Blog

  • 62 ಆರೋಗ್ಯ ಸಹಾಯಕಿ ಹುದ್ದೆಗೆ ನೇಮಕ

    62 ಆರೋಗ್ಯ ಸಹಾಯಕಿ ಹುದ್ದೆಗೆ ನೇಮಕ

    ಕೋವಿಡ್ -19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

    ಹುದ್ದೆ : ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27-04-2021 ರೊಳಗೆ ಕಚೇರಿಗೆ ನೇರವಾಗಿ ಮೂಲ ದಾಖಲೆಗಳೊಂದಿಗೆ ಹಾಜರಾಗತಕ್ಕದ್ದು.

    ನೇಮಕ‌‌‌ ಮಾಡಿಕೊಳ್ಳಬೇಕಾದ ಸಂಖ್ಯೆ : 62

    ವಯೋಮಿತಿ : ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.

    ಅನುಭವ: ಗಣಕಯಂತ್ರ ತರಬೇತಿ ಹೊಂದಿರಬೇಕು.

    ವಿದ್ಯಾರ್ಹತೆ : ಎಎನ್ ಎಂ ತರಬೇತಿಯಲ್ಲಿ ತೇರ್ಗಡೆ/ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ಸದರಿ ಹುದ್ದೆಯು 6 ತಿಂಗಳ ‌ಮಟ್ಟಿಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲಾಗುವುದು. ಯಾವ ಅಭ್ಯರ್ಥಿ ನೇಮಕಾತಿಗಾಗಿ ಅತೀ ಜರೂರು ಇರುವುದರಿಂದ ಮೊದಲಿಗೆ ಮೂಲ ದಾಖಲೆಗಳನ್ನು ಸಲ್ಲಿಸುತ್ತಾರೋ ಅಂತಹ ಅಭ್ಯರ್ಥಿಗಳಿಗೆ ಆಧ್ಯತೆ ನೀಡಿ ನೇಮಕ ಮಾಡಿಕೊಳ್ಳುವುದು.

  • KSP : ಭರ್ಜರಿ ಅವಕಾಶ : 4000 ಹುದ್ದೆಗಳಿಗೆ ಅರ್ಜಿ ಆಹ್ವಾನ

    KSP : ಭರ್ಜರಿ ಅವಕಾಶ : 4000 ಹುದ್ದೆಗಳಿಗೆ ಅರ್ಜಿ ಆಹ್ವಾನ

    ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 31 ಮೇ 2021 ಕೊನೆಯ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು.

    ಆನ್ಲೈನ್ ಅರ್ಜಿಸಲ್ಲಿಸಲು ಆರಂಭಿಕ ದಿನಾಂಕ : 22 ಎಪ್ರಿಲ್2021
    ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31 ಮೇ 2021

    ಹುದ್ದೆ : ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ ಸಂಖ್ಯೆ : 4000

    ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.23,500/- ರಿಂದ ರೂ.47,650/- ವರೆಗೆ ವೇತನವಿರುತ್ತದೆ.

    ವಿದ್ಯಾರ್ಹತೆ : ಅಭ್ಯರ್ಥಿಗಳು 10th ಹಾಗೂ 12th ನ್ನು ತೇರ್ಗಡೆ ಹೊಂದಿರಬೇಕು.

    ವಯೋಮಿತಿ : ಕನಿಷ್ಠ 18 ಹಾಗೂ ಗರಿಷ್ಠ 30 ವಯೋಮಿತಿಯವರು ಅರ್ಜಿ ಸಲ್ಲಿಸಬಹುದು. ಒಬಿಸಿ, 2A, 2B, 3A ಹಾಗೂ 3B ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ : ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಜನರಲ್ ಅಭ್ಯರ್ಥಿಗಳಿಗೆ ರೂ.250, 2A,2B, 3A ಹಾಗೂ 3B ಅಭ್ಯರ್ಥಿಗಳಿಗೆ ರೂ.250/-, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ.100/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

    ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಇಟಿ, ಪಿಎಸ್‌ಟಿ ಮೂಲಕ ಆಯ್ಕೆ ಮಾಡಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ.

  • ಬಿಪಿಸಿಎಲ್: ಹುದ್ದೆಗಳಿಗೆ ನೇಮಕ

    ಬಿಪಿಸಿಎಲ್: ಹುದ್ದೆಗಳಿಗೆ ನೇಮಕ

    ಭಾರತ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ( ಬಿಪಿಸಿಎಲ್‌) ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು ಜೂನ್ 15 , 2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಹುದ್ದೆ: ನಿರ್ದೇಶಕ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ವಿದ್ಯಾರ್ಹತೆ : ಎಂಬಿಎ/ಪಿಜಿಡಿಎಂ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

    ವಯೋಮಿತಿ : ಕನಿಷ್ಠ 45 ರಿಂದ ಗರಿಷ್ಠ 60 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ವೇತನ : ನಿರ್ದೇಶಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.1,80,000/- ರಿಂದ ರೂ. 3,40,000/- ವೇತನವನ್ನು ನೀಡಲಾಗುವುದು.

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ‌ ನೀಡಿ, ಅರ್ಜಿ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜೂನ್.15, ಮಧ್ಯಾಹ್ನ 3 ಗಂಟೆಯೊಳಗೆ ಸಲ್ಲಿಸಬೇಕು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • Indian Navy : 2500 ಹುದ್ದೆಗಳು

    Indian Navy : 2500 ಹುದ್ದೆಗಳು

    ಭಾರತೀಯ ನೌಕಾಪಡೆಯಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಎಪ್ರಿಲ್ 26 ರಂದು ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು ಎಪ್ರಿಲ್ 30,2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಕ್ವಿಕ್ ಲುಕ್
    ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಕ
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 26-04-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-04-2021
    ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ಹುದ್ದೆ: ಸೈಲರ್ (Sailor) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ಒಟ್ಟು ಹುದ್ದೆ : 2500

    ನೇಮಕಾತಿ ಪ್ರಕ್ರಿಯೆ : ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆಯಲ್ಲಿ ಪಾಸಾಗಬೇಕು.

    ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 14,600/- ವೇತನ ನಿಗದಿಪಡಿಸಲಾಗಿದೆ.

    ಹುದ್ದೆ ಸ್ಥಳ: ಭಾರತದೆಲ್ಲೆಡೆ

    ಭಾರತೀಯ ನೌಕಾಪಡೆಯಲ್ಲಿ ಸೈಲರ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸುವಂತೆ ಇಲ್ಲ.

    ವಿದ್ಯಾರ್ಹತೆ: ಅಭ್ಯರ್ಥಿಗಳು ಅಂಗೀಕೃತ ಯುನಿವರ್ಸಿಟಿ ಯಿಂದ 12th ಪಾಸಾಗಿರಬೇಕು. 10+2 ಶೇ. 60 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಗಣಿತ ಹಾಗೂ ಭೌತಶಾಸ್ತ್ರ ಒಂದು ವಿಷಯವಾಗಿ ಓದಿರಬೇಕು. ರಸಾಯನಶಾಸ್ತ್ರ, ಜೀವಶಾಸ್ತ್ರ, ಕಂಪ್ಯೂಟರ್ ಸೈನ್ಸ್ ಕಲಿಕೆ ವಿಷಯದಲ್ಲಿರಬೇಕು.

    ವಯೋಮಿತಿ : ಭಾರತೀಯ ನೌಕಾಪಡೆಯ ನಿಯಮಾನುಸಾರ ವಯೋಮಿತಿ ಹೊಂದಿರಬೇಕು.

    ಅಭ್ಯರ್ಥಿಗಳು ಸಂಸ್ಥೆ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಭರ್ತಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಆನ್ಲೈನ್ ಮೂಲಕ ದಿನಾಂಕ 30-04-2021 ರೊಳಗೆ ಸಲ್ಲಿಸಬೇಕು.

    ಅಧಿಕೃತ ವೆಬ್‌ಸೈಟ್‌ ಈ ಲಿಂಕ್ ಕ್ಲಿಕ್ ಮಾಡಿ

    ಆನ್ಲೈನ್ ಅಪ್ಲಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

    ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಕ್ಯಾಂಪ್ಕೋ: ಲಿಖಿತ ಪರೀಕ್ಷೆ ಮುಂದೂಡಿಕೆ

    ಕ್ಯಾಂಪ್ಕೋ: ಲಿಖಿತ ಪರೀಕ್ಷೆ ಮುಂದೂಡಿಕೆ

    ದಿ ಕ್ಯಾಂಪ್ಕೋ ಲಿಮಿಟೆಡ್ ಜ್ಯೂನಿಯರ್ ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ( A/M) ಟ್ರೈನಿ ಮತ್ತು ಜ್ಯೂನಿಯರ್ ಗ್ರೇಡರ್ ಟ್ರೈನಿ ಹುದ್ದೆಗೆ ಲಿಖಿತ ಪರೀಕ್ಷೆ ಯನ್ನು ಶಾರದಾ ವಿದ್ಯಾಲಯ ಮತ್ತು ಸೇಂಟ್ ಆಗ್ನೇಸ್ ಕಾಲೇಜಿನಲ್ಲಿ ದಿನಾಂಕ 25-04-2021 ರಂದು ನಿಗದಿಪಡಿಸಲಾಗಿತ್ತು. ಆದರೆ ಕೋವಿಡ್-19 ಕೊರೊನಾ ವೈರಸ್ ಹರಡುತ್ತಿರುವ ಕಾರಣ ಲಿಖಿತ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಲಾಗಿದೆ.

  • ಕೆ-ಸೆಟ್ ಪರೀಕ್ಷೆ ಮುಂದೂಡಿಕೆ

    ಕೆ-ಸೆಟ್ ಪರೀಕ್ಷೆ ಮುಂದೂಡಿಕೆ

    ಮೈಸೂರು ವಿಶ್ವವಿದ್ಯಾನಿಲಯವು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ.ಎಸ್.ಇ.ಟಿ) -2021 ನ್ನು ದಿನಾಂಕ 25-04-2021 (ಭಾನುವಾರ )ರಂದು ನಡೆಸಲು ನಿರ್ಧರಿಸಿತ್ತು. ಆದರೆ ಕೋವಿಡ್ -19 ಕೊರೊನಾ ವೈರಸ್ ಹರಡುತ್ತಿರುವ ಕಾರಣ ಕರ್ನಾಟಕ ಸರಕಾರ ವಾರಾಂತ್ಯದಲ್ಲಿ ಕರ್ಫ್ಯೂ ಘೋಷಿಸಿರುವ ಹಿನ್ನೆಲೆಯಲ್ಲಿ ಕೆಸೆಟ್ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಲಾಗಿದೆ.

    ಎಲ್ಲಾ ನೊಂದಾಯಿತ ಅಭ್ಯರ್ಥಿಗಳು ಕೆಸೆಟ್ 2021 ಪರೀಕ್ಷೆಗೆ ಸಂಬಂಧಿಸಿದಂತೆ ಕೆಸೆಟ್ ವೆಬ್‌ಸೈಟ್‌ನಲ್ಲಿ https://kset.uni-mysore.ac.in/ ಆಗ್ಗಿಂದಾಗ್ಗೆ ಹೊರಡಿಸುವ ವಿಷಯಗಳನ್ನು ನೋಡಬಹುದಾಗಿ ತಿಳಿಸಲಾಗಿದೆ.