Blog

  • UPSC NDA ಮತ್ತು NA(I) ಪ್ರವೇಶ ಪತ್ರ ಪ್ರಕಟ

    UPSC NDA ಮತ್ತು NA(I) ಪ್ರವೇಶ ಪತ್ರ ಪ್ರಕಟ

    ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್‌ಸಿ) ರಾಷ್ಟ್ರೀಯ ಭದ್ರತಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ( ಎನ್‌ಡಿಎ ಮತ್ತು ಎನ್‌ಎ(I)) ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟಿಸಿದೆ.
    ಒಟ್ಟು 400 ಹುದ್ದೆಗಳನ್ನು ಭರ್ತಿ ಮಾಡಲು ಜನವರಿ 19, 2021ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದೆ.

    ಯುಪಿಎಸ್ಸಿ ಎನ್‌ಡಿಎ(I) ಮತ್ತು ಎನ್‌ಎ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವ ವಿವರ ಇಲ್ಲಿದೆ :
    ಅಭ್ಯರ್ಥಿಗಳು ಯುಪಿಎಸ್ಸಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ, ಹೋಂ ಪೇಜ್‌ ನಲ್ಲಿ ಪ್ರವೇಶ ಪತ್ರದ ಲಿಂಕ್ ಕ್ಲಿಕ್ ಮಾಡಿ, ನಂತರ ಇನ್ನೊಂದು ಪುಟ ಬರುತ್ತೆ ಅಲ್ಲಿ ಬರುವ ಲಿಂಕ್ ಕ್ಲಿಕ್ ಮಾಡಿ, ಆಮೇಲೆ ಅಭ್ಯರ್ಥಿಗಳು ರಿಜಿಸ್ಟ್ರೇಶನ್ ಐಡಿ ಮತ್ತು ರೋಲ್ ನಂಬರ್ ನಮೂದಿಸಿ, ಪ್ರವೇಶ ಪತ್ರ ಸ್ಕ್ರೀನ್ ಮೇಲೆ ಕಾಣಿಸುತ್ತದೆ.

    ಯುಪಿಎಸ್ಸಿ ಅಧಿಕೃತ ವೆಬ್‌ಸೈಟ್ ಲಿಂಕ್ ಇಲ್ಲಿದೆ. https://www.upsc.gov.in/

  • ತುಮಕೂರಿನಲ್ಲಿ ಕ್ಯಾಂಪಸ್ ಸಂದರ್ಶನ

    ತುಮಕೂರಿನಲ್ಲಿ ಕ್ಯಾಂಪಸ್ ಸಂದರ್ಶನ

    ತುಮಕೂರಿನಲ್ಲಿರುವ ಶ್ರೀ ಸಿದ್ಧಗಂಗಾ ಐಟಿಐ ಕಾಲೇಜ್‌ನಲ್ಲಿ ಕ್ಯಾಂಪಸ್‌ ಸಂದರ್ಶನ ನಡೆಯಲಿದೆ. ಶ್ರೀ ಸಿದ್ಧಗಂಗಾ ಐ.ಟಿ.ಐ ಕಾಲೇಜಿನಲ್ಲಿ ಮಾರ್ಚ್ 30 ರಂದು ಬೆಳಗ್ಗೆ 9 ಗಂಟೆಗೆ ಕ್ಯಾಂಪಸ್ ಸಂದರ್ಶನ ನಡೆಯಲಿದೆ.
    ರಾಮನಗರದ ಬಿಡದಿಯಲ್ಲಿರುವ ಬಹುರಾಷ್ಟ್ರೀಯ ಕಂಪನಿ ಕ್ಯಾಂಪಸ್ ಸಂದರ್ಶನವನ್ನು ಆಯೋಜನೆ ಮಾಡಿದೆ.

    2020 ರ ಐಟಿಐ ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಬರಬಹುದು. ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಮತ್ತಯ ಐಟಿಐ ಅಂಕಪಟ್ಟಿಯನ್ನು ತಮ್ಮನ ಜೊತೆ ತರಬೇಕು.

    ಫಿಟ್ಟರ್,ಟರ್ನರ್, ಎಂಎಂಟಿಎಂ, ಎಂಎಂವಿ, ಮೆಕಾನಿಕ್ ಡೀಸೆಲ್, ಎಂಎಆರ್‌ಸಿ, ವೆಲ್ಡರ್ ವ್ಯಾಸಂಗ ಮಾಡಿರುವ ಅಭ್ಯರ್ಥಿಗಳು ಕ್ಯಾಂಪಸ್‌ ಸಂದರ್ಶನದಲ್ಲಿ ಭಾಗಿಯಾಬಹುದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಎನ್‌.ಸುನಿಲ್‌ ಪ್ರಾಂಶುಪಾಲರು, ಶ್ರೀ ಸಿದ್ಧಗಂಗಾ ಕೈಗಾರಿಕಾ ತರಬೇತಿ ಸಂಸ್ಥೆ, ಬಟವಾಡಿ ಇವರನ್ನು ಸಂಪರ್ಕಿಸಬಹುದು.

  • NIMHANS ಬೆಂಗಳೂರು : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    NIMHANS ಬೆಂಗಳೂರು : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ರಾಷ್ಟ್ರೀಯ ಪ್ರಾಮುಖ್ಯತೆ ಸಂಸ್ಥೆ) ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಎಪ್ರಿಲ್ 03,2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಹುದ್ದೆ: ಅಸಿಸ್ಟೆಂಟ್ ಪ್ರೊಫೆಸರ್ ಆಫ್ ಸೈಕ್ರಿಯಾಟ್ರಿ (ಮನಃಶಾಸ್ತ್ರ ಸಹಾಯಕ ಪ್ರಾಧ್ಯಾಪಕರು ) 1 ಹುದ್ದೆ
    ಸೈಕ್ರಿಯಾಟ್ರಿಕ್ ನರ್ಸಿಂಗ್ ಟ್ರೈನರ್ ( ಮನಃಶಾಸ್ತ್ರ ನರ್ಸಿಂಗ್ ತರಬೇತಿದಾರರು) 03 ಹುದ್ದೆ
    ಸೈಕಾಲಜಿಕಲ್ ಕೇರ್ ಟ್ರೈನರ್/ ಫೀಲ್ಡ್ ವರ್ಕ್ ಕೋರ್ಡಿನೇಟರ್-02 ಹುದ್ದೆ
    ಎಕ್ಸಿಕ್ಯುಟಿವ್ ಅಸಿಸ್ಟೆಂಟ್-01 ಹುದ್ದೆ

    ವಿದ್ಯಾರ್ಹತೆ: 1.ಅಸಿಸ್ಟೆಂಟ್ ಪ್ರೊಫೆಸರ್ ಆಫ್ ಸೈಕ್ರಿಯಾಟ್ರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು
    ಎಂಡಿ ಸೈಕಿಯಾಟ್ರಿ/ಡಿಎನ್ ಬಿ ಸೈಕ್ರಿಯಾಟ್ರಿ ಮಾಡಿರಬೇಕು.
    2.ಸೈಕ್ರಿಯಾಟ್ರಿಕ್ ನರ್ಸಿಂಗ್ ಟ್ರೈನರ್ ಹುದ್ದೆಗೆ ಎಂಎಸ್ಸಿ ಸೈಕ್ರಿಯಾಟ್ರಿಕ್ ನರ್ಸಿಂಗ್ ನ್ನು ಅಂಗೀಕೃತ ಯುನಿವರ್ಸಿಟಿಯಿಂದ ಪಡೆದಿರಬೇಕು.
    3.ಸೈಕಾಲಜಿಕಲ್ ಕೇರ್ ಟ್ರೈನರ್/ ಫೀಲ್ಡ್ ವರ್ಕ್ ಕೋರ್ಡಿನೇಟರ್ ಹುದ್ದೆಗೆ ಎಂಎಸ್ಸಿ ಸೈಕಾಲಜಿ/ ಮಾಸ್ಟರ್ಸ್ ಇನ್ ಸೋಶಿಯಲ್ ವರ್ಕ್ ವಿದ್ಯಾರ್ಹತೆಯನ್ನು ಪಡೆದಿರಬೇಕು. 4.ಎಕ್ಸಿಕ್ಯುಟಿವ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12th ತೇರ್ಗಡೆ ಹೊಂದಿರಬೇಕು.

    ವಯೋಮಿತಿ: ಅಸಿಸ್ಟೆಂಟ್ ಪ್ರೊಫೆಸರ್ ಆಫ್ ಸೈಕ್ರಿಯಾಟ್ರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 50 ವರ್ಷ, ಸೈಕ್ರಿಯಾಟ್ರಿಕ್ ನರ್ಸಿಂಗ್ ಟ್ರೈನರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ,
    ಸೈಕಾಲಜಿಕಲ್ ಕೇರ್ ಟ್ರೈನರ್/ ಫೀಲ್ಡ್ ವರ್ಕ್ ಕೋರ್ಡಿನೇಟರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವವರಿಗೆ 40 ವರ್ಷ,
    ಎಕ್ಸಿಕ್ಯುಟಿವ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ ವಯೋಮಿತಿ ಹೊಂದಿರಬೇಕು.

    ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

    ವೇತನ : ಅಸಿಸ್ಟೆಂಟ್ ಪ್ರೊಫೆಸರ್ ಆಫ್ ಸೈಕ್ರಿಯಾಟ್ರಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.1,40,000/-, ಸೈಕ್ರಿಯಾಟ್ರಿಕ್ ನರ್ಸಿಂಗ್ ಟ್ರೈನರ್ ಹುದ್ದೆಗೆ ಆಯ್ಕೆಯಾದವರಿಗೆ ತಿಂಗಳ ರೂ.40,000/-,
    ಸೈಕಾಲಜಿಕಲ್ ಕೇರ್ ಟ್ರೈನರ್/ ಫೀಲ್ಡ್ ವರ್ಕ್ ಕೋರ್ಡಿನೇಟರ್ ಹುದ್ದೆಗೆ ಆಯ್ಕೆಯಾದವರಿಗೆ ರೂ. 40,000/-,
    ಎಕ್ಸಿಕ್ಯುಟಿವ್ ಅಸಿಸ್ಟೆಂಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ ರೂ.15,000/- ವೇತನ ನಿಗದಿಪಡಿಸಲಾಗಿದೆ.

    ಅಭ್ಯರ್ಥಿಗಳು ಅರ್ಜಿ ಜೊತೆಗೆ ದಾಖಲೆಗಳನ್ನು ಪಿಡಿಎಫ್ ಫಾರ್ಮಾಟ್ ನಲ್ಲಿ ಇ- ಮೈಲ್ ಮೂಲಕ ಸಲ್ಲಿಸಬೇಕು. ‌

    ದಿನಾಂಕ 03-04-2021 ರ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

    ಇ-ಮೈಲ್ ವಿಳಾಸ- [email protected]

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

  • “ಶ್ರೀ ನಾರಾಯಣ ಗುರು ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್” ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ : ಈ ಕೂಡಲೇ ಸಂಪರ್ಕಿಸಿ

    “ಶ್ರೀ ನಾರಾಯಣ ಗುರು ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್” ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ : ಈ ಕೂಡಲೇ ಸಂಪರ್ಕಿಸಿ

    ನೂತನವಾಗಿ ಆರಂಭವಾದ “ಶ್ರೀ ನಾರಾಯಣ ಗುರು ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್”.ಬೆಂಗಳೂರು
    ಈ ಸಂಸ್ಥೆಗೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

    ಹುದ್ದೆ: ಕಾರ್ಯನಿರ್ವಹಣಾ ಅಧಿಕಾರಿ ಹುದ್ದೆಯನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ‌.

    ಅನುಭವ: 10 ವರ್ಷ ಕೋ-ಆಪರೇಟಿವ್ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅನುಭವವುಳ್ಳ ಅಭ್ಯರ್ಥಿ ಅಥವಾ ನಿವೃತ್ತ ಬ್ಯಾಂಕ್ ಮ್ಯಾನೇಜರ್ ಇವರ ಅಗತ್ಯವಿದ್ದು ಈ ಕೂಡಲೇ ಅರ್ಜಿ ಸಲ್ಲಿಸಬಹುದು.

    ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನಂಬರನ್ನು ಸಂಪರ್ಕಿಸಿ:
    7259150715

  • ನೋಟರಿ ಹುದ್ದೆಗೆ ಅರ್ಜಿ ಆಹ್ವಾನ

    ನೋಟರಿ ಹುದ್ದೆಗೆ ಅರ್ಜಿ ಆಹ್ವಾನ

    ಚಿಕ್ಕಮಗಳೂರು ಜಿಲ್ಲೆಯ ಕಡೂರು ಕಂದಾಯ ತಾಲ್ಲೂಕಿನಲ್ಲಿ ಹಾಗೂ ತರೀಕೆರೆ ಕಂದಾಯ ತಾಲ್ಲೂಕಿನಲ್ಲಿ ಖಾಲಿ ಇರುವ ಹುದ್ದೆಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ‌.

    ಹುದ್ದೆ: ನೋಟರಿ ಹುದ್ದೆ.

    ಹುದ್ದೆ ಸಂಖ್ಯೆ :03

    ಹುದ್ದೆ ವಿವರ : ತರೀಕೆರೆ ಕಂದಾಯ ತಾಲೂಕು -1 ನೋಟರಿ ಹುದ್ದೆ

    ಚಿಕ್ಕಮಗಳೂರು ಜಿಲ್ಲೆಯ ಕಡೂರು ಕಂದಾಯ ತಾಲ್ಲೂಕು- 2 ನೋಟರಿ ಹುದ್ದೆ

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28 ಎಪ್ರಿಲ್ 2021

    ವಿದ್ಯಾರ್ಹತೆ : ಅಭ್ಯರ್ಥಿಗಳು ಕಾನೂನು ಪದವೀಧರರಾಗಿರಬೇಕು. ಹಾಗೂ ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿಗಳು ನಿಗಧಿಪಡಿಸುವ ಕನಿಷ್ಠ ಅರ್ಹತೆಗಳು, ಕಾರ್ಯಾನುಭವವನ್ನು ಹೊಂದಿರಬೇಕು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿಗಳನ್ನು ಸಂಪರ್ಕಿಸಬಹುದು.

  • NIFT ನಲ್ಲಿ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ

    NIFT ನಲ್ಲಿ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ

    ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಟಕ್ನಾಲಜಿ (ಎನ್‌ಐಎಫ್‌ಟಿ) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 07,2021

    ಅರ್ಜಿ ಶುಲ್ಕ : ರೂ.1,180/- ಅರ್ಜಿ ಶುಲ್ಕವನ್ನು ಡಿಡಿ/ಬ್ಯಾಂಕ್‌ ಚೆಕ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

    ಹುದ್ದೆ : ಎನ್‌ಐಎಫ್‌ಟಿ ನಲ್ಲಿ ಖಾಲಿ ಇರುವ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಒಟ್ಟು ಹುದ್ದೆ : 42

    ವಿದ್ಯಾರ್ಹತೆ : ಪಿಹೆಚ್‌ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ವಯೋಮಿತಿ : ಗರಿಷ್ಠ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹದು. ನೇಮಕಾತಿ ನಿಯಮಾನುಸರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ಅಭ್ಯರ್ಥಿಗಳಿಗೆ ನೀಡಲಾಗಿದೆ.

    ವೇತನ : ಪ್ರಾಧ್ಯಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ರೂ.37,400/- ನೀಡಲಾಗುವುದು.

    ಆಯ್ಕೆ ಪ್ರಕ್ರಿಯೆ : ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

    ಆಸಕ್ತ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿ ಡೌನ್‌ಲೋಡ್ ಮಾಡಿ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ದಿನಾಂಕ 7, ಮೇ 2021 ರೊಳಗ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

    ಕಚೇರಿ ವಿಳಾಸ : The Registrar,NIFT Campus,Hauz Khas,Near Gulmohar Park, NEW DELHI – 110016.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ