Blog

  • SBI ಕ್ಲರ್ಕ್ ಫಲಿತಾಂಶ ಬಿಡುಗಡೆ

    SBI ಕ್ಲರ್ಕ್ ಫಲಿತಾಂಶ ಬಿಡುಗಡೆ

    ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು, ಎಸ್‌ಬಿಐ ಕ್ಲರ್ಕ್ 2020 ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಎಸ್‌ಬಿಐ ಕ್ಲರ್ಕ್ 2020 ಪರೀಕ್ಷೆ ಬರೆದ ಅಭ್ಯರ್ಥಿಗಳು ಮೊದಲ ಕಾಯ್ದಿರಿಸಿದ ಪಟ್ಟಿಯನ್ನುsbi.co.in ವೆಬ್‌ಸೈಟ್ ಗೆ ಭೇಟಿ ನೀಡಿ ಚೆಕ್ ಮಾಡಲು ಅವಕಾಶವಿದೆ.

    ಎಸ್‌ಬಿಐ ಕ್ಲರ್ಕ್ 2020 ಫಲಿತಾಂಶವನ್ನು ಮುಖ್ಯ ಪರೀಕ್ಷೆಗೆ ಬಿಡುಗಡೆ ಮಾಡಿದೆ. ಈ ಪರೀಕ್ಷೆಯನ್ನು ನವಂಬರ್ 07 ಮತ್ತು ಡಿಸೆಂಬರ್ 31,2020 ರಂದು ಮಾಡಲಾಗಿತ್ತು. ಈ ನೇಮಕಾತಿ ಪ್ರಕ್ರಿಯೆ ಮೂಲಕ 8000 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ವಿಶೇಷ ನೇಮಕಾತಿ ಡ್ರೈವ್ ನಲ್ಲಿ 130 ಹುದ್ದೆಗಳನ್ನು. 7870 ಹುದ್ದೆಗಳನ್ನು ರೆಗ್ಯುಲರ್ ಆಧಾರದಲ್ಲಿ ನೇಮಕ ಮಾಡಲಾಗುತ್ತದೆ.

    ತಾತ್ಕಾಲಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಹಾಗೂ ಇತರೆ ದಾಖಲೆಗಳನ್ನು ಪರಿಶೀಲನೆಗೆ ನಿಗದಿಪಡಿಸಿದ ದಿನಾಂಕದಂದು ನೀಡಬೇಕು. ಆಯ್ಕೆಯಾದ ಅಭ್ಯರ್ಥಿಗಳನ್ನು ಎಸ್‌ಬಿಐ ಕಸ್ಟಮರ್ ಸಪೋರ್ಟ್ ಮತ್ತು ಸೇಲ್ಸ್ ವಿಭಾಗಕ್ಕೆ ಜೂನಿಯರ್ ಅಸಿಸ್ಟೆಂಟ್ ಆಗಿ ನೇಮಕ ಮಾಡಿಕೊಳ್ಳಲಾಗುತ್ತದೆ.

  • ಜನರಲ್ ಇನ್‌ಶುರೆನ್ಸ್ ಕಾಪೋರೇಶನ್‌ ಆಫ್ ಇಂಡಿಯಾದಲ್ಲಿ ಹುದ್ದೆ

    ಜನರಲ್ ಇನ್‌ಶುರೆನ್ಸ್ ಕಾಪೋರೇಶನ್‌ ಆಫ್ ಇಂಡಿಯಾದಲ್ಲಿ ಹುದ್ದೆ

    ಜನರಲ್ ಇನ್‌ಶುರೆನ್ಸ್‌ ಕಾರ್ಪೋರೇಶನ್ ಆಫ್ ಇಂಡಿಯಾ ದಲ್ಲಿ ಹುದ್ದೆಗಳಿದ್ದು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

    ಹುದ್ದೆ : ಅಸಿಸ್ಟೆಂಟ್ ಮ್ಯಾನೇಜರ್ ಆಪೀಸರ್(ಸ್ಕೇಲ್ I) ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಒಟ್ಟು ಹುದ್ದೆಗಳ ಸಂಖ್ಯೆ : 44

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 29, 2021

    ಅರ್ಜಿ ಶುಲ್ಕ : ಅರ್ಜಿದಾರರು ರೂ. 850/- ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.

    ವಯೋಮಿತಿ : ಫೆಬ್ರವರಿ 1,2021 ರ ಅನ್ವಯ ಕನಿಷ್ಟ21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ. ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ಅಭ್ಯರ್ಥಿಗಳಿಗೆ ನೀಡಲಾಗಿರುತ್ತದೆ.

    ವಿದ್ಯಾರ್ಹತೆ : ಪದವಿ,ಸಿಎ, ಎಲ್‌ಎಲ್‌ಬಿ.ಪಿಜಿ/ಡಿಪ್ಲೋಮಾ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು.

    ಆಸಕ್ತ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮಾರ್ಚ್ 29,2021 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

    ನೋಟಿಫಿಕೇಶನ್‌ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • 34 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆ: ವಿವರ ಇಲ್ಲಿದೆ

    34 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆ: ವಿವರ ಇಲ್ಲಿದೆ

    ಉಡುಪಿ ಜಿಲ್ಲೆಯ ನಾಲ್ಕು ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 16.04.2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಕ್ವಿಕ್ ಲುಕ್
    ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಕ
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 23.03.2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-04-2021
    ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.

    ಈಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸುವಂತೆ ಇಲ್ಲ.

    ಹುದ್ದೆಗಳ ವಿವರ: ಉಡುಪಿ ಜಿಲ್ಲೆಯ ನಾಲ್ಕು ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ 7 ಅಂಗನವಾಡಿ ಕಾರ್ಯಕರ್ತೆ ಹಾಗೂ 27 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ‌.

    ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತೆಗೆ ಎಸ್ ಎಸ್ ಎಲ್ ಸಿ ಪಾಸಾಗಿರಬೇಕು.
    ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ 4 ನೇ ತರಗತಿ ಹಾಗೂ ಗರಿಷ್ಠ 9 ನೇ ತರಗತಿ ತೇರ್ಗಡೆ ಹೊಂದಿರಬೇಕು.

    ವಯೋಮಿತಿ: ಕನಿಷ್ಠ 18 ಹಾಗೂ ಗರಿಷ್ಠ 35 ಆಯ್ಕೆ ವಯೋಮಿತಿ ಯ ಅದೇ ಗ್ರಾಮದ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ‌.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ.

    ಆನ್ಲೈನ್ ಅಪ್ಲಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

    ನೋಟಿಫಿಕೇಶನ್‌ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • DHFWS ಸಂದರ್ಶನ ದಿನಾಂಕ ಪ್ರಕಟಣೆ

    DHFWS ಸಂದರ್ಶನ ದಿನಾಂಕ ಪ್ರಕಟಣೆ

    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ/ಹೊಸಕೋಟೆ/ದೊಡ್ಡಬಳ್ಳಾಫುರ/ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗಳ ಕೋವಿಡ್ -19 ಐಸೋಲೇಶನ್ ವಾರ್ಡ್‌ಗಳಲ್ಲಿ ಕರ್ತವ್ಯ ನಿರ್ವಹಿಸಲು ಈ ಕೆಳಕಂಡ ವೈದ್ಯಕೀಯ ಹಾಗೂ ಅರೆ ವೈದ್ಯಕೀಯ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಸೆಪ್ಪೆಂಬರ್ 2021 ರವರೆಗೆ ನೇಮಕಾತಿ ಮಾಡಿಕೊಳ್ಳಲು ನೇರ ಸಂದರ್ಶನವನ್ನು ದಿನಾಂಕ 22/03/2021 ರಿಂದ (3 ದಿನಗಳು ಮಾತ್ರ) ಹಮ್ಮಿಕೊಳ್ಳಲಾಗಿದ್ದು ಆಸಕ್ತಿವುಳ್ಳ ಅಭ್ಯರ್ಥಿಗಳು ಮೂಲ ದಾಖಲಾತಿ ಮತ್ತು ಜೆರಾಕ್ಸ್‌ ಪ್ರತಿಗಳೊಂದಿಗೆ ಬೆಳಗ್ಗೆ 11.೦೦ ಗಂಟೆಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಡಳಿತ ಭವನದ ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ, ಕೊಠಡಿ ಸಂಖ್ಯೆ -207, 2ನೇ ಮಹಡಿ, ಬೀರಸಂದ್ರ ಗ್ರಾಮ, ವಿಶ್ವನಾಥಪುರ ಅಂಚೆ ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು ಇಲ್ಲಿ ಸಂಪರ್ಕಿಸುವುದು.

  • ನಮ್ಮ ಮೆಟ್ರೋ ಉದ್ಯೋಗವಕಾಶ: ಈ ಕೂಡಲೇ ಅರ್ಜಿ ಸಲ್ಲಿಸಿ

    ನಮ್ಮ ಮೆಟ್ರೋ ಉದ್ಯೋಗವಕಾಶ: ಈ ಕೂಡಲೇ ಅರ್ಜಿ ಸಲ್ಲಿಸಿ

    ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ(ಬಿಎಂಆರ್‌ಸಿಎಲ್‌) ವು ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಹುದ್ದೆ ವಿವರ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಈ ಕೆಳಗಿನಂತಿದೆ.

    ಹುದ್ದೆ : ನಮ್ಮ ಮೆಟ್ರೋನಲ್ಲಿ ಪ್ರಧಾನ ವ್ಯವಸ್ಥಾಪಕರು (ಎಫ್‌&ಎ) ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನುನ ಸಲ್ಲಿಸಬಹುದು.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20-04-2021ಸಂಜೆ 4.00 ಗಂಟೆಯವರೆಗೆ

    ಹುದ್ದೆ ಸಂಖ್ಯೆ : 01

    ವಯೋಮಿತಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 55 ವಯಸ್ಸು ಮೀರಿರಬಾರದು.

    ವಿದ್ಯಾಭ್ಯಾಸ : ಅಭ್ಯರ್ಥಿಗಳು ಅಂಗೀಕೃತ ಯುನಿವರ್ಸಿಟಿಯಿಂದ ಗ್ರಾಜ್ಯುಯೇಟ್‌ ಇನ್ ಕಾಮರ್ಸ್‌ ನ್ನು ಪಡೆದಿರಬೇಕು. ಪ್ರೊಫೆಷನಲ್ ಕ್ವಾಲಿಫಿಕೇಶನ್ ಗಳಾದ ಚಾರ್ಟೆಡ್ ಅಕೌಂಟೆಂಟ್(ಸಿಎ)/ ಕಾಸ್ಟ್ ಅಕೌಂಟೆಂಟ್(ಐಸಿಡ್ಬ್ಯುಎ)/ಎಂಬಿಎ(ಪೂರ್ಣ ಅವಧಿ) ಯಲ್ಲಿ ಫೈನಾನ್ಸ್‌ ಹೊಂದಿರಬೇಕು.

    ವೇತನ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 1,40,000/- ಮಾಸಿಕ ವೇತನ ನಿಗದಿಯಾಗಿರುತ್ತದೆ.

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿ ಡೌನ್‌ಲೋಡ್ ಮಾಡಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ಎಪ್ರಿಲ್ 20-04-2021 ಸಂಜೆ 4.00 ಗಂಟೆಯೊಳಗೆ ಸಲ್ಲಿಸಬೇಕು.

    ವಿಳಾಸ ಈ ಕೆಳಗಿನಂತಿದೆ:
    General Manager (HR&T),Bangalore Metro Rail Corportion Limited,3rd Floor, BMTC Complex,K.H. Road, Shanthinagar, Bangalore-560027

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

    ನೋಟಿಫಿಕೇಶನ್‌ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

    ಆನ್ಲೈನ್ ಅಪ್ಲಿಕೇಶನ್‌ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಬಾಲಕಾರ್ಮಿಕ ಯೋಜನಾ ಸೊಸೈಟಿ ಯಲ್ಲಿ ಹುದ್ದೆ

    ಬಾಲಕಾರ್ಮಿಕ ಯೋಜನಾ ಸೊಸೈಟಿ ಯಲ್ಲಿ ಹುದ್ದೆ

    ಧಾರವಾಡ ಜಿಲ್ಲೆ ಬಾಲಕಾರ್ಮಿಕ ಯೋಜನಾ ಸೊಸೈಟಿಯಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಎಪ್ರಿಲ್ 20 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಹುದ್ದೆ: ಬಾಲ ಕಾರ್ಮಿಕ ಯೋಜನಾ ಸೊಸೈಟಿಯು ಯೋಜನಾ ನಿರ್ದೇಶಕರ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಎಪ್ರಿಲ್ 20,2021

    ವೇತನ: ಗೌರವ ಧನದ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ‌.

    ವಿದ್ಯಾರ್ಹತೆ: ಅಭ್ಯರ್ಥಿಗಳು ಸಮಾಜ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಎಂ.ಎಸ್.ಡಬ್ಲ್ಯೂ, ಅಭಿವೃದ್ಧಿ ಅಧ್ಯಯನ, ಲಾಭರಹಿತ ಸಂಸ್ಥೆಗಳ(ಎನ್ ಜಿಒ) ಹಾಗೂ ನಿರ್ವಹಣಾ ಶಾಸ್ತ್ರ ದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.

    ಅನುಭವ : ಹಲವು ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ 5 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದು, ಬಾಲಕಾರ್ಮಿಕ ನಿರ್ಮೂಲನೆ ಮಾಡುವಲ್ಲಿ ಅನುಭವ ಇರುವವರಿಗೆ ಆದ್ಯತೆ.

    ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಿತಿ ಒಳಗಿರಬೇಕು.

    ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನ್ನಡ ಮತ್ತು ಇಂಗ್ಲೀಷ್ ಮಾತನಾಡಲು ಹಾಗೂ ಬರೆಯುವ ಕೌಶಲ್ಯ ತಿಳಿದಿರಬೇಕು. ಕಂಪ್ಯೂಟರ್ ಜ್ಞಾನ, ಕಚೇರಿ ಲೆಕ್ಕ ಪತ್ರಗಳ ನಿರ್ವಹಣೆ ತಿಳಿದಿರಬೇಕು.

    ಯಾವುದೇ ಸರಕಾರಿ ಕೆಲಸದಿಂದ ವಜಾಗೊಂಡಿರುವವರು, ನಿವೃತ್ತಿ ಹೊಂದಿರುವ, ಸರ್ಕಾರಿ ಕೆಲಸ ಮಾಡುತ್ತಿರುವ ಅಭ್ಯರ್ಥಿಗಳ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

    ಅರ್ಜಿಗಳಿಗಾಗಿ ಯೋಜನಾ ನಿರ್ದೇಶಕರು, ರಾಷ್ಟ್ರಿಯ ಬಾಲ ಕಾರ್ಮಿಕ ಯೋಜನಾ ಸಂಘ, ಜಿಲ್ಲಾಧಿಕಾರಿಗಳ ಕಾರ್ಯಾಲಯವನ್ನು ಸಂಪರ್ಕಿಸಬಹುದು.

    ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿಳಾಸಕ್ಕೆ ಎಪ್ರಿಲ್ 20, 2021 ರೊಳಗಾಗಿ ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಬೇಕು.

    ವಿಳಾಸ:
    ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ, ಧಾರವಾಡ