Blog

  • ಪಿಹೆಚ್‌ಡಿ ಸೀಟುಗಳ ಹಂಚಿಕೆ ದಿನಾಂಕ ಪ್ರಕಟ

    ಪಿಹೆಚ್‌ಡಿ ಸೀಟುಗಳ ಹಂಚಿಕೆ ದಿನಾಂಕ ಪ್ರಕಟ

    2019 ರಲ್ಲಿ ಪಿಎಚ್ಡಿ ನೋಂದಣಿಗಾಗಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿಭಾಗಗಳಲ್ಲಿರುವ ಮಾರ್ಗದರ್ಶಕರುಗಳ ಬಳಿ ಬಾಕಿ ಉಳಿದಿರುವ ಸೀಟುಗಳಿಗಾಗಿ, 2ನೇ ಸುತ್ತಿನ ಹಂಚಿಕೆ ಪ್ರಕ್ರಿಯೆಯು (2nd Round Counselling for Ph.d) ದಿನಾಂಕ 17-03-2021 ರಂದು ಸಂಬಂಧ ಪಟ್ಟ ಸ್ನಾತಕೋತ್ತರ ವಿಭಾಗದಲ್ಲಿ ಬೆಳಗ್ಗೆ 9.30 ಗಂಟೆಗೆ ನಡೆಸಲಾಗುವುದು ಎಂದು ತಿಳಿಸಲಾಗಿದೆ. ಮೊದಲನೇ ಸುತ್ತಿನ ಪ್ರವೇಶ ಪ್ರಕ್ರಿಯೆಯಲ್ಲಿ ಗೈರು ಹಾಜರಾದ ಹಾಗೂ ಸೀಟುಗಳು ಹಂಚಿಕೆಯಾಗದ ಅರ್ಜಿದಾರರು 2 ನೇ ಸುತ್ತಿನ ಪ್ರವೇಶ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದೆಂದು ತಿಳಿಸಲಾಗಿದೆ.

    ಬಾಕಿ ಉಳಿದಿರುವ ವಿವರಗಳನ್ನು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್‌ bangaloreuniversity.ac.in ನಲ್ಲಿ ಶೀಘ್ರವಾಗಿ ಪ್ರಕಟಿಸಲಾಗುವುದು.

  • ಡಿಎಚ್ಎಫ್ ಡಬ್ಲ್ಯೂ ಎಸ್ ನಲ್ಲಿ ಉದ್ಯೋಗವಕಾಶ

    ಡಿಎಚ್ಎಫ್ ಡಬ್ಲ್ಯೂ ಎಸ್ ನಲ್ಲಿ ಉದ್ಯೋಗವಕಾಶ

    ಡಿಸ್ಟ್ರಿಕ್ಟ್‌ ಹೆಲ್ತ್ ಆಂಡ್ ಫ್ಯಾಮಿಲಿ ವೆಲ್ಫಾರ್ ಸೊಸೈಟಿ ತುಮಕೂರು (ಡಿಎಚ್ ಎಫ್ ಡಬ್ಲ್ಯೂ ಎಸ್) ( ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ) ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಸಂದರ್ಶನ ದಿನಾಂಕ 23-03-2021. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಕ್ವಿಕ್ ಲುಕ್

    ನೋಟಿಫಿಕೇಶನ್ ರಿಲೀಸ್ ಆದ ದಿನಾಂಕ: 09-03-2021
    ಸಂದರ್ಶನದ ದಿನಾಂಕ: 23-03-2021
    ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಾಗಿಲ್ಲ.

    ಹುದ್ದೆಗಳ ವಿವರ : ಡಿಸ್ಟ್ರಿಕ್ಟ್‌ ಹೆಲ್ತ್ ಆಂಡ್ ಫ್ಯಾಮಿಲಿ ವೆಲ್ಫಾರ್ ಸೊಸೈಟಿ ತುಮಕೂರು (ಡಿಎಚ್ ಎಫ್ ಡಬ್ಲ್ಯೂ ಎಸ್) ನಲ್ಲಿ ಜನರಲ್ ಡ್ಯೂಟಿ ಡಾಕ್ಟರ್ಸ್ , ಮೆಡಿಕಲ್ ಆಫೀಸರ್ಸ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ಅರವಳಿಕೆ ತಜ್ಞರು- 3
    ಮಕ್ಕಳ ತಜ್ಞರು-2
    ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರು-3
    ಸ್ಪೆಷಲಿಸ್ಟ್-1
    ಫಿಸಿಷಿಯನ್-1
    ಸಾಮಾನ್ಯ ಕರ್ತವ್ಯ ವೈದ್ಯರು-9

    ವೈದ್ಯಾಧಿಕಾರಿಗಳು-7
    ಶುಶ್ರೂಷಕರು-4
    ಆಶಾ ಮೇಲ್ವಿಚಾರಕರು-1
    ಹಿರಿಯ ಮಹಿಳಾ ಆರೋಗ್ಯ ಸಹಾಯಕರು – 2
    ತಾಂತ್ರಿಕ ಮೇಲ್ವಿಚಾರಕರು- 1

    ಒಟ್ಟು ಹುದ್ದೆ : 34

    ವಿದ್ಯಾರ್ಹತೆ : ಹುದ್ದೆಗಳಿಗನುಸಾರವಾಗಿ ಅಭ್ಯರ್ಥಿಗಳು ಎಂ.ಡಿ, ಡಿ.ಎ, ಡಿಎನ್ ಬಿ, ಡಿಸಿಎಚ್, ಡಿಎನ್ ಬಿ, ಡಿ.ಎಂ, ಡಿ.ಜಿ.ಒ, ಡಿ.ಎನ್.ಬಿ, ಎಂಬಿಬಿಎಸ್, ಡಿಪ್ಲೋಮಾ, ಬಿಎಸ್ಸಿ, ಜಿಎನ್ ಎಂ, ಎಸ್ ಎಸ್ ಎಲ್ ಸಿ, ಪಿಯುಸಿ ಪಾಸಾಗಿರಬೇಕು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

    ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಹಾವೇರಿ ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಹಾವೇರಿ ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಹಾವೇರಿ ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 22 ಮಾರ್ಚ್ ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಕ್ವಿಕ್ ಲುಕ್
    ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಕ
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 08-03-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-03-2021
    ಡಾಕ್ಯುಮೆಂಟ್ ವೆರಿಫಿಕೇಶನ್ ದಿನಾಂಕ : 26-03-2021 (10.30 a.m ನಿಂದ 5.00 pm)
    ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

    ಹುದ್ದೆಗಳ ವಿವರ : ಹಾವೇರಿ ಜಿಲ್ಲಾ ಪಂಚಾಯತ್ ನಲ್ಲಿ ತಾಲ್ಲೂಕು MIS ಕಾರ್ಡಿನೇಟರ್-1
    ತಾಲ್ಲೂಕು ಟೆಕ್ನಿಕಲ್ ಕಾರ್ಡಿನೇಟರ್ -06
    ಟೆಕ್ನಿಕಲ್ ಅಸಿಸ್ಟೆಂಟ್ – 14 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಒಟ್ಟು ಹುದ್ದೆ : 21

    ವಿದ್ಯಾರ್ಹತೆ : ತಾಲ್ಲೂಕು MIS ಕಾರ್ಡಿನೇಟರ್ ಹುದ್ದೆಗೆ ಅರ್ಜಿ ಹಾಕುವ ಅಭ್ಯರ್ಥಿಗಳು ಗ್ರಾಜ್ಯುಯೇಶನ್, ಪೋಸ್ಟ್ ಗ್ರಾಜ್ಯುಯೇಶನ್, ಎಂಸಿಎ ಪಾಸಾಗಿರಬೇಕು.
    ತಾಲ್ಲೂಕು ಟೆಕ್ನಿಕಲ್ ಕಾರ್ಡಿನೇಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಇ ಅಥವಾ ಬಿ.ಟೆಕ್ ತೇರ್ಗಡೆ ಹೊಂದಿರಬೇಕು.
    ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ಡಿಪ್ಲೋಮಾ, ಬಿಇ, ಅಥವಾ ಬಿ.ಟೆಕ್ ಪಾಸಾಗಿರಬೇಕು.

    ವಯೋಮಿತಿ : ತಾಲ್ಲೂಕು MIS ಕಾರ್ಡಿನೇಟರ್-40 ವಯೋಮಿತಿ
    ತಾಲ್ಲೂಕು ಟೆಕ್ನಿಕಲ್ ಕಾರ್ಡಿನೇಟರ್ ಹಾಗೂ
    ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ 45 ವಯೋಮಿತಿ ಹೊಂದಿರಬೇಕು.

    MGNREGA ನಲ್ಲಿ ಕೆಲಸ ಮಾಡುವ ಅಭ್ಯರ್ಥಿಗಳಿಗೆ 4 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ವೇತನ: ತಾಲ್ಲೂಕು MIS ಕಾರ್ಡಿನೇಟರ್- 18,000/-
    ತಾಲ್ಲೂಕು ಟೆಕ್ನಿಕಲ್ ಕಾರ್ಡಿನೇಟರ್ -29,000/-
    ಟೆಕ್ನಿಕಲ್ ಅಸಿಸ್ಟೆಂಟ್ – 19,000/- ರಿಂದ 24,000/- ರೂ.ಗಳವರೆಗೆ ತಿಂಗಳ ವೇತನ ನಿಗದಿಪಡಿಸಲಾಗಿದೆ.

    ಅಭ್ಯರ್ಥಿಗಳು ಹಾವೇರಿ ಜಿಲ್ಲಾ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅರ್ಜಿ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಆನ್ಲೈನ್ ಮೂಲಕ ಸಲ್ಲಿಸಬೇಕು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

    ಆನ್ಲೈನ್ ಅಪ್ಲಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

    ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಶಿವಮೊಗ್ಗ ಸ್ಮಾರ್ಟ್ ಸಿಟಿ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಶಿವಮೊಗ್ಗ ಸ್ಮಾರ್ಟ್ ಸಿಟಿ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಬಹುದು.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 06-03-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09-04-2021

    ಹುದ್ದೆಗಳ ವಿವರ : ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಜನರಲ್ ಮ್ಯಾನೇಜರ್ ಹಾಗೂ ಸೀನಿಯರ್ ಅರ್ಬನ್ ಪ್ಲಾನರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ಒಟ್ಟು ಹುದ್ದೆ – 2

    ಹುದ್ದೆ ಸ್ಥಳ :ಶಿವಮೊಗ್ಗ- ಕರ್ನಾಟಕ

    ವೇತನ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 1,00,000/- ವೇತನವನ್ನು ನೀಡಲಾಗುತ್ತದೆ.

    ವಿದ್ಯಾರ್ಹತೆ : ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರಿಟೈರ್ಡ್ ಜನರಲ್ ಮ್ಯಾನೇಜರ್ (admin) ಡೆಪ್ಯುಟಿ ಸೆಕ್ರೆಟರಿ ಗವರ್ನಮೆಂಟ್ ಲೆವಲ್ ಆಫೀಸರ್‌ ಆಗಿರಬೇಕು.

    ಸೀನಿಯರ್ ಅರ್ಬನ್ ಪ್ಲಾನರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಇ, ಬಿ.ಆರ್ಚ್, ಬಿ.ಪ್ಲಾನ್, ಪೋಸ್ಟ್ ಗ್ರಾಜ್ಯುಯೇಟ್ ಹೊಂದಿರಬೇಕು.

    ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 64 ವರ್ಷ ಮೇಲ್ಪಟ್ಟಿರಬಾರದು.

    ಅರ್ಜಿ ಶುಲ್ಕ : ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

    ವೇತನ : ಜನರಲ್ ಮ್ಯಾನೇಜರ್ ಹುದ್ದೆಗೆ ತಿಂಗಳಿಗೆ ರೂ. 74,400/-, ಸೀನಿಯರ್ ಅರ್ಬಯ ಪ್ಲಾನರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 1,00,000/- ವೇತನ ನಿಗದಿಪಡಿಸಲಾಗಿದೆ.

    ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಈ ಕೆಳಗಿನ ಈ ಮೈಲ್ ಐಡಿಗೆ ದಿನಾಂಕ 09-04-2021 ರೊಳಗಾಗಿ ಕಳುಹಿಸಬಹುದು.

    [email protected]

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

    ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

    ಆನ್ಲೈನ್ ಅಪ್ಲಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಅರ್ಚಕರ ಹುದ್ದೆಗೆ ಅರ್ಜಿ ಆಹ್ವಾನ

    ಅರ್ಚಕರ ಹುದ್ದೆಗೆ ಅರ್ಜಿ ಆಹ್ವಾನ

    ಬೆಂಗಳೂರು ನಗರ ತಿಗಳರಪೇಟೆಯಲ್ಲಿರುವ ಶ್ರೀ ಧರ್ಮರಾಯಸ್ವಾಮಿ ದೇವಾಲಯದಲ್ಲಿ ಖಾಲಿ ಇರುವ ಸರದಿ ಅರ್ಚಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ಅರ್ಹ ಅಭ್ಯರ್ಥಿಗಳು ದಿನಾಂಕ 20-03-2021 ರ ಸಂಜೆ 5:00 ಗಂಟೆಯವರೆಗೆ ಲಿಖಿತ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.
    ದೂರವಾಣಿ ಸಂಖ್ಯೆ: 080-26506666

  • ಮಂಡ್ಯ ಜಿಲ್ಲಾ ಪಂಚಾಯತ್ ಹುದ್ದೆಗೆ ಅರ್ಜಿ ಆಹ್ವಾನ

    ಮಂಡ್ಯ ಜಿಲ್ಲಾ ಪಂಚಾಯತ್ ಹುದ್ದೆಗೆ ಅರ್ಜಿ ಆಹ್ವಾನ

    ಮಂಡ್ಯ ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 25 ಮಾರ್ಚ್ ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಕ್ವಿಕ್ ಲುಕ್
    ಅರ್ಜಿ ಸಲ್ಲಿಸುವುದು ಹೇಗೆ?: ಆಫ್ ಲೈನ್
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 08-03-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-03-2021
    ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ಮಂಡ್ಯ ಜಿಲ್ಲಾ ಪಂಚಾಯತ್ ನಲ್ಲಿ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ಒಟ್ಟು ಹುದ್ದೆ : 03

    ಹುದ್ದೆ ಸ್ಥಳ : ಮಂಡ್ಯ- ಕರ್ನಾಟಕ

    ವೇತನ: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.24,000/- ವೇತನವನ್ನು ನಿಗದಿಪಡಿಸಲಾಗಿದೆ.

    ಹುದ್ದೆಗಳ ವಿವರ: ಟೆಕ್ನಿಕಲ್ ಅಸಿಸ್ಟೆಂಟ್ ( ಫಾರೆಸ್ಟ್)- 2
    ಟೆಕ್ನಿಕಲ್ ಅಸಿಸ್ಟೆಂಟ್ ( ವ್ಯವಸಾಯ ) 1

    ವಿದ್ಯಾರ್ಹತೆ : ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ/ ಯುನಿವರ್ಸಿಟಿ ಯಿಂದ ಎಂ.ಎಸ್ಸಿ ಹೊಂದಿರಬೇಕು.

    ವಯೋಮಿತಿ : ಕನಿಷ್ಠ 21 ಹಾಗೂ ಗರಿಷ್ಠ 40 ವಯೋಮಿತಿ ಹೊಂದಿರಬೇಕು.

    ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅರ್ಜಿ ಡೌನ್‌ಲೋಡ್ ಮಾಡಿ, ಭರ್ತಿ ಮಾಡಿ, ಆಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿಬ ವಿಳಾಸಕ್ಕೆ ಸ್ಪೀಡ್ ಪೋಸ್ಟ್ ಅಥವಾ ರಿಜಿಸ್ಟರ್ ಪೋಸ್ಟ್ ಮೂಲಕ ಸಲ್ಲಿಸಬೇಕು.-25- 03-2021 ರೊಳಗಾಗಿ ಸಲ್ಲಿಸಬೇಕು.

    ವಿಳಾಸ:

    Chief Executive Officers, Zilla Panchayat, Mandya – 571401, Karnataka.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ:

    https://mandya.nic.in/en/