ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್ ಲಿ. ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸಲಿದೆ. ಹೆಚ್ಚಿನ ವಿವರಗಳನ್ನು ಈ ಕೆಳಗೆ ನೀಡಲಾಗಿದೆ.
ಒಟ್ಟು ಹುದ್ದೆ : 35
ಹುದ್ದೆ ವಿವರ : ಖಾಲಿ ಇರುವ 35 ಹುದ್ದೆಗಳ ಪೈಕಿ, 25 ಎಕ್ಸಿಕ್ಯೂಟಿವ್ ಸೇಫ್ಟಿ ಹುದ್ದೆಗಳು, 8 ಐಟಿ ಡೇಟಾ ಮತ್ತು ಡೇಟಾ ರಿಕವರಿ ಎಕ್ಸಿಕ್ಯೂಟಿವ್ ಹುದ್ದೆಗಳು ಖಾಲಿ ಇವೆ.
ಈ ನೇಮಕಾತಿ ಪ್ರಕ್ರಿಯೆಯಲ್ಲಿ ಕಾರ್ಯನಿರ್ವಾಹಕ (ಸುರಕ್ಷತೆ), ಕಾರ್ಯನಿರ್ವಾಹಕ (ಐಟಿ ಡಾಟಾ ಕೇಂದ್ರ ಮತ್ತು ಡೇಟಾ ರಿಕವರಿ), ಹಿರಿಯ ಕಾರ್ಯನಿರ್ವಾಹಕ (ಸೌರ) ಮತ್ತು ತಜ್ಞ (ಸೌರ) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್ ಅಧಿಕೃತವಾಗಿ ಅಧಿಸೂಚನೆಯಲ್ಲಿ ಪ್ರಕಟಿಸಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಲಾಗಿನ್ ಆಗಿ, ಎಪ್ರಿಲ್ 15 ರೊಳಗೆ ಅರ್ಹತೆ ಬಗ್ಗೆ ಪರಿಶೀಲಿಸಿ ಅರ್ಜಿ ಸಲ್ಲಿಸಬಹುದು.
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್ ಲಿ.(ಎನ್‌ಟಿಜಿಸಿ)ಇಲ್ಲಿ ಆಯ್ಕೆ ಮಾಡಿಕೊಳ್ಳುವ ಹುದ್ದೆಗಳು ಮೂರು ವರ್ಷಗಳ ಕಾಂಟ್ರಾಕ್ಟ್ ಅವಧಿಯಾದ್ದಾಗಿದೆ.
ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 71,000/-ರೂ. ಸಂಬಳ ನಿಗದಿಯಾಗಿರುತ್ತದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತೀಯ ನಾಗರಿಕರಾಗಿರಬೇಕು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತ ಸರಕಾರದಿಂದ ಮಾನ್ಯತೆ ಪಡೆದ ಮತ್ತು ಅಂಗೀಕರಿಸಲ್ಪಟ್ಟ ವಿಶ್ವವಿದ್ಯಾಲಯಗಳು/ ಸಂಸ್ಥೆಗಳಿಂದ ಅಗತ್ಯವಾದ ಅರ್ಹತೆಗಳನ್ನು ಹೊಂದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ದಾಖಲೆಗಳನ್ನು ಅಂಚೆ ಮೂಲಕ ಕಳುಹಿಸುವ ಅಗತ್ಯವಿರುವುದಿಲ್ಲ. ಯಾವುದೇ ಕೋಟಾದಡಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅದಕ್ಕೆ ಅಗತ್ಯವಾದ ಪ್ರಮಾಣಪತ್ರಗಳನ್ನು ಒದಗಿಸಬೇಕು. ಪ್ರತಿ ಹುದ್ದೆಯ ಅವಶ್ಯಕತೆಗಳು ವಿಭಿನ್ನವಾಗಿರುತ್ತದೆ.
ಅರ್ಜಿ ಶುಲ್ಕ : ಸಾಮಾನ್ಯ ವರ್ಗ, ಇಡಬ್ಲ್ಯೂಎಸ್ ಅಥವಾ ಒಬಿಸಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ರೂ. 300 ಅರ್ಜಿ ಶುಲ್ಕವನ್ನು ಪಾವತಿಸಬೇಕು.( ಈ ಶುಲ್ಕ ಮರುಪಾವತಿಸಲಾಗುವುದಿಲ್ಲ)
ಬೇರೆ ಯಾವುದೇ ವರ್ಗದ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ನೋಂದಣಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ. ಅಭ್ಯರ್ಥಿಗಳು ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ಪಾವತಿ ಮಾಡಬಹುದು. ಶುಲ್ಕ ಪಾವತಿಸಿದ ನಂತರ, ಅಭ್ಯರ್ಥಿಗಳು ಭಾವಚಿತ್ರ, ಶುಲ್ಕ ರಸೀದಿ, ಸಹಿ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಯನ್ನು ಸಹ ಅಪಲೋಡ್ ಮಾಡಬೇಕಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ ಲಿಂಕ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ