Blog

  • ನೈರುತ್ಯ ರೈಲ್ವೆ, ಮೈಸೂರು ವಿಭಾಗ : ನೇರ ಸಂದರ್ಶನ

    ನೈರುತ್ಯ ರೈಲ್ವೆ, ಮೈಸೂರು ವಿಭಾಗ : ನೇರ ಸಂದರ್ಶನ

    ನೈರುತ್ಯ ರೈಲ್ವೆ, ಮೈಸೂರು ವಿಭಾಗ ಪೂರ್ಣ ಪ್ರಮಾಣದ ವೈದ್ಯಕೀಯ ತಪಾಸಣೆಗಾರ (ಫುಲ್ ಟೈಮ್ ಮೆಡಿಕಲ್ ಪ್ರಾಕ್ಟಿಷನರ್) ಜಿ.ಡಿ.ಎಂ.ಓ ( ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್) ನ್ನು ಮೂರು ತಿಂಗಳ ಮಟ್ಟಿಗೆ ಅಥವಾ ದಿನಾಂಕ 30-06-2021 ವರೆಗೂ, ಜೊತೆಗೆ ಸ್ಟಾಫ್ ನರ್ಸ್ ಮತ್ತು ಫಾರ್ಮಸಿಸ್ಟಗಳನ್ನು ಮೂರು ತಿಂಗಳ ಮಟ್ಟಿಗೆ ಗುತ್ತಿಗೆ ಆಧಾರದ ಮೇರೆಗೆ ಅಥವಾ 31-07-2021 ವರೆಗೂ, ಅಥವಾ ಯಾವುದು ಮುಂಚಿತವಾಗುತ್ತೋ ಅಲ್ಲಿಯವರೆಗೂ.

    1. ಒಟ್ಟು ಹುದ್ದೆಗಳು : ಸಿ.ಎಂ.ಪಿ ( ತಜ್ಞ): 02 ಪೋಸ್ಟ್ ಗಳು, ಸಿ.ಎಂ.ಪಿ ( ಜೆ.ಡಿ.ಎಂ.ಒ) : 12 ಪೋಸ್ಟ್ ಗಳು, ಸ್ಟಾಫ್ ನರ್ಸ್ : 30 ಪೋಸ್ಟ್ ಗಳು, ಫಾರ್ಮಸಿಸ್ಟ್ :02

    ಕೆಲಸ ಮಾಡುವ ಸ್ಥಳ : ಕೋವಿಡ್ ಐಸೋಲೇಶನ್ ವಾರ್ಡ್, ರೈಲ್ವೆ ಹಾಸ್ಪಿಟಲ್, ಮೈಸೂರು ಮತ್ತು ಕಾವಿಡ್ ಕೋಚಗಳು – ಮೈಸೂರು ವಿಭಾಗ.

    ನೇರ ಸಂದರ್ಶನದ ದಿನಾಂಕ ಮತ್ತು ಸ್ಥಳ : ಹಿರಿಯ ವಿಭಾಗೀಯ ಪರ್ಸನಲ್ ಆಫೀಸರ್ ಅವರ ಕಚೇರಿ, ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಚೇರಿ, ಐರ್ವಿನ್ ರಸ್ತೆ, ಮೈಸೂರು.
    ದಿನಾಂಕ : 04-05-2021(11 ಗಂಟೆಯಿಂದ ಸಾಯಂಕಾಲ 05 ಗಂಟೆಯವರೆಗೆ)

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು www.swr.indianrailways.gov.in ಗೆ ಲಾಗಿನ್ ಆಗಿ

  • ಭಾರತೀಯ ನೌಕಾಪಡೆ : ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೇ, 05 ಕೊನೆಯ ದಿನಾಂಕ

    ಭಾರತೀಯ ನೌಕಾಪಡೆ : ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೇ, 05 ಕೊನೆಯ ದಿನಾಂಕ

    ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ : ಆರ್ಟಿಫಿಸರ್ ಅಪ್ರೆಂಟಿಸ್ , ಸೀನಿಯರ್ ಸೆಕೆಂಡರಿ ರಿಸಲ್ಟ್ (ಎಸ್ ಎಸ್ ಆರ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆಗಳಿಗನುಸಾರವಾಗಿ ಅಭ್ಯರ್ಥಿಗಳು 10+2 ನ್ನು ಶೇಕಡಾ 60% ಹಾಗೂ ಫಿಸಿಕ್ಸ್ /ಕೆಮಿಸ್ಟ್ರಿ/ಬಯಾಲಜಿ/ಕಂಪ್ಯೂಟರ್ ಸೈನ್ಸ್ ನ್ನು ಅಂಗೀಕೃತ ಸಂಸ್ಥೆಯಿಂದ ಪಡೆದುಕೊಂಡಿರಬೇಕು.

    ಅಭ್ಯರ್ಥಿಗಳು ಫೆಬ್ರವರಿ 01, 2001 ರಿಂದ 31ಜುಲೈ 2004 ರ ಮಧ್ಯೆ ಜನಿಸಿರಬೇಕು. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.21,700/- ರಿಂದ ರೂ.69,100/- ವೇತನವಿರುತ್ತದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-05-2021

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಬಹುದು.

  • UPSC : 363 ಖಾಲಿ ಹುದ್ದೆಗೆ ಅರ್ಜಿ ಸಲ್ಲಿಸಿ : ಇಲ್ಲಿದೆ ವಿವರ

    UPSC : 363 ಖಾಲಿ ಹುದ್ದೆಗೆ ಅರ್ಜಿ ಸಲ್ಲಿಸಿ : ಇಲ್ಲಿದೆ ವಿವರ

    ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.

    ಹುದ್ದೆ : ಪ್ರಿನ್ಸಿಪಾಲ್ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 363 ಹುದ್ದೆಯಲ್ಲಿ ಪುರುಷ ಅಭ್ಯರ್ಥಿಗಳಿಗೆ 208 ಹುದ್ದೆ ಹಾಗೂ ಉಳಿದ 155 ಹುದ್ದೆಗಳು ಮಹಿಳಾ ಅಭ್ಯರ್ಥಿಗಳಿಗಾಗಿರುತ್ತದೆ.

    ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 50 ವರ್ಷ ಮೀರಿರಬಾರದು. ಇಲ್ಲಿ ಯಾವುದೇ ಅರ್ಜಿ ಶುಲ್ಕ ಪಾವತಿ ಮಾಡುವಂತಿಲ್ಲ. ಆಯ್ಕೆ ಪ್ರಕ್ರಿಯೆಯು ಸಂದರ್ಶನದ ಮೂಲಕ ನಡೆಯುತ್ತದೆ.

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅಲ್ಲಿ ಅರ್ಜಿ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಆನ್‌ಲೈನ್ ಮೂಲಕ ಸಲ್ಲಿಸಬೇಕು.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ :23-04-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13-05-2021

    ಆಫೀಶಿಯಲ್ ವೆಬ್‌ಸೈಟ್ ಲಿಂಕ್‌ ಗಾಗಿ ಇಲ್ಲಿ ಕ್ಲಿಕ್ ಮಾಡಿ
    ನೋಟಿಫಿಕೇಶನ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ

  • ದಕ್ಷಿಣ ರೈಲ್ವೆ : 191 ಹುದ್ದೆಗಳು ಖಾಲಿ : ಅಪ್ಲೈ ಮಾಡಿ ಎಪ್ರಿಲ್ 30 ರೊಳಗೆ

    ದಕ್ಷಿಣ ರೈಲ್ವೆ : 191 ಹುದ್ದೆಗಳು ಖಾಲಿ : ಅಪ್ಲೈ ಮಾಡಿ ಎಪ್ರಿಲ್ 30 ರೊಳಗೆ

    ದಕ್ಷಿಣ ರೈಲ್ವೆ ವಲಯವು ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ.

    ಹುದ್ದೆ : ಅರೆ ವೈದ್ಯಕೀಯ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳಲಿದೆ. ಅರ್ಹ ಅಭ್ಯರ್ಥಿಗಳಿಂದ ಪ್ಯಾರಾ ಮೆಡಿಕಲ್ ಸಿಬ್ಬಂದಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

    ಹುದ್ದೆ ಸಂಖ್ಯೆ : ಒಟ್ಟು 191 ಅರೆ ವೈದ್ಯಕೀಯ ಹುದ್ದೆಗಳು ಖಾಲಿ ಇದ್ದು, ಭರ್ತಿ ಮಾಡಲು ನೇಮಕಾತಿ ಮಾಡಿಕೊಳ್ಳಲಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಎಪ್ರಿಲ್ 30, 2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

    ಆಯ್ಕೆಯಾಗುವ ಅಭ್ಯರ್ಥಿಗಳು ಚೆನ್ನೈನ ಪೆರಂಬೂರಿನಲ್ಲಿರೋ ರೈಲ್ವೇ ಆಸ್ಪತ್ರೆಯ ಹೆಡ್‌ಕ್ವಾಟ್ರಸ್‌ಗೆ ನೇಮಕಾತಿ ಮಾಡಿಕೊಳ್ಳಲಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕ ಮೀರುವ ಮೊದಲು ಅರ್ಜಿ ಸಲ್ಲಿಸುವುದು ಒಳ್ಳೆಯದು.

    ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗೆ ರೂ. 83 , ಫಿಸಿಯೋಥೆರಪಿಸ್ಟ್‌ 1 ಹುದ್ದೆ, ಇಸಿಜಿ ಟೆಕ್ನಿಷಿಯನ್ 4 ಹುದ್ದೆ, ಹಿಮೋಡಯಾಲಿಸಿಸ್ ಟೆಕ್ನಿಷಿಯನ್ 3 ಹುದ್ದೆ, ಹಾಸ್ಪಿಟಲ್ ಅಸಿಸ್ಟೆಂಟ್ 48 ಹುದ್ದೆ, ಹೌಸ್ ಕೀಪಿಂಗ್ ಅಸಿಸ್ಟೆಂಟ್ (ಮೆಡಿಕಲ್ ) 40 ಹುದ್ದೆ, ಲ್ಯಾನ್ ಅಸಿಸ್ಟೆಂಟ್ ಗ್ರೇಡ್ – 2 – 29 ಹುದ್ದೆ, ಹಾಗೂ ರೇಡಿಯೋಗ್ರಾಫರ್ 3 ಹುದ್ದೆಗಳಿಗೆ ಈ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುವುದು.

    ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮೊದಲು ಫಿಟ್‌ನೆಸ್‌ಗಾಗಿ ವೈದ್ಯಕೀಯ ಪರೀಕ್ಷೆಗೆ ಒಳಗಾಗಬೇಕು. ಅರೆ ವೈದ್ಯಕೀಯ ಸಿಬ್ಬಂದಿಯ ಅಭ್ಯರ್ಥಿಗಳ ಆಯ್ಕೆಯಾಗಿ ದೂರವಾಣಿ ಸಂದರ್ಶನ ನಡೆಸಲಾಗುವುದು. ಒಪ್ಪಂದದ ಪ್ರಕಾರ ಅಭ್ಯರ್ಥಿಗಳು ತಮ್ಮಸ್ವಂತ ಖರ್ಚಿನಲ್ಲಿ ಆಡಳಿತಾತ್ಮಕ ಅಗತ್ಯಗಳಿಗೆ ಅನುಗುಣವಾಗಿ ಡ್ರೆಸ್ ಕೋಡ್ ನ್ನು ಅನುಸರಿಸಬೇಕು.

    ವೇತನ : ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗೆ ರೂ. 44,900/-, ಫಿಸಿಯೋಥೆರಪಿಸ್ಟ್‌ ಹುದ್ದೆಗೆ ರೂ.35,400/- ಇಸಿಜಿ ಟೆಕ್ನಿಷಿಯನ್ ಗೆ ರೂ.25,500/-, ಹಿಮೋಡಯಾಲಿಸಿಸ್ ಟೆಕ್ನಿಷಿಯನ್ ಹುದ್ದೆಗೆ ರೂ.35,400/-, ಹಾಸ್ಪಿಟಲ್ ಅಸಿಸ್ಟೆಂಟ್ ಹುದ್ದೆಗೆ ರೂ. 18,000/-, ಹೌಸ್ ಕೀಪಿಂಗ್ ಅಸಿಸ್ಟೆಂಟ್ (ಮೆಡಿಕಲ್ ) ರೂ.18,000/- , ಲ್ಯಾನ್ ಅಸಿಸ್ಟೆಂಟ್ ಗ್ರೇಡ್ – 2 ರೂ. 21,700/- ಹಾಗೂ ರೇಡಿಯೋಗ್ರಾಫರ್ ಹುದ್ದೆಗೆ ರೂ. 29,200 ಸಂಬಳ ದೊರಕಲಿದೆ.ಇದರಲ್ಲಿ ಡಿಎ ಹಾಗೂ ಇನ್ನಿತರೆ ಅಲವೆನ್ಸ್‌ ಇರಲಿವೆ.

    ಪ್ಯಾರಾ ವೈದ್ಯಕೀಯ ಸಿಬ್ಬಂದಿಯ ಒಪ್ಪಂದವು ಸೆಪ್ಪೆಂಬರ್ 30, 2021 ರವರೆಗೆ ಗುತ್ತಿಗೆ ಆಧಾರದಲ್ಲಿರುತ್ತದೆ.

    ಆಸಕ್ತ ಅಭ್ಯರ್ಥಿಗಳು ಮೊದಲು ಆಯ್ಕೆ ಪ್ರಕ್ರಿಯೆಗೆ ನೋಂದಾಯಿಸಿಕೊಳ್ಳಬೇಕು. ದಕ್ಷಿಣ ರೈಲ್ವೆಯ ಅಧಿಕೃತ ವೆಬ್‌ಸೈಟ್ ಗೆ ಲಾಗಿನ್ ಆಗಿ ಅರ್ಜಿಯನ್ನು ಸಲ್ಲಿಸಬೇಕು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

    ಅಧಿಕೃತ ವೆಬ್‌ಸೈಟ್‌ ಲಿಂಕ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ

  • DFCCIL : 1072 ಹುದ್ದೆ

    DFCCIL : 1072 ಹುದ್ದೆ

    ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ಕಾರ್ಪೋರೇಷನ್ ಆಪ್ ಇಂಡಿಯಾ ಲಿಮಿಟೆಡ್ (ಡಿಎಫ್ ಸಿಸಿಐಎಲ್) ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು 23, ಮೇ, 2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಕ್ವಿಕ್ ಲುಕ್
    ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಕ
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 24-04-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-05-2021
    ಅರ್ಜಿ ಶುಲ್ಕ: ಡಿಮಾಂಡ್ ಡ್ರಾಫ್ಟ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕು.

    ಹುದ್ದೆ : ಎಕ್ಸಿಕ್ಯುಟಿವ್, ಮ್ಯಾನೇಜರ್

    ಹುದ್ದೆ ಸಂಖ್ಯೆ : 1072

    ಹುದ್ದೆ ಸ್ಥಳ : ಭಾರತದೆಲ್ಲೆಡೆ

    ವೇತನ : ಈ ಹುದ್ದೆಗಳಿಗೆ ಆಯ್ ಅಭ್ಯರ್ಥಿಗಳಿಗೆ ಮಾಸಿಕ ರೂ.25,000/- ರಿಂದ ರೂ. 1,60,000/- ವೇತನವಿರುತ್ತದೆ.

    ವಿದ್ಯಾರ್ಹತೆ : ಎಕ್ಸಿಕ್ಯುಟಿವ್ ಹುದ್ದೆಗೆ ಡಿಪ್ಲೋಮಾ ಮತ್ತು ಗ್ರಾಜ್ಯುಯೇಶನ್ ಮಾಡಿರಬೇಕು. ಜ್ಯೂನಿಯರ್ ಎಕ್ಸಿಕ್ಯುಟಿವ್ ಹುದ್ದೆಗೆ ಹತ್ತನೇ ತರಗತಿ ಪಾಸಾಗಿರಬೇಕು.ಜ್ಯೂನಿಯರ್ ಮ್ಯಾನೇಜರ್ ಹುದ್ದೆಗೆ ಬ್ಯಾಚುಲರ್ ಡಿಗ್ರಿ, ಎಂಬಿಎ/ಪಿಜಿಡಿಬಿಎ/ಪಿಜಿಡಿಬಿಎಂ/ಪಿಜಿಡಿಎಂ ನ್ನು ತೇರ್ಗಡೆ ಹೊಂದಿರಬೇಕು.

    ಎಕ್ಸಿಕ್ಯುಟಿವ್ – 442 ಹುದ್ದೆಗಳು
    ಜ್ಯೂನಿಯರ್ ಎಕ್ಸಿಕ್ಯುಟಿವ್-519
    ಜ್ಯೂನಿಯರ್ ಮ್ಯಾನೇಜರ್ -113

    ವಯೋಮಿತಿ : ಹುದ್ದೆಗಳಿಗನುಸಾರವಾಗಿ ಅಭ್ಯರ್ಥಿಗಳಿಗೆ ಕನಿಷ್ಠ 18 ರಿಂದ ಗರಿಷ್ಠ 27 ವರ್ಷ ವಯೋಮಿತಿ ಇರಬೇಕು.

    ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಪಿಡ್ಬ್ಯುಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ : ಅಭ್ಯರ್ಥಿಗಳು ರೂ. ಜ್ಯೂನಿಯರ್ ಮ್ಯಾನೇಜರ್ ಹುದ್ದೆಗೆ ರೂ‌.1000/-, ಎಕ್ಸಿಕ್ಯುಟಿವ್ ಹುದ್ದೆಗೆ ರೂ.900/-, ಜ್ಯೂನಿಯರ್ ಎಕ್ಸಿಕ್ಯುಟಿವ್ ಹುದ್ದೆಗೆ ರೂ. 700/-, ಅರ್ಜಿ ಶುಲ್ಕ ಪಾವತಿಸಬೇಕು.
    ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪಿಡ್ಬ್ಯುಬಿಡಿ/ ಎಕ್ಸ್ ಸರ್ವಿಸ್ ಮ್ಯಾನ್ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ.

    ನೋಟಿಫಿಕೇಶನ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ

  • ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್: ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

    ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್: ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

    ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನುಆಹ್ವಾನಿಸಲಾಗಿದೆ.

    ಹುದ್ದೆ : ಆರ್ಥಿಕ ಸಲಹೆಗಾರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 16, 2021

    ಆರ್ಥಿಕ ಸಲಹೆಗಾರ ಹುದ್ದೆ ತಾತ್ಕಾಲಿಕವಾಗಿದ್ದು, ಮೂರು ವರ್ಷಗಳವರೆಗೆ ಇರುತ್ತದೆ. ಅಭ್ಯರ್ಥಿಗಳು ಮಂಡ್ಯ, ಚಾಮರಾಜನಗರ, ತುಮಕೂರು, ಯಾದಗಿರಿ ಈ ಜಿಲ್ಲೆಗಳಲ್ಲಿ ಕೆಲಸ ಮಾಡಬೇಕಾಗಿರುತ್ತದೆ.

    ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವೀಧರರು ಅಥವಾ ನಿವೃತ್ತ/ಸ್ವಯಂ ನಿವೃತ್ತಿ ಪಡೆದ ಬ್ಯಾಂಕ್ ಅಧಿಕಾರಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

    ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬ್ಯಾಂಕಿಂಗ್ ಜ್ಞಾನದೊಂದಿಗೆ ಹಣಕಾಸಿನ ಸೇವೆಗಳ ಮತ್ತು ಸಾಮಾಜಿಕ ಭದ್ರತಾ ಯೋಜನೆಗಳ ತಿಳುವಳಿಕೆಯುಳ್ಳ 62 ವರ್ಷದೊಳಗಿನವರು ಅರ್ಜಿಯನ್ನು ಸಲ್ಲಿಸಬಹುದು.

    ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಬ್ಯಾಂಕ್ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.

    ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಲು ಸೂಚಿಸಲಾಗಿದೆ: Karnataka Gramin Bank, Branch Office, Ballari, Karnataka ಈ ವಿಳಾಸಕ್ಕೆ ರಿಜಿಸ್ಟರ್, ಸ್ಪೀಡ್ ಪೋಸ್ಟ್ ಮೂಲಕ ಅರ್ಜಿ ಹಾಕಬೇಕು.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 22-04-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-05-2021

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಿ : 08392-236428