Blog

  • 134 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

    134 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಜಯಪುರ ನಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 03-04-2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಅರ್ಜಿ ಸಲ್ಲಿಸುವುದು ಹೇಗೆ?: ಒನ್ ಲೈನ್ ಮೂಲಕ
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 01-03-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-04-2021(5.30pm)

    ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. CG ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸುವಂತೆ ಇಲ್ಲ.

    ಹುದ್ದೆ ವಿವರ : 20 ಅಂಗನವಾಡಿ‌ ಕಾರ್ಯಕರ್ತೆ ಹಾಗೂ 114 ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

    ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಎಸ್ ಎಸ್ ಎಲ್ ಸಿ ಹಾಗೂ ಸಹಾಯಕಿ ಹುದ್ದೆಗೆ ಕನಿಷ್ಠ 4th ಅಥವಾ ಗರಿಷ್ಠ 9th ತೇರ್ಗಡೆ ಹೊಂದಿರುವವರು ಅರ್ಜಿ ಸಲ್ಲಿಸಬಹುದು.

    ವಯೋಮಿತಿ ‌: ಹುದ್ದೆಗೆ ಕನಿಷ್ಠ 18 ಹಾಗೂ ಗರಿಷ್ಠ 35 ವಯೋಮಿತಿ ಹೊಂದಿರಬೇಕು

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು https://anganwadirecruit.kar.nic.in/ ಗೆ ಭೇಟಿ ನೀಡಬಹುದು.

  • 159 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ

    159 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ

    ಮಂಡ್ಯ ಜಿಲ್ಲೆಯ ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 30-3-2031 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 01-03-2031 ( 10ಗಂಟೆಯಿಂದ)
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-03-2021
    ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕ ವಿರುವುದಿಲ್ಲ.

    ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸುವಂತೆ ಇಲ್ಲ.

    ಹುದ್ದೆ ಸಂಖ್ಯೆ : 159 ಹುದ್ದೆಗಳು

    ವಯೋಮಿತಿ : ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ಹಾಗೂ ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕು.

    ವಿದ್ಯಾರ್ಹತೆ : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಹಾಗೂ ಅಂಗನವಾಡಿ ಮಿನಿ ಕಾರ್ಯಕರ್ತೆ ಹುದ್ದೆಗೆ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ‌ ಹಾಗೂ ಸಹಾಯಕಿ ಹುದ್ದೆಗೆ 4thಅಥವಾ 9th ಪಾಸಾಗಿರಬೇಕು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

    ಅಪ್ಲೈ ಓನ್ಲೈನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

    ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಶಿಕ್ಷಕರ ನೇಮಕಾತಿ : ನೇರ ಸಂದರ್ಶನಕ್ಕೆ ಆಹ್ವಾನ

    ಶಿಕ್ಷಕರ ನೇಮಕಾತಿ : ನೇರ ಸಂದರ್ಶನಕ್ಕೆ ಆಹ್ವಾನ

    ಕೇಂದ್ರೀಯ ವಿದ್ಯಾಲಯ ಎಂಇಜಿ ಮತ್ತು ಕೇಂದ್ರದಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಶಿಕ್ಷಕರ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ‌ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಬಹುದು.

    ಈ ಹುದ್ದೆಗಳನ್ನು 2021-22 ಶೈಕ್ಷಣಿಕ ಸಾಲಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಅಲ್ಲದೇ ಈ ಹುದ್ದೆಗಳು ಸಂಪೂರ್ಣ ಗುತ್ತಿಗೆ ಆಧಾರದ ತಾತ್ಕಾಲಿಕ ಹುದ್ದೆ ಯಾಗಿರುತ್ತದೆ.

    ಹುದ್ದೆಯ ಹೆಸರು: ಪಿಜಿಟಿ ಸಿಎಸ್ /ಇತರೆ ವಿಷಯ–ಪಿಆರ್ ಟಿ/ಜರ್ಮನ್ ಟೀಚರ್, ನರ್ಸ್, ಕಂಪ್ಯೂಟರ್ ಇನ್ಸ್ಟ್ರಕ್ಟರ್/ಪ್ರಾದೇಶಿಕ ಭಾಷೆ (ಕನ್ನಡ) , ಡಾಟಾ ಎಂಟ್ರಿ ಅಪರೇಟರ್ ದಿನಾಂಕ 04-03-2021 ರಂದು ಸಂದರ್ಶನ

    ಕೋಚ್ ಗಳು : ವಾಲಿಬಾಲ್, ಕಬಡ್ಡಿ, ಖೋ ಖೋ, ಹ್ಯಾಂಡ್ ಬಾಲ್, ಕಬಡ್ಡಿ, ಫೂಟ್ಬಾಲ್, ಯೋಗ – ದಿನಾಂಕ 04-03-2021

    ಪೋಸ್ಟ್ ಗ್ರಾಜ್ಯುಯೇಟ್ ಟೀಚರ್ಸ್: ಇಂಗ್ಲೀಷ್, ಹಿಂದಿ, ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ,ಜೀವಶಾಸ್ತ್ರ, ಇತಿಹಾಸ, ಭೂಗೋಳ ಶಾಸ್ತ್ರ, ಅರ್ಥಶಾಸ್ತ್ರ, ಪೊಲಿಟಿಕಲ್ ಸೈನ್ಸ್, ಅಕೌಂಟೆನ್ಸಿ, ವಾಣಿಜ್ಯ ಶಾಸ್ತ್ರ, ಕಂಪ್ಯೂಟರ್ ಸೈನ್ಸ್ – ದಿನಾಂಕ 06-03-2021

    ಟಿಜಿಟಿ ಮತ್ತು ಪ್ರೈಮರಿ ಟೀಚರ್ – ಇಂಗ್ಲೀಷ್, ಹಿಂದಿ, ಸಂಸ್ಕೃತ, ಸೈನ್ಸ್, ವಿಜ್ಞಾನ, ಗಣಿತ, ಸಮಾಜಶಾಸ್ತ್ರ ದಿನಾಂಕ 06-03-2021

    ಮಾರ್ಚ್ 4ರಿಂದ6 ರವರೆಗೆ ನೇರ ಸಂದರ್ಶನವಿರುತ್ತದೆ. ಸಮಯ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಿಗದಿಯಾಗಿದೆ.

    ಪ್ರತೀ ಹುದ್ದೆಗೆ ವಿದ್ಯಾರ್ಹತೆ ಜೊತೆಗೆ ಕಾರ್ಯಾನುಭವ ಹೊಂದಿರಬೇಕು.

    ನೇರ ಸಂದರ್ಶನಕ್ಕೆ ಶೈಕ್ಷಣಿಕ ದಾಖಲೆಗಳ ಒಂದು ಸೆಟ್ ಜೆರಾಕ್ಸ್ ಕಾಪಿಗಳೊಂದಿಗೆ, ಒರಿಜಿನಲ್ ದಾಖಲೆ, ಫೊಟೋಗಳೊಂದಿಗೆ ಹಾಜರಾಗಬಹುದು. ನೇರ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳಿಗೆ ಟಿ.ಎ/ಡಿ.ಎ ನೀಡಲಾಗುತ್ತದೆ.

    ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕೇಂದ್ರೀಯ ವಿದ್ಯಾಲಯ ದ ಅಫೀಶಿಯಲ್ ವೆಬ್‌ಸೈಟ್‌ megcentre.kvs.ac.in ಗೆ ಭೇಟಿ ನೀಡಬಹುದು. ಅಥವಾ ದೂರವಾಣಿ ಸಂಖ್ಯೆ 080-25365053 ಗೆ ಕರೆ ಮಾಡಬಹುದು

  • ಬೆಂಗಳೂರು ಸಿಟಿ ಕೋಅಪರೇಟಿವ್ ಸೊಸೈಟಿ ನಲ್ಲಿ ನೇಮಕ

    ಬೆಂಗಳೂರು ಸಿಟಿ ಕೋಅಪರೇಟಿವ್ ಸೊಸೈಟಿ ನಲ್ಲಿ ನೇಮಕ

    ಬೆಂಗಳೂರು ಸಿಟಿ ಕೋಅಪರೇಟಿವ್ ಸೊಸೈಟಿ ನಲ್ಲಿ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 15 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 27-02-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-03-2021
    ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಡಿಮಾಂಡ್ ಡ್ರಾಫ್ಟ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಎಲ್ಲಾ ಅಭ್ಯರ್ಥಿಗಳು ರೂ.500/- ಅರ್ಜಿಶುಲ್ಕ ಪಾವತಿಸಬೇಕು.


    ಬೆಂಗಳೂರು ಸಿಟಿ ಕಾರ್ಪೋರೇಟಿವ್ ಸೊಸೈಟಿ ನಲ್ಲಿ ಸೆಕ್ರೆಟರಿ (1) ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ವೇತನ: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.21,400/- ರೂ.42,000/- ವೇತನವಿರುತ್ತದೆ.

    ವಯೋಮಿತಿ : ಅಭ್ಯರ್ಥಿಗಳಿಗೆ ಕನಿಷ್ಠ 18, ಹಾಗೂ ಗರಿಷ್ಠ 35 ವಯೋಮಿತಿ ಹೊಂದಿರಬೇಕು.

    ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಸಿಎಟಿ-1 ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅಭ್ಯರ್ಥಿಗಳು ಬೆಂಗಳೂರು ಸಿಟಿ ಕೊಅಪರೇಟಿವ್ ಸೊಸೈಟಿ ಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅರ್ಜಿ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ದಿನಾಂಕ 15-03-2021 ರೊಳಗೆ ಸ್ಪೀಡ್ ಪೋಸ್ಟ್ ಅಥವಾ ರಿಜಿಸ್ಟರ್ ಪೋಸ್ಟ್ ಮೂಲಕ ಸಲ್ಲಿಸಬೇಕು.

    ವಿಳಾಸ : Secretary, Bangalore city cooperative Department Employees cooperative societies,No.1,Ali Asgar Road,Bangaluru -560052

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ

    http://sahakara.kar.gov.in/home.html

  • ಕೆಐಒಸಿಎಲ್ ನಲ್ಲಿ ಉದ್ಯೋಗವಕಾಶ

    ಕೆಐಒಸಿಎಲ್ ನಲ್ಲಿ ಉದ್ಯೋಗವಕಾಶ

    ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ (ಕುದುರೆಮುಖ ಐರನ್ ಓರ್ ಕಂಪನಿ ಲಿಮಿಟೆಡ್) ( ಕೆಐಒಸಿಎಲ್ ) ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 4 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 27 ಜನವರಿ 2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-03-2021

    ಕೆಐಒಸಿಎಲ್ ನಲ್ಲಿ ಜನರಲ್ ಮ್ಯಾನೇಜರ್, ಜ್ಯೂನಿಯರ್ ಜನರಲ್ ಮ್ಯಾನೇಜರ್ (2) ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ಅರ್ಜಿ ಶುಲ್ಕ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಮಾಂಡ್ ಡ್ರಾಫ್ಟ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

    ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪಿಡ್ಬ್ಯುಡಿ/ಎಕ್ಸ್ ಸರ್ವಿಸ್ ಮೆನ್ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ. ಉಳಿದ ಎಲ್ಲಾ ಅಭ್ಯರ್ಥಿಗಳು ರೂ.500/- ಅರ್ಜಿ ಶುಲ್ಕ ಪಾವತಿಸ ಬೇಕಾಗುತ್ತದೆ.

    ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಸಂದರ್ಶನ ದ ಮೂಲಕ ಆಯ್ಕೆ ಮಾಡಲಾಗುತ್ತದೆ.

    ವಯೋಮಿತಿ : ಜನರಲ್ ಮ್ಯಾನೇಜರ್ (HR) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 55 ವರ್ಷ ಆಗಿರಬೇಕು. ಜ್ಯೂನಿಯರ್ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 53 ವಯೋಮಿತಿ ಇರಬೇಕು.

    ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ,ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ,ಪಿಡ್ಬ್ಯುಡಿ ಒಬಿಸಿ ಅಭ್ಯರ್ಥಿಗಳಿಗೆ 8 ವರ್ಷ, ಪಿಡ್ಬ್ಯುಡಿ (ಎಸ್ಸಿ/ಎಸ್ಟಿ) ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ವಿದ್ಯಾರ್ಹತೆ : ಜನರಲ್ ಮ್ಯಾನೇಜರ್ (ಎಚ್. ಆರ್) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗ್ರಾಜ್ಯುಯೇಟ್,ಎಂಬಿಎ, ಎಂಎಸ್ ಡಬ್ಲ್ಯೂ ವಿದ್ಯಾರ್ಹತೆ ಹೊಂದಿರಬೇಕು. ಜ್ಯೂನಿಯರ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗ್ರಾಜ್ಯುಯೇಶನ್ ಜೊತೆಗೆ ಮೆಂಬರ್ ಆಫ್ ದಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ/ಇನ್ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟೆಂಟ್ ಆಫ್ ಇಂಡಿಯಾ ಅರ್ಹತೆ ಹೊಂದಿರಬೇಕು.

    ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 1,95,000/- ವೇತನ ಇರುತ್ತದೆ.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

    ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

    ಓನ್ಲೈನ್ ಅಪ್ಲಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಎಂಸಿಎಲ್ ನಲ್ಲಿ ಹುದ್ದೆಗೆ ಅರ್ಜಿ ಆಹ್ವಾನ: ಇಲ್ಲಿದೆ ಹೆಚ್ಚಿನ ವಿವರ

    ಎಂಸಿಎಲ್ ನಲ್ಲಿ ಹುದ್ದೆಗೆ ಅರ್ಜಿ ಆಹ್ವಾನ: ಇಲ್ಲಿದೆ ಹೆಚ್ಚಿನ ವಿವರ

    ಮಹಾನದಿ ಕೋಲ್ ಪೀಲ್ಡ್ಸ್ ಲಿಮಿಟೆಡ್ ನಲ್ಲಿ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 10 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಮಹಾನದಿ ಕೋಲ್ ಪೀಲ್ಡ್ಸ್ ಲಿಮಿಟೆಡ್(ಎಂಸಿಎಲ್) ನಲ್ಲಿ ಸಾಮಾನ್ಯ ವೈದ್ಯಕೀಯ ಸಲಹೆಗಾರ (8)ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08-03-2021

    ವೇತನ : ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ‌.85,000/- ವೇತನ ನೀಡಲಾಗುವುದು.

    ವಿದ್ಯಾರ್ಹತೆ : ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯ ದಿಂದ ಎಂಬಿಬಿಎಸ್ ವಿದ್ಯಾರ್ಹತೆಯನ್ನು ಹೊಂದಿರಬೇಕು.

    ಅಭ್ಯರ್ಥಿಗಳನ್ನು ಮಾರ್ಚ್ 16 ರಂದು ನಡೆಯುವ ನೇರಸಂದರ್ಶನದಲ್ಲಿ ಆಯ್ಕೆ ಮಾಡಲಾಗುತ್ತದೆ.

    ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಮಾರ್ಚ್ 10 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು‌.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ https://www.mahanadicoal.in/