NTPC Recruitment 2024: ಅಸಿಸ್ಟೆಂಟ್‌ ಮ್ಯಾನೇಜರ್‌ಗಳ ನೇಮಕಾತಿ-ಮಾಸಿಕ ಭರ್ಜರಿ ಸಂಬಳ, ಆಸಕ್ತರು ಈ ಕೂಡಲೇ ಅಪ್ಲೈ ಮಾಡಿ

Advertisements

NTPC Recruitment 2024: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 20 ಅಸಿಸ್ಟೆಂಟ್‌ ಮ್ಯಾನೇಜರ್‌ (ಸುರಕ್ಷತೆ) ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಅಖಿಲ ಭಾರತ ಸರ್ಕಾರದಲ್ಲಿ ವೃತ್ತಿ ಮಾಡಲು ಇಚ್ಛಿಸುವ ಅಭ್ಯರ್ಥಿಗಳು ಈ ಅವಕಾಶವನ್ನು ತಮ್ಮದಾಗಿಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 08-Mar-2024 ರಂದು ಅಥವಾ ಮೊದಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು;
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 23-02-2024
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-03-2024

ಹುದ್ದೆಗಳ ವಿವರಗಳನ್ನು ಇಲ್ಲಿ ನೀಡಲಾಗಿದೆ;
ಸಂಸ್ಥೆಯ ಹೆಸರು: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)
ಒಟ್ಟು ಹುದ್ದೆಗಳ ಸಂಖ್ಯೆ: 20
ಹುದ್ದೆಯ ಹೆಸರು: ಅಸಿಸ್ಟೆಂಟ್‌ ಮ್ಯಾನೇಜರ್‌ (ಸುರಕ್ಷತೆ)

ಸಂಬಳ: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.60000-180000/- ವೇತನ ಸಿಗಲಿದೆ.

ಶೈಕ್ಷಣಿಕ ಅರ್ಹತೆ: ಮೇಲೆ ತಿಳಿಸಿದ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯಗಳಿಂದ ಇಂಜಿನಿಯರಿಂಗ್, ಡಿಪ್ಲೊಮಾ, ಕೈಗಾರಿಕಾ ಸುರಕ್ಷತೆಯಲ್ಲಿ ಸ್ನಾತಕೋತ್ತರ ಪದವಿಯನ್ನು ಮಾಡಿರಬೇಕು.

ವಯೋಮಿತಿ: ನೇಮಕಾತಿ ಅಧಿಸೂಚನೆಯಲ್ಲಿ ನೀಡಲಾಗಿರುವ ಪ್ರಕಾರ, ಅಭ್ಯರ್ಥಿಯು ಗರಿಷ್ಠ ವಯಸ್ಸು 40 ವರ್ಷಗಳನ್ನು ಮೀರಿರಬಾರದು. OBC ಅಭ್ಯರ್ಥಿಗಳಿಗೆ 03 ವರ್ಷ, SC/ST ಅಭ್ಯರ್ಥಿಗಳಿಗೆ 05 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಯಮಾನುಸಾರ ನೀಡಲಾಗಿದೆ.

ಅರ್ಜಿ ಶುಲ್ಕ:
SC/ST/XSM/ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡುವಂತಿಲ್ಲ. ಸಾಮಾನ್ಯ/EWS/OBC ಅಭ್ಯರ್ಥಿಗಳು ರೂ.300/- ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಮೇಲ್ಕಂಡ ಹುದ್ದೆಗೆ ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಅಭ್ಯರ್ಥಿಗಳು ಆನ್‌ಲೈನ್/ಆಫ್‌ಲೈನ್‌ ಮೂಲಕ ಪಾವತಿಸಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಮೇಲೆ ತಿಳಿಸಲಾದ ಹುದ್ದೆಗೆ ಆಯ್ಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್‌ ಕ್ಲಿಕ್‌ ಮಾಡಿ. ಆನ್‌ಲೈನ್‌ ಮೂಲಕ ಅಪ್ಲೈ ಮಾಡಲು ಈ ಲಿಂಕ್‌ ಕ್ಲಿಕ್‌ ಮಾಡಿ