Blog

  • ರೈಲು ಗಾಲಿ ಕಾರ್ಖಾನೆ : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ರೈಲು ಗಾಲಿ ಕಾರ್ಖಾನೆ : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಕೋವಿಡ್- 19 ಸಾಂಕ್ರಾಮಿಕ ರೋಗವನ್ನು ಎದುರಿಸಲು ರೈಲು ಗಾಲಿ ಕಾರ್ಖಾನೆ, ಯಲಹಂಕ, ಬೆಂಗಳೂರು – ಈ ಕೆಳಗಿನ ಪ್ರಾರಾಮೆಡಿಕಲ್ ವಿಭಾಗಗಳಲ್ಲಿ ಅಭ್ಯರ್ಥಿಗಳನ್ನು ಒಪ್ಪಂದದ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ. ವಿವರಗಳು ಈ ಕೆಳಗಿನಂತಿವೆ :

    ಹುದ್ದೆ : ಸ್ಟಾಫ್ ನರ್ಸ್ – 13
    ರೇಡಿಯೋಗ್ರಾಫರ್ / ಎಕ್ಸ್‌ – ರೇ ತಂತ್ರಜ್ಞ
    ಲ್ಯಾಬ್ ತಂತ್ರಜ್ಞ – 01
    ಆಸ್ಪತ್ರೆ ಪರಿಚಾರಕರು – 10

    ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಆರ್‌ಡಬ್ಲ್ಯುಎಫ್ ನ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಸಂಪೂರ್ಣ ವಿವರಗಳನ್ನು ತಿಳಿದುಕೊಳ್ಳಬಹುದು.

    ಸಂದರ್ಶನ ದಿನಾಂಕ : 20-04-2021 ರಂದು 11.00 ಗಂಟೆಗೆ ತಾಂತ್ರಿಕ ತರಬೇತಿ ಕೇಂದ್ರ, ರೈಲು ಗಾಲಿ ಕಾರ್ಖಾನೆ, ಯಲಹಂಕ, ಬೆಂಗಳೂರು – 560064 ರಲ್ಲಿ ವಾಕ್‌- ಇನ್ ಸಂದರ್ಶನಕ್ಕೆ ಹಾಜರಾಗತಕ್ಕದ್ದು.

  • ವಿಟಿಯು : ಪರೀಕ್ಷೆ ಮುಂದೂಡಿಲ್ಲ

    ವಿಟಿಯು : ಪರೀಕ್ಷೆ ಮುಂದೂಡಿಲ್ಲ

    ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ (ವಿಟಿಯು)ದ ಬಿ.ಇ, ಬಿ.ಟೆಕ್‌, ಬಿ.ಆರ್ಕ್‌ ಹಾಗೂ ಬಿ.ಪ್ಲಾನ್ ಕೋರ್ಸ್‌ಗಳ ಪ್ರಥಮ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಲಾಗಿಲ್ಲ. ಈ ಮೊದಲಿನ ವೇಳಾಪಟ್ಟಿಯಂತೆ ಏ.19 ರಿಂದ ಪರೀಕ್ಷೆ ಆರಂಭಗೊಳ್ಳಲಿದೆ ಎಂದು ಪ್ರಕಟಣೆಲ್ಲಿ ತಿಳಿಸಲಾಗಿದೆ.
    ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಸುಳ್ಳು ಸುದ್ದಿ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

  • ಬೆಂಗಳೂರು ವಿಶ್ವವಿದ್ಯಾನಿಲಯ : ಪರೀಕ್ಷೆ ಮುಂದೂಡಿಕೆ

    ಬೆಂಗಳೂರು ವಿಶ್ವವಿದ್ಯಾನಿಲಯ : ಪರೀಕ್ಷೆ ಮುಂದೂಡಿಕೆ

    ಬೆಂಗಳೂರು ವಿಶ್ವವಿದ್ಯಾನಿಲಯವು ಎಪ್ರಿಲ್ 19 ರಂದು ನಡೆಸಬೇಕಾಗಿದ್ದ ಸ್ನಾತಕ, ಸ್ನಾತಕೋತ್ತರ ಪದವಿ ಮತ್ತು ಇಂಜಿನಿಯರಿಂಗ್ ಪದವಿ ಪರೀಕ್ಷೆಯನ್ನು ಮುಂದೂಡಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.

    ಎಪ್ರಿಲ್ 19 , 20 ಮತ್ತು 21 ರಂದು ನಡೆಯಬೇಕಾಗಿದ್ದ ವಿವಿಧ ಪರೀಕ್ಷೆಗಳನ್ನು ಸೋಂಕು ಹೆಚ್ಚಳ ಕಾರಣಕ್ಕೆ ಬೆಂಗಳೂರು ವಿಶ್ವವಿದ್ಯಾಲಯ ಮುಂದೂಡಿದೆ.

    ಏ.19 ರಂದು ಪ್ರಾರಂಭವಾಗಬೇಕಾಗಿದ್ದ ಎಲ್ಲಾ ಎಲ್ಲಾ ಯುಜಿ ಕೋರ್ಸ್‌ಗಳ 1 ಮತ್ತು 3ನೇ ಸೆಮಿಸ್ಟರ್ , ಯುವಿಸಿಇನ ಬಿ.ಆರ್ಕ್‌/ಬಿ.ಟೆಕ್ (ಸಿಬಿಸಿಎಸ್‌) 1,2,3 ನೇ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಲಾಗಿದೆ.

    20 ರಿಂದ ಪ್ರಾರಂಭವಾಗಬೇಕಾಗಿದ್ದ ಎಂಬಿಎ/ಎಂಸಿಎ/ಎಂ.ಇಡಿ/ಎಂ.ಎಸ್ಸಿ ಆರಂಭವಾಗಬೇಕಾಗಿದ್ದ ಎಂಎ/ಎಂಎಸ್ಸಿ/ಎಂಎಎಸ್‌ಎಲ್‌ಪಿ ನ 3 ನೇ ಸೆಮಿಸ್ಟರ್ ಹಾಗಝೂ ಎಂಸಿಎ 5 ನೇ ಸೆಮಿಸ್ಟರ್ ಪರೀಕ್ಷೆಗಳನ್ನೂ ಮುಂದೂಡಲಾಗಿದೆ ಎಂದು ಬೆಂಗಳೂರು ವಿವಿ ಕುಲಸಚಿವರು (ಮೌಲ್ಯಮಾಪನ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಕಂಪ್ಯೂಟರ್ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ

    ಕಂಪ್ಯೂಟರ್ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ

    ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲ್ಲೂಕ್ ಪಂಚಾಯತ್‌ನಲ್ಲಿ ಖಾಲಿ ಇರುವ ಕಂಪ್ಯೂಟರ ಆಪರೇಟರ್ ಹಾಗೂ ಡಿ.ಗುಂಪು ನೌಕರರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ.

    ಹುದ್ದೆ ಸಂಖ್ಯೆ : ಡಿ ಗುಂಪು ನೌಕರರು – 02
    ಕಂಪ್ಯೂಟರ್ ಅಪೇಟರ್ -02

    ವಿದ್ಯಾರ್ಹತೆ : ಡಿ ಗುಂಪು ನೌಕರಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಹತ್ತನೇ ತರಗತಿ ತೇರ್ಗಡೆ ಯಾಗಿರಬೇಕು.
    ಕಂಪ್ಯೂಟರ್ ಅಪರೇಟರ್ ಹುದ್ದೆಗೆ ಪಿಯುಸಿ ಉತ್ತೀರ್ಣ ಹಾಗೂ ಸರಕಾರದಿಂದ ಮಾನ್ಯತೆ ಪಡೆದಿರುವ ಸಂಸ್ಥೆಯಿಂದ ಗಣಕ ಯಂತ್ರ ಕೋರ್ಸ್ ಮಾಡಿರಬೇಕು. ಜೊತೆಗೆ ಕನ್ನಡ ಟೈಪಿಂಗ್ ಬಲ್ಲವರಾಗಿರಬೇಕು.

  • NTPC : ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

    NTPC : ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

    ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷ್ ಲಿಮಿಟೆಡ್ (ಎನ್‌ಟಿಪಿಸಿ) ಖಾಲಿಯಿರುವ ಹದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದು ಅರ್ಹ ಇಂಜಿನಿಯರ್ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.

    ಹುದ್ದೆ : ಇಂಜಿನಿಯರಿಂಗ್ ಎಕ್ಸಿಕ್ಯೂಟಿವ್ ಟ್ರೈನಿ( ಮಹಿಳಾ) ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.

    ಆನ್‌ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 16-04-2021
    ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06-05-2021

    ಹುದ್ದೆಗಳ ವಿವರ : ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್ ಲಿ.ಖಾಲಿ ಇರುವ 50 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಖಾಲಿ ಇರುವ ಹುದ್ದೆಗಳ ಪೈಕಿ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ – 22 ಹುದ್ದೆಗಳು ಖಾಲಿ ಇವೆ.
    ಮೆಕ್ಯಾನಿಕಲ್ ಇಂಜಿನಿಯರಿಂಗ್- 14 ಹುದ್ದೆಗಳು ಖಾಲಿ ಇದ್ದರೆ, ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಹಾಗೂ
    ಇನ್ಸ್ಟ್ರುಮೆಂಟೇಶನ್ ಇಂಜಿನಿಯರಿಂಗ್ ನಲ್ಲಿ- 14 ಹುದ್ದೆಗಳಿವೆ. ಈ ಹುದ್ದೆಗಳಿಗೆ ಮಹಿಳಾ ಗ್ರಾಜ್ಯುಯೇಟ್ ಇಂಜಿನಿಯರಿಯರ್ಸ್ ನಿಂದ ಅರ್ಜಿಯನ್ನು ಆಹ್ವಾನಿಸಿದೆ.

    ವಯೋಮಿತಿ : ಜನರಲ್/ಇಡಬ್ಲ್ಯುಎಸ್ ಅಭ್ಯರ್ಥಿಗಳಿಗೆ 27 ವರ್ಷ ಮೀರಿರಬಾರದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಒಬಿಸಿ(ಎನ್‌ಸಿಎಲ್‌) ಪಿಡಬ್ಲ್ಯುಡಿ/ಎಕ್ಸ್ ಸರ್ವಿಸ್‌ಮ್ಯಾನ್ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.

    ವಿದ್ಯಾರ್ಹತೆ : ಹುದ್ದೆಗಳಿಗನುಸಾರವಾಗಿ ಅಭ್ಯರ್ಥಿಗಳು ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಮತ್ತು ಇನ್ಸ್ಟ್ರುಮೆಂಟೇಶನ್ ಇಂಜಿನಿಯರಿಂಗ್ ಮಾಡಿರಬೇಕು.

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ.

    ನೋಟಿಫಿಕೇಶನ್‌ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • NEET PG ಪರೀಕ್ಷೆ ಮುಂದೂಡಿಕೆ

    NEET PG ಪರೀಕ್ಷೆ ಮುಂದೂಡಿಕೆ

    ನ್ಯಾಷನಲ್ ಎಲಿಜಿಬಿಲಿಟಿ ಕಮ್ ಎಂಟ್ರ್ಯಾನ್ಸ್ ಟೆಸ್ಟ್‌ ಫಾರ್‌ ಫೋಸ್ಟ್‌ ಗ್ರಾಜ್ಯುಯೆಟ್, ನೀಟ್ ಪಿಜಿ 2021 ಪರೀಕ್ಷೆಯನ್ನು ಕೇಂದ್ರ ಸರಕಾರವು ಮುಂದೂಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

    ನೀಟ್ ಪಿಜಿ ಪರೀಕ್ಷೆಯನ್ನು ಎಪ್ರಿಲ್ 18, 2021 ರಂದು ನಡೆಸಲು ದಿನಾಂಕ ನಿಗದಿಪಡಿಸಲಾಗಿತ್ತು. ಈ ಪರೀಕ್ಷೆಯ ಪರಿಷ್ಕೃತ ದಿನಾಂಕವನ್ನು ಶೀಘ್ರದಲ್ಲಿ ಪ್ರಕಟಿಸಲಾಗುತ್ತದೆ.

    ನೀಟ್ ಪಿಜಿ 2021 ಪರೀಕ್ಷೆ ಕುರಿತ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ನ್ಯಾಷಲನ್ ಬೋರ್ಡ್‌ ಆಫ್ ಎಕ್ಸಾಮಿನೇಷನ್‌ನ ಅಫೀಶಿಯಲ್ ವೆಬ್‌ಸೈಟ್‌ ಅಥವಾ ಅಫೀಶಿಯಲ್ ಟ್ವಿಟ್ಟರ್ ಹ್ಯಾಂಡಲ್ ಫಾಲೋ ಮಾಡಬಹುದಾಗಿದೆ.