ನ್ಯಾಷನಲ್ ಥರ್ಮಲ್ ಪವರ್ ಕೋರ್ಪರೇಷನ್ ಲಿಮಿಟೆಡ್ ( ಎನ್ ಟಿಪಿಸಿ) ನಲ್ಲಿ 230 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ದಿನಾಂಕ 24-02-2021 ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು 10 ಮಾರ್ಚ್ 2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 24-02-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-03-2021ಎನ್ ಟಿಪಿಸಿನಲ್ಲಿರುವ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ.
ಹುದ್ದೆಗಳ ವಿವರ : ಅಸಿಸ್ಟೆಂಟ್ ಇಂಜಿನಿಯರ್ – 200
ಅಸಿಸ್ಟೆಂಟ್ ಕೆಮಿಸ್ಟ್ – 30
ಅರ್ಜಿ ಶುಲ್ಕ: ಅರ್ಜಿ ಸಲ್ಲಿಸಲು ಸಾಮಾನ್ಯ,ಇತರೆ ಹಿಂದುಳಿದ ವರ್ಗ, ಇಡ್ಬ್ಯುಎಸ್ ಅಭ್ಯರ್ಥಿಗಳಿಗೆ 300ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಪಿಡ್ಬ್ಯು ಬಿಡಿ, ಎಕ್ಸ್ ಸರ್ವಿಸ್ ಮ್ಯಾನ್ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆನ್ಲೈನ್ ಪಾವತಿ ವಿಧಾನದ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬಹುದು.
ವಯೋಮಿತಿ: ಅಭ್ಯರ್ಥಿಗಳಿಗೆ ಗರಿಷ್ಠ 30 ವಯೋಮಿತಿ ಉಳ್ಳವರಾಗಿರಬೇಕು. ಇತರೆ ಹಿಂದುಳಿದ ವರ್ಗ,2A,2B,3A,3B ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 05 ವರ್ಷ, ಪಿಡ್ಬ್ಯುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಆನ್ಲೈನ್ ಅಪ್ಲಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ