Blog

  • BHEL : 389 ಅಪ್ರೆಂಟಿಸ್ ಹುದ್ದೆಗಳ ನೇಮಕ

    BHEL : 389 ಅಪ್ರೆಂಟಿಸ್ ಹುದ್ದೆಗಳ ನೇಮಕ

    ಭಾರತ್ ಹೆವಿ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್‌(ಬಿಹೆಚ್‌ಇಎಲ್‌) ತ್ರಿಚಿ, ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು , ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ದಿನಾಂಕ 14-04-2021 ರೊಳಗೆ ಸಲ್ಲಿಸಬಹುದು. ಹುದ್ದೆಗಳ ವಿವರ, ಅರ್ಜಿಶುಲ್ಕ, ವಿದ್ಯಾರ್ಹತೆ ಇನ್ನಿತರ ಹೆಚ್ಚಿನ ವಿವರಗಳನ್ನು ಈ ಕೆಳಗೆ ನೀಡಲಾಗಿದೆ.

    ಹುದ್ದೆಗಳ ವಿವರ : ಗ್ರಾಜ್ಯುಯೇಟ್ ಅಪ್ರೆಂಟಿಸ್ ಹುದ್ದೆ- 66
    ಟೆಕ್ನಿಷಿಯನ್ ಅಪ್ರೆಂಟಿಸ್ – 70
    ಟ್ರೇಡ್ ಅಪ್ರೆಂಟಿಸ್ – 253

    ಅಪ್ಲಿಕೇಶನ್ ಸಲ್ಲಿಸಲು ಆರಂಭಿಕ ದಿನಾಂಕ : 01-04-2021
    ಅಪ್ಲಿಕೇಶನ್ ಸಲ್ಲಿಸಲು ಕೊನೆಯ ದಿನಾಂಕ :14-04-2021
    ಶಾರ್ಟ್‌ಲಿಸ್ಟ್‌ ಆದ ಅಭ್ಯರ್ಥಿಗಳ ಲಿಸ್ಟ್‌ ಪ್ರಕಟಣೆ ದಿನಾಂಕ :16-04-2021
    ದಾಖಲೆಗಳ ಪರಿಶೀಲನೆ ನಿರೀಕ್ಷಿತ ದಿನಾಂಕ :21-04-2021
    ಕರ್ತವ್ಯಕ್ಕೆ ಹಾಜರಾಗುವ ದಿನಾಂಕ : ಮುಂದಿನ ದಿನಗಳಲ್ಲಿ ತಿಳಿಸಲಾಗುವುದು

    ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ಕನಿಷ್ಠ ವರ್ಷ, ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು.

    ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.

    ವಿದ್ಯಾರ್ಹತೆ : ಗ್ರಾಜ್ಯುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಂಜಿನಿಯರಿಂಗ್ ಪದವಿ, ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಡಿಪ್ಲೋಮಾ, ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಐಟಿಐ ತೇರ್ಗಡೆಹೊಂದಿರಬೇಕು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

  • AIISH ಮೈಸೂರು:  ವಿವಿಧ ಹುದ್ದೆ

    AIISH ಮೈಸೂರು: ವಿವಿಧ ಹುದ್ದೆ

    ಮೈಸೂರಿನಲ್ಲಿರುವ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16-04-2021

    ಹುದ್ದೆ : ಕ್ಲಿನಿಕಲ್ ಸೈಕಾಲಜಿ ಉಪನ್ಯಾಸಕರು- 02
    ಸೆಕ್ಯುರಿಟಿ ಆಫೀಸರ್- 01
    ಸ್ಪೀಚ್ ಲ್ಯಾಂಗ್ವೇಜ್ ಪ್ಯಾಥೋಲಾಜಿಸ್ಟ್ ಗ್ರೇಡ್ 2 – 04
    ಆಡಿಯೋಲಾಜಿಸ್ಟ್ – 04

    ವಿದ್ಯಾರ್ಹತೆ : ಅಭ್ಯರ್ಥಿಗಳು ಹುದ್ದೆಗಳಿಗನುಸಾರವಾಗಿ ಎಂಎ/ಎಂ.ಎಸ್ಸಿ/ಪದವಿ/ಬಿಎಸ್ಸಿ ಪದವಿ ಯನ್ನು ಪಡೆದಿರಬೇಕು.

    ಅರ್ಜಿ ಶುಲ್ಕ : ಅಭ್ಯರ್ಥಿಗಳು ಅರ್ಜಿ ಶುಲ್ಕ ರೂ. 100 ನ್ನು “Director,AIISH Mysore ” ಗೆ ಡಿ.ಡಿ.ತೆಗೆಯಬೇಕು.

    ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

    ವಯೋಮಿತಿ : ಕ್ಲಿನಿಕಲ್ ಸೈಕಾಲಜಿ ಉಪನ್ಯಾಸಕರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ,
    ಸೆಕ್ಯುರಿಟಿ ಆಫೀಸರ್ ಹುದ್ದೆಗೆ ಗರಿಷ್ಠ 65 ವರ್ಷ
    ಸ್ಪೀಚ್ ಲ್ಯಾಂಗ್ವೇಜ್ ‌ಪ್ಯಾಥೋಲಾಜಿಸ್ಟ್ ಗ್ರೇಡ್ ಹಾಗೂ
    ಆಡಿಯೋಲಾಜಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 30 ವಯೋಮಿತಿ ಹೊಂದಿರಬೇಕು.

    ಆಸಕ್ತ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ‌ ನೀಡಿ, ಅರ್ಜಿ ಡೌನ್‌ಲೋಡ್ ಮಾಡಿ, ಭರ್ತಿ‌ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ದಿನಾಂಕ 16, ಎಪ್ರಿಲ್ ರೊಳಗಾಗಿ ಸಲ್ಲಿಸಬೇಕು.

    ವಿಳಾಸ : Chief Administrative Officer, All India Institute of Speech and Hearing, Manasagangotri, Mysore – 570006

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

  • NRTI ನಲ್ಲಿ ಉದ್ಯೋಗವಕಾಶ

    NRTI ನಲ್ಲಿ ಉದ್ಯೋಗವಕಾಶ

    ಭಾರತ ಸರಕಾರದ ರೈಲ್ವೇ ಸಚಿವಾಲಯದ ಆಡಳಿತ ನಿಯಂತ್ರಣದಡಿ ನ್ಯಾಷನಲ್ ರೈಲ್ ಮತ್ತು ಟ್ರಾನ್ಸ್‌ಪೋಟೇಷನ್ ಇನ್ಸ್‌ಸ್ಟಿಟ್ಯೂಟ್ (ಎನ್‌ಆರ್‌ಟಿಐ), ವಡೋದರಾ ಇಲ್ಲಿ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಇತ್ತೀಚೆಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈಗ ಪ್ರಸ್ತುತ ಅರ್ಜಿ ಸಲ್ಲಿಕೆಗೆ ನಿಗದಿಪಡಿಸಿದ ಅಂತಿಮ ದಿನಾಂಕವನ್ನು ವಿಸ್ತರಿಸಿ ಪ್ರಕಟಣೆಯನ್ನು ಹೊರಡಿಸಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.

    ಹುದ್ದೆ : ಉಪಕುಲಪತಿ
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ-30-04-2021

    ಈ ಮೇಲಿನ ಹುದ್ದೆಯ ವಯೋಮಿತಿ, ಅವಶ್ಯಕ ವಿದ್ಯಾರ್ಹತೆ ಇತ್ಯಾದಿ ವಿವರಗಳನ್ನು ಈ ಕೆಳಗಿನ ಎನ್‌ಆರ್‌ಟಿಐ ವೆಬ್‌ಸೈಟ್ ನಲ್ಲಿ ಲಭ್ಯವಿದೆ.

    ವೆಬ್‌ಸೈಟ್ ಲಿಂಕ್ ಗಾಗಿ ಇಲ್ಲಿ ಕ್ಲಿಕ್ ಮಾಡಿ

    ಒಂದು ವೇಳೆ ಆನ್‌ಲೈನ್ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಸಾಧ್ಯವಾಗದಿದ್ದಲ್ಲಿ ಭರ್ತಿ ಮಾಡಿದ ಅರ್ಜಿಯ ಕರಡು ಪ್ರತಿಯನ್ನು ನೊಂದಾಯಿತ ಅಂಚೆ/ಸ್ಪೀಡ್ ಸಹಾಯದಿಂದ , ದಿ ಡೆಪ್ಯೂಟಿ ಡೈರೆಕ್ಟರ್( ಟ್ರೈನಿಂಗ್) ರೈಲ್ವೇ ಬೋರ್ಡ್‌, ಮಿನಿಸ್ಟ್ರಿ ಆಫ್‌ ರೈಲ್ವೇಸ್, ರೂಂ ನಂ-359, ರೈಲ್ ಭವನ, ನವದೆಹಲಿ- 110001 ಇಲ್ಲಿಗೆ ಸಲ್ಲಿಸಬೇಕು.

    ಆನ್‌ಲೈನ್ ಅರ್ಜಿ ಸಲ್ಲಿಸಲು ಲಿಂಕ್ ಗಾಗಿ ಇಲ್ಲಿ ಕ್ಲಿಕ್ ಮಾಡಿ

  • PGCIL ನಲ್ಲಿ 40 ಹುದ್ದೆ: ಎಪ್ರಿಲ್ 15, ಕಡೇ ದಿನಾಂಕ

    PGCIL ನಲ್ಲಿ 40 ಹುದ್ದೆ: ಎಪ್ರಿಲ್ 15, ಕಡೇ ದಿನಾಂಕ

    ಪವರ್ ಗ್ರೇಡ್ ಕಾರ್ಪೋರೇಷನ್ ಆಫ್ ಇಂಡಿಯಾ ( ಪಿಜಿಸಿಐಎಲ್) ದಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಎಪ್ರಿಲ್ 15,2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಕ್ವಿಕ್ ಲುಕ್

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 25-03-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15 ಎಪ್ರಿಲ್,2021

    ಅರ್ಜಿ ಶುಲ್ಕ: ಅಭ್ಯರ್ಥಿಗಳು ರೂ.500/- ನ್ನು ಅರ್ಜಿ ಶುಲ್ಕವಾಗಿ ಪಾವತಿಸಬೇಕು.ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ / ಪಿಡ್ಬ್ಯುಡಿ/ಎಕ್ಸ್ – ಸರ್ವಿಸ್ ಮ್ಯಾನ್ ಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ಹುದ್ದೆ ವಿವರ : ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ಒಟ್ಟು ಹುದ್ದೆ : 40

    ವಿದ್ಯಾರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆ /ಬೋರ್ಡ್/ ಯುನಿವರ್ಸಿಟಿಯಿಂದ ಬಿ.ಇ/ಬಿ.ಟೆಕ್/ಬಿ.ಎಸ್ಸಿ ವಿದ್ಯಾರ್ಹತೆಯನ್ನು ಪಡೆದಿರಬೇಕು.

    ವಯೋಮಿತಿ : ಗರಿಷ್ಠ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ಆಸಕ್ತ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ, ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಲು ಬಹುದು.

    ಅಧಿಕೃತ ವೆಬ್‌ಸೈಟ್‌ ಲಿಂಕ್ ಗಾಗಿ ಇಲ್ಲಿ ಕ್ಲಿಕ್ ಮಾಡಿ

    ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ



  • ಕೆಎಪಿಎಲ್ ನಲ್ಲಿ ಉದ್ಯೋಗವಕಾಶ

    ಕೆಎಪಿಎಲ್ ನಲ್ಲಿ ಉದ್ಯೋಗವಕಾಶ

    ಕರ್ನಾಟಕ ಆಂಟಿಯೋಟಿಕ್ಸ್ ಆಂಡ್ ಫಾರ್ಮಸ್ಯುಟಿಕಲ್ಸ್ ಲಿಮಿಟೆಡ್ ( ಕೆಎಪಿಎಲ್‌) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಕುರಿತಂತೆ ಅಧಿಕೃತ ವೆಬ್‌ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ.


    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಎಪ್ರಿಲ್ 15, 2021

    ಒಟ್ಟು ಹುದ್ದೆ : 25

    ಹುದ್ದೆ : ಫ್ರೊಫೆಶನಲ್ ಸರ್ವೀಸ್ ರೆಪ್ರೆಸೆಂಟೇಟಿವ್ಸ್ , ಏರಿಯಾ ಮ್ಯಾನೇಜರ್, ಏರಿಯಾ ಸೇಲ್ಸ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ ಸ್ಥಳ : ಭಾರತದೆಲ್ಲೆಡೆ

    ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ, ಬಿಎಸ್‌ಸಿ ಯಲ್ಲಿ ವಿಜ್ಞಾನ, ಕಾಮರ್ಸ್‌ ಅಥವಾ ಕಲೆ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು.

    ವಯೋಮಿತಿ : ಫ್ರೊಫೆಶನಲ್ ಸರ್ವೀಸ್ ರೆಪ್ರೆಸೆಂಟೇಟಿವ್ಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 28 ವರ್ಷ, ಏರಿಯಾ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 35 ವರ್ಷ, ಏರಿಯಾ ಸೇಲ್ಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 40 ವರ್ಷ ಆಗಿರಬೇಕು.

    ನೇಮಕಾತಿ ಪ್ರಕ್ರಿಯೆ : ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ‌ ನೀಡಲು ಈ ಲಿಂಕ್ ಕ್ಲಿಕ್ ಮಾಡಿ

  • ಇಸ್ರೋ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಇಸ್ರೋ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನಲ್ಲಿ ವಿವಿಧ ಹುದ್ದೆಗಳಿದ್ದು ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ಹುದ್ದೆ : ಅಡ್ಮಿನಿಸ್ಟ್ರೇಟಿವ್ ಆಫೀಸರ್, ಅಕೌಂಟ್ಸ್ ಆಫೀಸರ್ ಮತ್ತು ಪರ್ಚೇಸ್ ಆಂಡ್ ಸ್ಟೋರ್ ಆಫೀಸರ್.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 01-04-2021

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21-04-2021

    ಒಟ್ಟು ಹುದ್ದೆ : 24

    ಹುದ್ದೆ ಸ್ಥಳ : ಭಾರತದೆಲ್ಲೆಡೆ

    ವಿದ್ಯಾರ್ಹತೆ : ಅಡ್ಮಿನ್ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂಬಿಎ/ಪದವಿ/ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.

    ಅಕೌಂಟ್ಸ್ ಅಧಿಕಾರಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಎಸಿಎ/ಎಫ್ ಸಿಎ,ಐಸಿಡಬ್ಲ್ಯುಎ/ಬಿ.ಕಾಂ ಪದವಿಯನ್ನು ಪಡೆದಿರಬೇಕು.

    ಪರ್ಚೇಸ್ , ಸ್ಟೋರ್ ಅಧಿಕಾರಿ ಹುದ್ದೆಗೆ ಎಂಬಿಎ/ ಪದವಿ/ಸ್ನಾತಕೋತ್ತರ ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು.

    ವಯೋಮಿತಿ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ವಯಸ್ಸಾಗಿರಬೇಕು.

    ಆಯ್ಕೆ ಪ್ರಕ್ರಿಯೆ : ಲಿಖಿತ ಪರೀಕ್ಷೆ ಹಾಗೂ ಕೌಶಲ್ಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

    ಅರ್ಜಿ ಶುಲ್ಕ : ಎಲ್ಲಾ ಅಭ್ಯರ್ಥಿಗಳು ರೂ.250/- ಅರ್ಜಿ ಶುಲ್ಕವನ್ನು ಪಾವತಿಸಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಮಾಜಿ ಯೋಧ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ