Blog

  • ಸೂಲಿಬೆಲೆ ಗ್ರಾಮ ಪಂಚಾಯಿತಿಯಲ್ಲಿ ವಿವಿಧ ಹುದ್ದೆ

    ಸೂಲಿಬೆಲೆ ಗ್ರಾಮ ಪಂಚಾಯಿತಿಯಲ್ಲಿ ವಿವಿಧ ಹುದ್ದೆ

    ಸೂಲಿಬೆಲೆ ಗ್ರಾಮ ಪಂಚಾಯತಿ ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ಹುದ್ದೆ : ವಾಟರ್ ಮನ್- 01
    ಪೌರಕಾರ್ಮಿಕರು -02
    ಟ್ರಾಕ್ಟರ್ ಚಾಲಕ -01 ಈ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08-04-2021

    ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಹಾಗೂ ವಿವರಗಳಿಗಾಗಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ : 8277122171

    ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಗೌರವಧನ ಆಧಾರದ ಮೇಲೆ ಹೊರಗುತ್ತಿಗೆ ಆಧಾರದಲ್ಲಿ ನೇಮಕ‌ ಮಾಡಲಾಗುತ್ತದೆ.

  • ಕೊಪ್ಪಳದಲ್ಲಿ ಏ.3 ರಂದು ಸಂದರ್ಶನ

    ಕೊಪ್ಪಳದಲ್ಲಿ ಏ.3 ರಂದು ಸಂದರ್ಶನ

    ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಎಪ್ರಿಲ್ 3 ರಂದು ಬೆಳಗ್ಗೆ 10.30ಕ್ಕೆ ವಾಕ್ ಇನ್ ಇಂಟರ್ವ್ಯೂ ನ್ನು ಕೊಪ್ಪಳದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.

    ಇಂಡಿಯನ್ ಮನಿ ಪ್ರೈ.ಲಿ ಹುಬ್ಬಳ್ಳಿ ಅವರು ಭಾಗವಹಿಸಿ ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ.

    ಈ ಸಂದರ್ಶನದಲ್ಲಿ ಭಾಗವಹಿಸಲು ಅರ್ಜಿ ಶುಲ್ಕವಿರುವುದಿಲ್ಲ. ಎಲ್ಲರಿಗೂ ಉಚಿತ ಪ್ರವೇಶವಿದೆ.

    ಅರ್ಹತೆ : ಪಿಯುಸಿ,ಡಿಪ್ಲೋಮಾ ಮತ್ತು ಯಾವುದೇ ಪದವೀಧರರು ನೇರ ಸಂದರ್ಶನದಲ್ಲಿ ಭಾಗಿಯಾಗಬಹುದು. (ಬಿ. ಇ ಹೊರತುಪಡಿಸಿ)

    ವಯೋಮಿತಿ: 18 ರಿಂದ 32 ವರ್ಷದೊಳಗಿನ ಅಭ್ಯರ್ಥಿಗಳು ಈ ನೇರ ಸಂದರ್ಶನದಲ್ಲಿ ಭಾಗಿಯಾಗಬಹುದು.

    ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲಾ ಮೂಲ ಪ್ರಮಾಣ ಪತ್ರಗಳು ಕಡ್ಡಾಯವಾಗಿ ಆಧಾರ್ ಕಾರ್ಡ್ ಪ್ರತಿ, 1 ರಿಂದ 3 ಬಯೋಡೇಟಾ ಪ್ರತಿಗಳು, 2 ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಭಾಗವಹಿಸಬಹುದು.

    ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾಡಳಿತ ಕೇಂದ್ರ, ಮೊದಲನೇ ಮಹಡಿ, ಕೊಪ್ಪಳ.
    ದೂ.ಸಂಖ್ಯೆ : 08539-220859, 9353515518 ಹಾಗೂ 6364397640 ಸಂಪರ್ಕಿಸಬಹುದು.

  • ಸಾರಸ್ವತ ಬ್ಯಾಂಕ್ ಆನ್ಲೈನ್   ಪ್ರವೇಶ ಪತ್ರ ಪ್ರಕಟ

    ಸಾರಸ್ವತ ಬ್ಯಾಂಕ್ ಆನ್ಲೈನ್ ಪ್ರವೇಶ ಪತ್ರ ಪ್ರಕಟ

    ಸಾರಸ್ವತ್ ಬ್ಯಾಂಕ್ ಜ್ಯೂನಿಯರ್ ಆಫೀಸರ್ ಹುದ್ದೆಗಳ ನೇಮಕಾತಿಯ ಆನ್ಲೈನ್ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಿದೆ.

    ಮಾರ್ಚ್ 19, 2021ರಂದು ಸಾರಸ್ವತ್ ಬ್ಯಾಂಕ್ 150 ಜ್ಯೂನಿಯರ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿತ್ತು.

    ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆಯ ಮೂಲಕ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ.

    ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ, ಹೋಂ ಪೇಜ್ ಮೇಲಿರುವ careers ಮೇಲೆ ಕ್ಲಿಕ್ ಮಾಡಿ. ನಂತರ recruitment for the post of junior officer 2021 ಮೇಲೆ ಕ್ಲಿಕ್ ಮಾಡಿ. ನಂತರ ಮತ್ತೊಂದು ಪುಟಕ್ಕೆ ಹೋಗುವಿರಿ. ಅಲ್ಲಿ registration number/roll number ಮತ್ತು password/date of birth ನ್ನು ನಮೂದಿಸಿ. ಪ್ರವೇಶ ಪತ್ರ ಸ್ಕ್ರೀನ್ ಮೇಲೆ ಮೂಡುವುದು. ಸೇವ್ ಮಾಡಿಟ್ಟುಕೊಳ್ಳಿ.

    ಅಧಿಕೃತ ವೆಬ್‌ಸೈಟ್‌ ಲಿಂಕ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.

    ನೇರವಾಗಿ ಪ್ರವೇಶ ಪತ್ರವನ್ನು ಪಡೆಯಲು ಈ ಲಿಂಕ್ ಕ್ಲಿಕ್ ಮಾಡಿ

  • ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದಲ್ಲಿ  Intership ಗಾಗಿ ಅರ್ಜಿ ಆಹ್ವಾನ

    ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದಲ್ಲಿ Intership ಗಾಗಿ ಅರ್ಜಿ ಆಹ್ವಾನ

    ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ವಿವಿಧ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಮಹಾತ್ಮಗಾಂಧೀ ನರೇಗಾ ಯೋಜನೆಯ ಅನುಷ್ಠಾನದಲ್ಲಿ ದಾಖಲೀಕರಣದಲ್ಲಿ ನೆರವು ನೀಡಲು ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರ ಅಭ್ಯರ್ಥಿಗಳು ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು.

    ಹುದ್ದೆ : ಇಂಟರ್ನ್ ಹುದ್ದೆಯನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಅರ್ಹತೆ : ಸ್ನಾತಕೋತ್ತರ/ಸ್ನಾತಕ ಪದವಿ( ಸಮಾಜ ವಿಜ್ಞಾನ/ ಸಿವಿಲ್ ಇಂಜಿನಿಯರಿಂಗ್) ಪಡೆದಿರಬೇಕು.

    ಹುದ್ದೆ ಸಂಖ್ಯೆ : ಒಟ್ಟು ಹುದ್ದೆ 05

    ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ಗೌರವಧನ ರೀತಿಯಲ್ಲಿ ರೂ. 15,000/- + 2,000/- ನೀಡಲಾಗುತ್ತದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10-04-2021

    ಇಂಟರ್ನ್‌ ಅವಧಿಯು 3 ತಿಂಗಳಾಗಿದ್ದು, ಅಗತ್ಯವಿದ್ದಲ್ಲಿ ವಿಸ್ತರಣೆ ಮಾಡಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶಗಳಲ್ಲಿ ಪ್ರಯಾಣ ಮಾಡಲು ನಿಯೋಜಿಸುವ ಜಿಲ್ಲೆ ಹಾಗೂ ವಾಸ ಮಾಡಲು ಸಿದ್ಧರಿರಬೇಕು. ಇಂಟರ್ನ್‌ಶಿಪ್ ಕಾರ್ಯಕ್ರಮಗಳ ಅನುಭವ ಮತ್ತು ಕನ್ನಡ ಭಾಷೆಯ ಜ್ಞಾನ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.

    ಆಸಕ್ತ ಅಭ್ಯರ್ಥಿಗಳು ದಿನಾಂಕ 10-04-2021 ರೊಳಗಾಗಿ ತಮ್ಮ ಸ್ವವಿವರ ಅರ್ಜಿಯನ್ನು ಇ-ಮೇಲ್ ವಿಳಾಸಕ್ಕೆ ಸಲ್ಲಿಸತಕ್ಕದ್ದು. ಯಾವುದೇ ಹಾರ್ಡ್‌ ಪ್ರತಿಯನ್ನು ಸ್ವೀಕರಿಸುವುದಿಲ್ಲ.

    ಹೆಚ್ವಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ( ಆಡಳಿತ), ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ ರವನ್ನು ಸಂಪರ್ಕಿಸಬಹುದು.
    ದೂರವಾಣಿ ಸಂಖ್ಯೆ : 080-22342163

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಉತ್ತರಕನ್ನಡ ಜಿಲ್ಲಾ ಪಂಚಾಯತ್ ಉದ್ಯೋಗವಕಾಶ

    ಉತ್ತರಕನ್ನಡ ಜಿಲ್ಲಾ ಪಂಚಾಯತ್ ಉದ್ಯೋಗವಕಾಶ

    ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು ಎರಡು ಬಿಇ-ಸಿವಿಲ್ ಒಂದು ಬಿಎಸ್ಸಿ/ಎಂಎಸ್ಸಿ ತೋಟಗಾರಿಕೆ ಮತ್ತು ಒಂದು ಬಿಎಸ್ಸಿ/ ಎಂಎಸ್ಸಿ ಅರಣ್ಯ ತಾಂತ್ರಿಕ ಸಹಾಯಕರು ಅವಶ್ಯಕತೆ ಇದ್ದು, ಸದ್ರಿ ಹುದ್ದೆಗೆ ಆಸಕ್ತಿ ಇರುವ ಕೆಳಗಿನ ಅರ್ಹತಾ ಮಾನದಂಡಗಳನ್ನು ಹೊಂದಿರುವ ಅಭ್ಯರ್ಥಿಗಳು ದಿನಾಂಕ 25-03-2021 ರಿಂದ 29-03-2021 ರೊಳಗಾಗಿ ಅರ್ಜಿಗಳನ್ನು ಉತ್ತರ ಕನ್ನಡ ಜಿಲ್ಲಾ ಪಂಚಾಯತ ಕಾರ್ಯಾಲಯದಲ್ಲಿ ಸಲ್ಲಿಸಬಹುದಾಗಿದೆ. ಅಪೂರ್ಣ ಹೊಂದಿರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

    ಅರ್ಹತೆ: ಬಿಇ-ಸಿವಿಲ್ ವಿದ್ಯಾರ್ಹತೆ, ಬಿಎಸ್ಸಿ/ಎಂ.ಎಸ್ಸಿ ತೋಟಗಾರಿಕೆ.

    ವಿದ್ಯಾರ್ಹತೆ : ಬಿ.ಎಸ್ಸಿ/ಎಂ.ಎಸ್ಸಿ ಅರಣ್ಯ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಗಳು ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ, ಕನ್ನಡ ಮತ್ತು ಇಂಗ್ಲೀಷ್‌ ಭಾಷೆ ತಿಳಿದಿರಬೇಕು.

    ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ‌ ಸಂಭಾವನೆ ರೂ.24,000/-+ ಪ್ರಯಾಣ ಭತ್ಯೆ ಪಾವತಿಸಲಾಗುತ್ತದೆ.

    ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08382-226862 ಸಂಪರ್ಕಿಸಬಹುದು. (ಕಚೇರಿ ಅವಧಿಯಲ್ಲಿ).

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

  • ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ 94 ಹುದ್ದೆ

    ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ 94 ಹುದ್ದೆ

    ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಎಪ್ರಿಲ್ 27 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ಹುದ್ದೆ : 94 ಸಿವಿಲ್ ನ್ಯಾಯಾಧೀಶ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಸಕ್ತರು ಆನ್‌ಲೈನ್‌ ಮೂಲಕ ಎಪ್ರಿಲ್ 27, 2021 ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

    ಅರ್ಜಿ ಶುಲ್ಕ : ಅರ್ಜಿದಾರರು ರೂ.500/- ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ -1 ಅಭ್ಯರ್ಥಿಗಳು ರೂ.250/- ಪಾವತಿಸಬೇಕಾಗುತ್ತದೆ.

    ವೇತನ : ಸಿವಿಲ್ ನ್ಯಾಯಾಧೀಶ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,700/- ರಿಂದ ರೂ. 44,770/- ರೂ.ಗಳ ವರೆಗೆ ವೇತನವಿರುತ್ತದೆ.

    ವಿದ್ಯಾರ್ಹತೆ : ಕಾನೂನು ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ವಯೋಮಿತಿ : ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ಮೀರಿರಬಾರದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

    ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕರ್ನಾಟಕ ಉಚ್ಛ ನ್ಯಾಯಾಯಲಯದ ಅಧಿಕೃತವೆಬ್‌ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಎಪ್ರಿಲ್ 27,2021 ರಾತ್ರಿ 11.59 ರೊಳಗೆ ಅರ್ಜಿಯನ್ನು ಸಲ್ಲಿಸಬಹದು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

    ನೋಟಿಫಿಕೇಶನ್‌ಗಾಗಿ ಈ ಲಿಂಕ್ ಕ್ಲಿಕ್ ಮಾಡಿ