Blog

  • ಐಎಫ್ ಎಸ್ ನಲ್ಲಿ 110 ಹುದ್ದೆಗೆ ಅರ್ಜಿ ಆಹ್ವಾನ

    ಐಎಫ್ ಎಸ್ ನಲ್ಲಿ 110 ಹುದ್ದೆಗೆ ಅರ್ಜಿ ಆಹ್ವಾನ

    ಕೇಂದ್ರ ಲೋಕಸೇವಾ ಆಯೋಗದಿಂದ ಪ್ರತಿವರ್ಷ ಕರೆಯಲಾಗುತ್ತಿರುವ ಐಎಫ್ ಎಸ್ (ಇಂಡಿಯನ್ ಫಾರೆಸ್ಟ್ ಸರ್ವಿಸಸ್ ) ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ಹುದ್ದೆಗಳ ಸಂಖ್ಯೆ : ಒಟ್ಟು 110 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಆನ್ ಲೈನ್ ಅರ್ಜಿ ಈಗಾಗಲೇ ಪ್ರಾಭವಾಗಿದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

    ಮುಖ್ಯ ದಿನಾಂಕ

    ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 04-03-2021

    ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 24-03-2021

    ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 24-03-2021

    ವಿದ್ಯಾರ್ಹತೆ : ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಬಿ.ಎಸ್ಸಿ ಪದವಿಯನ್ನು ಪಾಸಾಗಿರಬೇಕು.

    ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 21ಹಾಗೂ ಗರಿಷ್ಠ ವಯೋಮಿತಿ 32 ಹೊಂದಿರಬೇಕು.

    ಅರ್ಜಿ ಶುಲ್ಕ :ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ರೂ.100/- ಹಾಗೂ ಎಸ್.ಟಿ, ಎಸ್.ಸಿ, ಮಹಿಳಾ ಅಭ್ಯರ್ಥಿಗಳಿಗೆ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

    ಆಯ್ಕೆ ವಿಧಾ‌ನ : ಅಭ್ಯರ್ಥಿಗಳಿಗೆ ಎರಡು ಹಂತದಲ್ಲಿ ಲಿಖಿತ ಪರೀಕ್ಷೆ ಗಳನ್ನು ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

    https://upsconline.nic.in/mainmenu2.php

  • ಕರ್ನಾಟಕ ಯುನಿವರ್ಸಿಟಿ ಧಾರವಾಡದಲ್ಲಿ ನೇಮಕ

    ಕರ್ನಾಟಕ ಯುನಿವರ್ಸಿಟಿ ಧಾರವಾಡದಲ್ಲಿ ನೇಮಕ

    ಕರ್ನಾಟಕ ಯುನಿವರ್ಸಿಟಿ ಧಾರವಾಡ (ಕೆಯುಡಿ) ನಲ್ಲಿ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 15 ಮಾರ್ಚ್, 2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಕ್ವಿಕ್ ಲುಕ್

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 06-03-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-03-2021
    ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು ಪಾವತಿಸುವಂತಿಲ್ಲ.

    ಕೆಯುಡಿ ನಲ್ಲಿ ರಿಸರ್ಚ್ ಅಸಿಸ್ಟೆಂಟ್ -1 ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ವಯೋಮಿತಿ : ಕೆಯುಡಿ ನೇಮಕಾತಿ ನಿಯಮಾನುಸಾರ ಅಭ್ಯರ್ಥಿಗಳು ವಯೋಮಿತಿಯನ್ನು ಹೊಂದಿರಬೇಕು.

    ವಿದ್ಯಾರ್ಹತೆ :ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ/ಬೋರ್ಡ್/ಯುನಿವರ್ಸಿಟಿ ಯಿಂದ ಎಂ.ಫಿಲ್, ಪೋಸ್ಟ್ ಗ್ರಾಜ್ಯುಯೇಶನ್ ಹೊಂದಿರಬೇಕು.

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅರ್ಜಿ ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ 15-03-2021 ರೊಳಗೆ ಸ್ಪೀಡ್ ಪೋಸ್ಟ್, ರಿಜಿಸ್ಟರ್ ಪೋಸ್ಟ್ ಮೂಲಕ ಸಲ್ಲಿಸಬೇಕು.

    Dr. Tanushri N. Anchan, Project Director, Department of Criminology & Forensic Science, Karnataka University, Dharwad

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

  • ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆಯಲ್ಲಿ 170 ಹುದ್ದೆಗಳಿಗೆ ಅರ್ಜಿ ಆಹ್ವಾನ

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆಯಲ್ಲಿ 170 ಹುದ್ದೆಗಳಿಗೆ ಅರ್ಜಿ ಆಹ್ವಾನ

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಳ್ಳಾರಿ ನಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 05 ಎಪ್ರಿಲ್ 2021 (5.30pm) ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಕ್ವಿಕ್ ಲುಕ್
    ಅರ್ಜಿ ಸಲ್ಲಿಸುವುದು ಹೇಗೆ?:ಆನ್ಲಲೈನ್ ಮೂಲಕ
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 06-03-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-04-2021(5.30)
    ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.

    ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ ‌35 ವಯೋಮಿತಿ ಹೊಂದಿರಬೇಕು.
    ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ವಿದ್ಯಾರ್ಹತೆ : ಅಂಗನವಾಡಿ ಕಾರ್ಯಕರ್ತೆಯ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ತೇರ್ಗಡೆ ಹೊಂದಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 4th,9th ಪಾಸಾಗಿರಬೇಕು.

    ಹುದ್ದೆಗಳ ಸಂಖ್ಯೆ : ಅಂಗನವಾಡಿ ಕಾರ್ಯಕರ್ತೆಯ ಒಟ್ಟು ಹುದ್ದೆ-36

    ಅಂಗನವಾಡಿ ಸಹಾಯಕಿ ಒಟ್ಟು ಹುದ್ದೆ -134

    ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ವಿದ್ಯಾರ್ಹತೆ : ಅಂಗನವಾಡಿ ಕಾರ್ಯಕರ್ತೆಯ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ತೇರ್ಗಡೆ ಹೊಂದಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 4th,9th ಪಾಸಾಗಿರಬೇಕು.

    ಹುದ್ದೆಗಳ ಸಂಖ್ಯೆ : ಅಂಗನವಾಡಿ ಕಾರ್ಯಕರ್ತೆ ಯ ಒಟ್ಟು ಹುದ್ದೆ-36

    ಅಂಗನವಾಡಿ ಸಹಾಯಕಿ ಒಟ್ಟು ಹುದ್ದೆ -134

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

    ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • SBI ಆನ್ಲೈನ್ ಪರೀಕ್ಷೆ ಮುಂದೂಡಿಕೆ

    SBI ಆನ್ಲೈನ್ ಪರೀಕ್ಷೆ ಮುಂದೂಡಿಕೆ

    ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ಹುದ್ದೆಗೆ ನಡೆಸಬೇಕಾಗಿದ್ದ ಆನ್ಲೈನ್ ಪರೀಕ್ಷೆಯನ್ನು ಮುಂದೂಡಿದೆ.

    ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸೆಂಟ್ರಲ್ ರಿಕ್ರುಯಿಟ್ ಮೆಂಟ್ ಮತ್ತು ಪ್ರಮೋಶನ್ ಡಿಪಾರ್ಟ್ಮೆಂಟ್, ನೋಟಿಫಿಕೇಶನ್ ಹೊರಡಿಸಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ಆನ್ಲೈನ್ ಪರೀಕ್ಷೆಯನ್ನು ಎಪ್ರಿಲ್ 2021 ರವರೆಗೆ ಮುಂದೂಡಲಾಗಿದೆ.

    ಮುಂದಿನ ದಿನಗಳಲ್ಲಿ ಅಪ್ರೆಂಟಿಸ್ ಆನ್ಲೈನ್ ಪರೀಕ್ಷೆಯ ನಿಗದಿತ ದಿನಾಂಕವನ್ನು ಈ ಕೆಳಗಿನ ವೆಬ್‌ಸೈಟ್‌ ನಲ್ಲಿ ಪ್ರಕಟಿಸಲಾಗುವುದು.

    https://bank.sbi/careers

    https://nsdcindian.org/apprenticeship

    https://apprenticeshipindia.org

    https://bfsissc.com

  • ಎಸ್ ಸಿಐ ನಲ್ಲಿ ನೇಮಕ: ಕೂಡಲೇ ಅರ್ಜಿ ಸಲ್ಲಿಸಿ

    ಎಸ್ ಸಿಐ ನಲ್ಲಿ ನೇಮಕ: ಕೂಡಲೇ ಅರ್ಜಿ ಸಲ್ಲಿಸಿ

    ಶಿಪ್ಪಿಂಗ್ ಕಾರ್ಪೋರೇಷನ್ ಆಫ್ ಇಂಡಿಯಾ(ಎಸ್ ಸಿಐ) ಕಂಪನಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ಹುದ್ದೆ : ಕಂಪನಿ‌ ಸೆಕ್ರೆಟರಿ ಟ್ರೈನಿ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 12,2021

    ವಿದ್ಯಾರ್ಹತೆ : ಐಸಿಎಸ್ ಐ ಪ್ರೊಫೆಷನಲ್ ಪ್ರೋಗ್ರಾಂ ಅಥವಾ ಐಸಿಎಸ್ ಐ ಎಕ್ಸಿಕ್ಯುಟಿವ್ ಪ್ರೋಗ್ರಾಂ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ಪ್ರೊಫೆಷನಲ್ ಪರೀಕ್ಷೆಯನ್ನು ಉತ್ತೀರ್ಣರಾದವರಿಗೆ ತಿಂಗಳಿಗೆ ರೂ.8000/-, ಎಕ್ಸಿಕ್ಯುಟಿವ್ ಪರೀಕ್ಷೆ ಉತ್ತೀರ್ಣರಾದವರಿಗೆ ರೂ.7000/- ಸ್ಟೈಫೆಂಡ್ ನೀಡಲಾಗುತ್ತದೆ.

    ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ‌ ಮಾಡಲಾಗುತ್ತದೆ.

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅರ್ಜಿ ಭರ್ತಿ ಮಾಡಿ ಮಾರ್ಚ್ 12 , 2021 ರೊಳಗೆ ಸಲ್ಲಿಸಬೇಕು.

    ಅಧಿಕೃತ ವೆಬ್‌ಸೈಟ್‌ ಲಿಂಕ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ: https://www.shipindia.com/

  • ಸ್ಟೆನೋಗ್ರಾಫರ್ ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಸ್ಟೆನೋಗ್ರಾಫರ್ ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಮಂಡ್ಯ ಡಿಸ್ಟ್ರಿಕ್ಟ್‌ ಕೋರ್ಟ್‌ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳ‌ ವಿವರ, ಅರ್ಜಿ ಶುಲ್ಕ, ವಿದ್ಯಾರ್ಹತೆ, ವಯೋಮಿತಿ ವಿವರಗಳಿಗಾಗಿ ಮುಂದೆ ಓದಿ.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 03-03-2021

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 03-04-2021 (4pm)

    ಮಂಡ್ಯ ಡಿಸ್ಟ್ರಿಕ್ಟ್‌ ಕೋರ್ಟ್‌ ನಲ್ಲಿ ಟೈಪಿಸ್ಟ್ ಹಾಗೂ ಸ್ಟೆನೋಗ್ರಾಫರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

    ಹುದ್ದೆಗಳ ವಿವರ: ಸ್ಟೆನೋಗ್ರಾಫರ್-10, ಟೈಪಿಸ್ಟ್ ಕಾಪಿಸ್ಟ್ -4, ಟೈಪಿಸ್ಟ್ -8

    ವಿದ್ಯಾರ್ಹತೆ : ಅಭ್ಯರ್ಥಿಗಳು ಅಂಗೀಕೃತ ಯುನಿವರ್ಸಿಟಿಯಿಂದ ಎಸ್ ಎಸ್ ಎಲ್ ಸಿ ತೇರ್ಗಡೆ ಹೊಂದಿರಬೇಕು.

    ವಯೋಮಿತಿ : ಅಭ್ಯರ್ಥಿಗಳು ಕನಿಷ್ಠ 18 ಹಾಗೂ ಗರಿಷ್ಠ 35 ವಯೋಮಿತಿ ಹೊಂದಿರಬೇಕು.

    ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಸಿಎಟಿ-1 ಅಭ್ಯರ್ಥಿಗಳಿಗೆ 5 ವರ್ಷ, ಸಿಎಟಿ-2A/2B/3A/3B ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ : ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಡಿಮಾಂಡ್ ಡ್ರಾಫ್ಟ್ ಮೂಲಕ ಸಲ್ಲಿಸಬೇಕು.
    ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಸಿಎಟಿ-1 ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

    ಸಿಎಟಿ-2A/2B/3A/3B ಅಭ್ಯರ್ಥಿಗಳಿಗೆ ರೂ.100/- , ಜನರಲ್ ಅಭ್ಯರ್ಥಿಗಳಿಗೆ ರೂ.200/- ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

    ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಟೈಪಿಂಗ್ ಟೆಸ್ಟ್, ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

    ವೇತನ: ಸ್ಟೆನೋಗ್ರಾಫರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 27,650/- ರಿಂದ ರೂ.52,650/- ತಿಂಗಳ ವೇತನ ನಿಗದಿಯಾಗಿರುತ್ತದೆ.

    ಟೈಪಿಸ್ಟ್-ಕಾಪಿಸ್ಟ್, ಟೈಪಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 21,000/- ರಿಂದ ರೂ. 42,000/- ವೇತನವಿರುತ್ತದೆ.

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅರ್ಜಿ ಡೌನ್‌ಲೋಡ್ ಮಾಡಿ, ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ 03-04-2021(4pm) ಸ್ಪೀಡ್ ಪೋಸ್ಟ್ ಅಥವಾ ರಿಜಿಸ್ಟರ್ ಪೋಸ್ಟ್ ಮೂಲಕ ಸಲ್ಲಿಸಬೇಕು.

    Principal District Judges, District Court, Mandya District, Mandya, Karnataka

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ : https://districts.ecourts.gov.in/mandya