ಎನ್ ಪಿಸಿಐಎಲ್ ನಲ್ಲಿ 200 ಹುದ್ದೆಗಳಿಗೆ ಅರ್ಜಿ ಆಹ್ವಾನ

Advertisements

ನ್ಯೂಕ್ಲಿಯರ್ ಪವರ್ ಕಾರ್ಪೋರೇಷನ್ ಆಫ್ ಇಂಡಿಯಾ (ಎನ್ ಪಿಸಿಐಎಲ್) ನಲ್ಲಿ    ಖಾಲಿ ಇರುವ ವಿವಿಧ 200 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ‌ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು 23- 02-2021ರಂದು ಆರಂಭವಾಗಲಿದ್ದು, 09 ಮಾರ್ಚ್ 2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ. ಹುದ್ದೆಗಳ ವಿವರ, ವಿದ್ಯಾರ್ಹತೆ, ನೇಮಕಾತಿ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

ಎಕ್ಸಿಕ್ಯುಟಿವ್ ಟ್ರೈನಿಂಗ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ‌.55,000/- ವೇತನ ನಿಗದಿಯಾಗಿದೆ.

ವಿದ್ಯಾರ್ಹತೆ: ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ/ಬೋರ್ಡ್ ನಿಂದ ಬಿ.ಎಸ್ಸಿ/ಬಿ.ಇ/ಬಿ.ಟೆಕ್,ಎಂ.ಟೆಕ್, ಪಿ.ಎಚ್.ಡಿ ವಿದ್ಯಾರ್ಹತೆಯನ್ನು ಪಡೆದಿರಬೇಕು.

ವಯೋಮಿತಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 41 ವಯೋಮಿತಿ ಹೊಂದಿರಬೇಕು. (02-04-2020 ರ ಅನ್ವಯದಂತೆ)
ಒಬಿಸಿ,2ಎ,2ಬಿ,3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ,ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಪಿಡ್ಬ್ಯು ಡಿ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಅರ್ಜಿ ಶುಲ್ಕ: ಅರ್ಜಿ ಸಲ್ಲಿಸಲು 500 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆನ್ಲೈನ್ ಪಾವತಿ ವಿಧಾನದ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬಹುದು.
ಸಾಮಾನ್ಯ,ಇಡ್ಬ್ಯುಎಸ್, ಇತರೆ ಹಿಂದುಳಿದ ವರ್ಗದ ಪುರುಷ ಅಭ್ಯರ್ಥಿಗಳಿಗೆ ರೂ.500, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಪಿಡ್ಬ್ಯು ಬಿಡಿ, ಎಕ್ಸ್ ಸರ್ವಿಸ್ ಮೆನ್ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ನೇರ ಸಂದರ್ಶನದ ಮೂಲಕ ನಡೆಯುತ್ತದೆ.

ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 23-02-2021

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09-03-2021

ಅಧಿಕೃತ ವೆಬ್ ಸೈಟ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Leave a Comment