ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷ್ ಲಿಮಿಟೆಡ್ (ಎನ್‌ಟಿಪಿಸಿ) ಖಾಲಿಯಿರುವ ಹದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದು ಅರ್ಹ ಇಂಜಿನಿಯರ್ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.
ಹುದ್ದೆ : ಇಂಜಿನಿಯರಿಂಗ್ ಎಕ್ಸಿಕ್ಯೂಟಿವ್ ಟ್ರೈನಿ( ಮಹಿಳಾ) ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.
ಆನ್‌ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 16-04-2021
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06-05-2021
ಹುದ್ದೆಗಳ ವಿವರ : ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್ ಲಿ.ಖಾಲಿ ಇರುವ 50 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಖಾಲಿ ಇರುವ ಹುದ್ದೆಗಳ ಪೈಕಿ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ – 22 ಹುದ್ದೆಗಳು ಖಾಲಿ ಇವೆ.
ಮೆಕ್ಯಾನಿಕಲ್ ಇಂಜಿನಿಯರಿಂಗ್- 14 ಹುದ್ದೆಗಳು ಖಾಲಿ ಇದ್ದರೆ, ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಹಾಗೂ
ಇನ್ಸ್ಟ್ರುಮೆಂಟೇಶನ್ ಇಂಜಿನಿಯರಿಂಗ್ ನಲ್ಲಿ- 14 ಹುದ್ದೆಗಳಿವೆ. ಈ ಹುದ್ದೆಗಳಿಗೆ ಮಹಿಳಾ ಗ್ರಾಜ್ಯುಯೇಟ್ ಇಂಜಿನಿಯರಿಯರ್ಸ್ ನಿಂದ ಅರ್ಜಿಯನ್ನು ಆಹ್ವಾನಿಸಿದೆ.
ವಯೋಮಿತಿ : ಜನರಲ್/ಇಡಬ್ಲ್ಯುಎಸ್ ಅಭ್ಯರ್ಥಿಗಳಿಗೆ 27 ವರ್ಷ ಮೀರಿರಬಾರದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಒಬಿಸಿ(ಎನ್‌ಸಿಎಲ್) ಪಿಡಬ್ಲ್ಯುಡಿ/ಎಕ್ಸ್ ಸರ್ವಿಸ್‌ಮ್ಯಾನ್ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.
ವಿದ್ಯಾರ್ಹತೆ : ಹುದ್ದೆಗಳಿಗನುಸಾರವಾಗಿ ಅಭ್ಯರ್ಥಿಗಳು ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಮತ್ತು ಇನ್ಸ್ಟ್ರುಮೆಂಟೇಶನ್ ಇಂಜಿನಿಯರಿಂಗ್ ಮಾಡಿರಬೇಕು.
ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ.
ನೋಟಿಫಿಕೇಶನ್‌ಗಾಗಿ ಈ ಲಿಂಕ್ ಕ್ಲಿಕ್ ಮಾಡಿ