ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದ ಸಂಬಂಧದಲ್ಲಿ ಸ್ವೀಕೃತವಾಗುವ ದೂರುಗಳ ವಿಲೇವಾರಿ ಮತ್ತು ಕುಂದುಕೊರತೆಗಳ ನಿವಾರಣೆಗಾಗಿ ಈ ಕೆಳಕಂಡ ಜಿಲ್ಲೆಗಳಲ್ಲಿ ರಚಿತವಾಗಿರುವ ಒಂಬುಡ್ಸ್ ಮನ್ ರವರ ಹುದ್ದೆಗಳನ್ನು ಆಯ್ಕೆ ಮಾಡುವ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಒಂಬುಡ್ಸ್ ಮೆನ್ ಹುದ್ದೆಗಳಿರುವ ಜಿಲ್ಲೆಗಳು : ಬೆಳಗಾವಿ, ಬೆಂಗಳೂರು ಗ್ರಾಮಾಂತರ/ ನಗರ, ಶಿವಮೊಗ್ಗ, ಚಿತ್ರದುರ್ಗ, ಬೀದರ, ಹಾಸನ/ ಕೊಡಗು, ಕೊಪ್ಪಳ ಮತ್ತು ವಿಜಯನಗರ
ಅರ್ಹತೆ : ಸಾರ್ವಜನಿಕ ಆಡಳಿತ, ಕಾನೂನು, ಶೈಕ್ಷಣಿಕ ಕ್ಷೇತ್ರ, ಸಮಾಜ ಸೇವೆ/ಮ್ಯಾನೇಜ್ಮೆಂಟ್ ಈ ಕ್ಷೇತ್ರದಲ್ಲಿ 10 ವರ್ಷಗಳ ಸೇವಾನುಭವ ಹೊಂದಿರುವವರು ಈ ಉದ್ಯೋಗಕ್ಕೆ ಅರ್ಹರಾಗಿರುತ್ತಾರೆ.
ಜಿಲ್ಲಾ ಮಟ್ಟದಲ್ಲಿ ಓಂಬುಡ್ಸ್ ಮೆನ್ ಗಳಾಗಿ ಕಾರ್ಯನಿರ್ವಹಿಸಲು ಆಸಕ್ತಿ ಇರುವ ವ್ಯಕ್ತಿಗಳು ಇಲಾಖೆಯ ವೆಬ್ಸೈಟ್ www.rdpr.karnataka.gov.in ನಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ತಮ್ಮ ವ್ಯಕ್ತಿತ್ವ ಪರಿಚಯ, ಕನಿಷ್ಠ 10 ವರ್ಷಗಳ ಕಾರ್ಯಾನುಭವ ದಾಖಲೆ ಹಾಗೂ ಇತರೆ ಪೂರಕ ದಾಖಲೆಗಳೊಂದಿಗೆ ಅರ್ಜಿಯು ದಿನಾಂಕ 14.01.2022 ರೊಳಗೆ ತಲುಪುವಂತೆ ಖುದ್ದಾಗಿ/ ಅಂಚೆ ಮೂಲಕ ಆಯುಕ್ತರು ಗ್ರಾಮೀಣಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, 5 ನೇ ಮಹಡಿ, ಫ್ಲಾಟ್ ನಂ.1243, ಕೆ.ಎಸ್.ಐ.ಐ.ಡಿ.ಸಿ ಕಟ್ಟಡ, ಐಟಿ ಪಾರ್ಕ್, ಸೌತ್ ಬ್ಲಾಕ್ ರಾಜಾಜಿನಗರ, ಇಂಡಸ್ಟ್ರಿಯಲ್ ಎಸ್ಟೇಟ್ ಬೆಂಗಳೂರು- 560044 ಇವರಿಗೆ ಸಲ್ಲಿಸುವುದು. ನಿಗದಿ ಪಡಿಸಿದ ದಿನಾಂಕದ ನಂತರ ಸ್ವೀಕೃತವಾಗುವ ಅಥವಾ ಅಪೂರ್ಣ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ( ಆಡಳಿತ), ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ ಇವರನ್ನು ಸಂಪರ್ಕಿಸಬಹುದಾಗಿದೆ. ದೂರವಾಣಿ ಸಂಖ್ಯೆ : 22342163
ನೋಟಿಫಿಕೇಶನ್