NTPC Recruitment 2024: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 26 ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಭಾರತದಾದ್ಯಂತ ಹುದ್ದೆ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ಅರ್ಜಿ ಸಲ್ಲಿಸಲು ದಿ.12-ಮೇ-2024 ಕೊನೆಯ ದಿನಾಂಕವಾಗಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ಸೂಚಿಸಲಾಗಿದೆ.
ಪ್ರಮುಖ ದಿನಾಂಕಗಳು;
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 07-05-2024
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-05-2024
ಹುದ್ದೆಯ ವಿವರ ಈ ಕೆಳಗೆ ನೀಡಲಾಗಿದೆ;
ಸಂಸ್ಥೆ ಹೆಸರು: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC) ನಲ್ಲಿ 26 ಹುದ್ದೆಗಳು ಖಾಲಿ ಇದ್ದು, ಅಸೋಸಿಯೇಟ್ ಹುದ್ದೆಗಳ ಭರ್ತಿ ನಡೆಯಲಿದೆ. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಎನ್‌ಟಿಪಿಸಿ ನಿಯಮಗಳ ಪ್ರಕಾರ ವೇತನ ನೀಡಲಾಗುವುದು.
ವಿದ್ಯಾರ್ಹತೆ: NTPC ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ CA ಅಥವಾ ICWA, CA (ಇಂಟರ್) ಅಥವಾ ICWA (ಇಂಟರ್) ಶೈಕ್ಷಣಿಕ ಅರ್ಹತೆಯನ್ನು ಪಡೆದಿರಬೇಕು.
ವಯೋಮಿತಿ: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 65 ವರ್ಷಗಳನ್ನು ಮೀರಿರಬಾರದು. ವಯೋಮಿತಿ ಸಡಿಲಿಕೆಯನ್ನು ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನಿಯಮಗಳ ಪ್ರಕಾರ ನೀಡಲಾಗುವುದು.
ಅರ್ಜಿ ಶುಲ್ಕ: ಮೇಲ್ಕಂಡ ಹುದ್ದೆಗೆ ಯಾವುದೇ ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು ಪಾವತಿ ಮಾಡಬೇಕಾಗಿಲ್ಲ.
ಆಯ್ಕೆ ಪ್ರಕ್ರಿಯೆ: ಅಸೋಸಿಯೇಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ