NMPA Recruitment 2024: ನವ ಮಂಗಳೂರು ಬಂದರು ಪ್ರಾಧಿಕಾರ (ಎನ್‌ಎಂಪಿಎ) ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಎನ್‌ಎಂಪಿಎ ತನ್ನ ಅಧಿಕೃತ ಅಧಿಸೂಚನೆಯ ಮೂಲಕ ಪೈಲಟ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಮಂಗಳೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವವರಿಗೆ ಇದೊಂದು ಸುವರ್ಣಾವಕಾಶ. ಆಸಕ್ತ ಅಭ್ಯರ್ಥಿಗಳು 31-ಮೇ-2024 ರಂದು ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಪ್ರಮುಖ ದಿನಾಂಕಗಳು;
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 27-05-2024
ನೇರ ಸಂದರ್ಶನದ ದಿನಾಂಕ; 31-05-2024
ಹುದ್ದೆಯ ಕುರಿತು ಹೆಚ್ಚಿನ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ;
ಸಂಸ್ಥೆಯ ಹೆಸರು: ನವ ಮಂಗಳೂರು ಬಂದರು ಪ್ರಾಧಿಕಾರ (NMPA) ದಲ್ಲಿ ಖಾಲಿ ಇರುವ ಪೈಲಟ್ ಹುದ್ದೆಗೆ ಅರ್ಜಿ ಅಹ್ವಾನಿಸಲಾಗಿದ್ದು, ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ ರೂ. 75,000 – 2,18,750/- ದೊರಕಲಿದೆ.
ವಿದ್ಯಾರ್ಹತೆ: NMPA ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ ತೇರ್ಗಡೆ ಹೊಂದಿರಬೇಕು.
ವಯೋಮಿತಿ: ಪೈಲಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಗರಿಷ್ಠ ವಯಸ್ಸು 55 ವರ್ಷ ಮೀರಿರಬಾರದು. ನವ ಮಂಗಳೂರು ಬಂದರು ಪ್ರಾಧಿಕಾರದ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗೆ ತಿಳಿಸಿದ ವಿಳಾಸಕ್ಕೆ ತಮ್ಮ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ವಿಳಾಸ ಇಲ್ಲಿದೆ;
Chairperson, New Mangalore Port Authority at Panambur, Mangalore, Karnataka – 575010 ದಿ. 31-May-2024 ರಂದು ನೇರ ಸಂದರ್ಶನವಿರಲಿದೆ.