ಹೊಂದಿರಬೇಕು.
ವಯೋಮಿತಿ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು NIT ಕರ್ನಾಟಕ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಮೀರಿರಬಾರದು. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನಾರ್ಮ್ಸ್ ಪ್ರಕಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ: ಮೇಲ್ಕಂಡ ಹುದ್ದೆಗೆ ಅಭ್ಯರ್ಥಿಗಳನ್ನು ಅರ್ಹತೆ, ಅನುಭವ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ? ಅಭ್ಯರ್ಥಿಗಳು ಇ-ಮೇಲ್ ಐಡಿ ಮೂಲಕ ಅರ್ಜಿ ಸಲ್ಲಿಸಬೇಕು. [email protected] ಈ ಮೇಲ್ ಐಡಿಗೆ ಅರ್ಜಿ ಸಲ್ಲಿಸಬೇಕಿದ್ದು, ದಿನಾಂಕ 27-ಮೇ-2024 ರಂದು ಅಥವಾ ಮೊದಲು ಎಲ್ಲಾ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅರ್ಜಿ ಸಲ್ಲಿಸಬೇಕು.
ಅಭ್ಯರ್ಥಿಗಳನು ಸಂಸ್ಥೆಯ ಅಧಿಕೃತ ವೆಬ್‌ಸೈಟ್ nitk.ac.in ಮೂಲಕ ಹುದ್ದೆಯ ಹೆಚ್ಚಿನ ವಿವರಗಳನ್ನು ತಿಳಿದುಕೊಳ್ಳಬಹುದು.