Blog

  • ಪಶ್ಚಿಮ ಕೇಂದ್ರ ರೈಲ್ವೆನಲ್ಲಿ 165 ಹುದ್ದೆಗಳಿಗೆ ಅರ್ಜಿ ಆಹ್ವಾನ : ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ

    ಪಶ್ಚಿಮ ಕೇಂದ್ರ ರೈಲ್ವೆನಲ್ಲಿ 165 ಹುದ್ದೆಗಳಿಗೆ ಅರ್ಜಿ ಆಹ್ವಾನ : ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ

    ಪಶ್ಚಿಮ ಕೇಂದ್ರ ರೈಲ್ವೆನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 30, ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಪಶ್ಚಿಮ ಕೇಂದ್ರ ರೈಲ್ವೆನಲ್ಲಿ 165 ವಿವಿಧ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 01-03-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-03-2021

    ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸುವಂತೆ ಇಲ್ಲ.

    ಹುದ್ದೆಗಳ ವಿವರ : ಫಿಟ್ಟರ್ -45,
    ವೆಲ್ಡರ್-28,ಇಲೆಕ್ಟ್ರೀಷಿಯನ್ -18, copa-08,ಸೆಕ್ರೇಟೇರಿಯಲ್ ಅಸಿಸ್ಟೆಂಟ್(ಇಂಗ್ಲೀಷ್)-05,ಪೇಂಟರ್ (ಜನರಲ್)-10, ಕಾರ್ಪೆಂಟರ್ – 20, ಪ್ಲಂಬರ್ – 08,ಡ್ರಾಟ್ಸ್ ಮ್ಯಾನ್ (ಸಿವಿಲ್) -02, ಟೇಲರ್ (ಜನರಲ್) -05,ಮೆಕ್ಯಾನಿಕ್ (ಡೀಸೆಲ್‌)-07,ಮೆಕ್ಯಾನಿಕ್ (ಟ್ರ್ಯಾ ಕ್ಟರ್)-04, ಅಪರೇಟರ್ (ಅಡ್ವಾನ್ಸ್ಡ್ ಮೆಷಿನ್ ಟೂಲ್)- 05

    ವಿದ್ಯಾರ್ಹತೆ: ಹುದ್ದೆಗಳಿಗನುಸಾರವಾಗಿ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಜೊತೆಗೆ ಸಂಬಂಧಿಸಿದ ಟ್ರೇಡ್ ನಲ್ಲಿ ಐಟಿಐ ತೇರ್ಗಡೆಹೊಂದಿರಬೇಕು.

    ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 15 ಹಾಗೂ ಗರಿಷ್ಠ 24 ವರ್ಷ ಹೊಂದಿರಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಒಬಿಸಿ, ಪ್ರವರ್ಗ-1 ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಪಿಡ್ಬ್ಯು ಡಿ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ರೂ.70/-,
    ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.170/- ಅರ್ಜಿ ಶುಲ್ಕ ನಿಗದಿಯಾಗಿದೆ.

    ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 8000/- ವೇತನವಿರುತ್ತದೆ.
    ಉದ್ಯೋಗ ಸ್ಥಳ : ನಿಶಾತ್ ಪುರ್ (ಭೋಪಾಲ್)

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

  • 1145 ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ

    1145 ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ

    ರಾಷ್ಟ್ರೀಯ  ಪರೀಕ್ಷಾ ಏಜೆನ್ಸಿಯು ದೆಹಲಿ ವಿಶ್ವವಿದ್ಯಾಲಯದ ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

    ದೆಹಲಿ ವಿಶ್ವವಿದ್ಯಾಲಯದ ಬೋಧಕೇತರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 16, ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬೇಕು.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: ಫೆಬ್ರವರಿ 23,2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 16, 2021
    ಅರ್ಜಿ ಶುಲ್ಕ‌ಪಾವತಿಸಲು ಕೊನೆಯ ದಿನಾಂಕ: ಮಾರ್ಚ್ 17, 2021
    ಅರ್ಜಿ ತಿದ್ದುಪಡಿಗೆ ಕೊನೆಯ ದಿನಾಂಕ : ಮಾರ್ಚ್ 18 – 20, 2021

    ದೆಹಲಿ ವಿಶ್ವವಿದ್ಯಾಲಯದ ಬೋಧಕೇತರ ಹುದ್ದೆಗಳ ನೇಮಕಾತಿ ಮೂಲಕ 1145 ಹುದ್ದೆಗಳನ್ನು ಭರ್ತಿ ಮಾಡಲಿದೆ.

    ಹುದ್ದೆಗಳ ವಿವರ : ಜೂನಿಯರ್ ಅಸಿಸ್ಟೆಂಟ್, ಟೆಲಿಫೋನ್ ಅಪರೇಟರ್, ಅಸಿಸ್ಟೆಂಟ್,ಸ್ಟೆನೋಗ್ರಾಫರ್,ಯೋಗ ವ್ಯವಸ್ಥಾಪಕ, ಹಿರಿಯ ವೈಯಕ್ತಿಕ ಸಹಾಯಕ, ನರ್ಸ್, ಭಾಷಾಂತರಕಾರರು, ಕ್ರಿಡಾ ಕೋಚ್ ಸೇರಿದಂತೆ ಇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

    ವಿದ್ಯಾರ್ಹತೆ : ಅಭ್ಯರ್ಥಿಗಳು ಹುದ್ದೆಗಳಿಗೆ ಅನುಸಾರವಾಗಿ ಪಿಯುಸಿ, ಪದವಿ, ಸ್ನಾತಕೋತ್ತರ, ಐಟಿಐ, ಡಿಪ್ಲೋಮಾ ಕೋರ್ಸ್ ತೇರ್ಗಡೆ ಹೊಂದಿರಬೇಕು. ಹಾಗೂ ನಿಗದಿತ ಕಾರ್ಯಾನುಭವವನ್ನು ಹೊಂದಿರಬೇಕು.

    ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಪಿಡ್ಬ್ಯು ಡಿ ಅಭ್ಯರ್ಥಿಗಳು ರೂ.600/-, ಒಬಿಸಿ ಅಭ್ಯರ್ಥಿಗಳು ರೂ.800/-,ಸಾಮಾನ್ಯ ಅಭ್ಯರ್ಥಿಗಳು ರೂ.1000/- ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

    ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ಆನ್ಲೈನ್ ಟೆಸ್ಟ್, ಪರ್ಸನಾಲಿಟಿ ಟೆಸ್ಟ್, ಸಂದರ್ಶನ, ಕೌಶಲ ಪರೀಕ್ಷೆಗಳ ಮೂಲಕ‌ ಆಯ್ಕೆ ಮಾಡಲಾಗುತ್ತದೆ.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

     

  • ಸಿಎಸ್ ಐಆರ್ ಯುಜಿಸಿ ನೆಟ್ 2020 ಫಲಿತಾಂಶ ಈಗಲೇ ನೋಡಿ

    ಸಿಎಸ್ ಐಆರ್ ಯುಜಿಸಿ ನೆಟ್ 2020 ಫಲಿತಾಂಶ ಈಗಲೇ ನೋಡಿ

    ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು ಸಿಎಸ್ ಐಆರ್ ಯುಜಿಸಿ ಎನ್ ಇಟಿ ಜೂನ್ 2020 ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಿದೆ.ಅಸಿಸ್ಟೆಂಟ್ ಪ್ರೊಫೆಸರ್ ಮತ್ತು ಜೆ ಆರ್ ಎಫ್ ಹುದ್ದೆಗಳ ನೇಮಕಾತಿಗೆ ನಡೆಸುವ ಪರೀಕ್ಷೆ ಇದಾಗಿದ್ದು, ಇದೀಗ ಪರೀಕ್ಷೆ ಬರೆದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು.

    ಸಿಎಸ್ ಐಆರ್ ಯುಜಿಸಿ ನೆಟ್ 2020 ಫಲಿತಾಂಶವನ್ನು ಈ ರೀತಿ ನೋಡಿ.

    ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್‌ ಗೆ https://csirnet.nta.nic.in/WebInfo/Page/Page?PageId=1&landId=P ಭೇಟಿ ನೀಡಿ, ಹೋಂ ಪೇಜಲ್ಲಿ joint CSIR UGC NET june 2020 NTA result ಗೆ ಕ್ಲಿಕ್ ಮಾಡಿ , ನಂತರ ನಿಮ್ಮ ಅರ್ಜಿ ಸಂಖ್ಯೆ,ಜನ್ಮ ದಿನಾಂಕ, ಸೆಕ್ಯುರಿಟಿ ಪಿನ್ ಹಾಕಿ ಲಾಗಿನ್ ಆಗಿ‌. ಸ್ಕ್ರೀನ್‌ ಮೇಲೆ ಫಲಿತಾಂಶ ಲಭ್ಯವಾಗುವುದು. ಸೇವ್ ಮಾಡಿ ಪ್ರಿಂಟ್ ತೆಗೆದಿಟ್ಟುಕೊಳ್ಳಿ.

  • ಐಬಿಪಿಎಸ್ PO/MT X ಸಂದರ್ಶನ ಪ್ರವೇಶ ಪತ್ರ ಲಭ್ಯ: ಈಗಲೇ ಡೌನ್ಲೋಡ್ ಮಾಡಿಕೊಳ್ಳಿ

    ಐಬಿಪಿಎಸ್ PO/MT X ಸಂದರ್ಶನ ಪ್ರವೇಶ ಪತ್ರ ಲಭ್ಯ: ಈಗಲೇ ಡೌನ್ಲೋಡ್ ಮಾಡಿಕೊಳ್ಳಿ

    ಐಬಿಪಿಎಸ್ ಪ್ರೊಬೆಷನರಿ ಅಧಿಕಾರಿ / ಮ್ಯಾನೆಜ್‌ಮೆಂಟ್‌ ಟ್ರೈನಿ-X ಹುದ್ದೆಗಳ ಸಂದರ್ಶನ ಪತ್ರ ಬಿಡುಗಡೆ ಆಗಿದೆ. ಸಂದರ್ಶನ ಸುತ್ತಿಗೆ ಆಯ್ಕೆಯಾದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

    ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಐಬಿಪಿಎಸ್ ಅಧಿಕೃತ ವೆಬ್‌ಸೈಟ್‌ https://www.ibps.in/ ಗೆ ಭೇಟಿ ನೀಡಿ, ಅಲ್ಲಿ ಲಭ್ಯವಿರುವ ಕ್ಲಿಕ್ ಇಯರ್ ಟು ಡೌನ್‌ಲೋಡ್ ಇಂಟರವ್ಯೂ ಕಾಲ್ ಲೆಟರ್ ಪಿಒ/ಎಂಟಿ- X ಲಿಂಕ್ ಮೇಲೆ ಕ್ಲಿಕ್ ಮಾಡಿ,ಇನ್ನೊಂದು ಪುಟ ಬರುತ್ತೆ, ಅಲ್ಲಿ‌ನಿಮ್ಮ ರೋಲ್ ನಂಬರ್/ ರಿಜಿಸ್ಟ್ರೇಶನ್ ನಂಬರ್ ಮತ್ತು ಜನ್ಮದಿನಾಂಕ / ಪಾಸ್ ವರ್ಡ್ ಹಾಕಿ. ನಿಮ್ಮ ಪ್ರವೇಶ ಪತ್ರ ವು ಸ್ಕ್ರೀನ್‌ ಮೇಲೆ ಮೂಡುವುದು. ಸೇವ್ ಮಾಡಿ, ಪ್ರಿಂಟೌಟ್ ತೆಗೆದುಕೊಳ್ಳಿ.

  • ಫೆ.28 ರ ಎಫ್ ಡಿ ಎ ಪರೀಕ್ಷೆ ಗೆ ಗುರುತಿನ ಚೀಟಿ ಕಡ್ಡಾಯ : ಇಲ್ಲಿದೆ ಹೆಚ್ಚಿನ ವಿವರ

    ಫೆ.28 ರ ಎಫ್ ಡಿ ಎ ಪರೀಕ್ಷೆ ಗೆ ಗುರುತಿನ ಚೀಟಿ ಕಡ್ಡಾಯ : ಇಲ್ಲಿದೆ ಹೆಚ್ಚಿನ ವಿವರ

    ಫೆಬ್ರವರಿ 28 ರಂದು ನಡೆಯುವ ಎಫ್ ಡಿ ಎ ಪರೀಕ್ಷೆಗೆ ಪ್ರವೇಶ ಪತ್ರದ ಜೊತೆಗೆ ಗುರುತಿನ ಚೀಟಿ ಕಡ್ಡಾಯವಾಗಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರದ ಜೊತೆಗೆ‌ ಭಾವಚಿತ್ರವಿರುವ ಚುನಾವಣಾ ಗುರುತಿನ ಚೀಟಿ, ಆಧಾರ ಕಾರ್ಡ್‌, ಡ್ರೈವಿಂಗ್ ಲೈಸೆನ್ಸ್, ಪ್ಯಾನ್ ಕಾರ್ಡ, ಪಾಸ್‌ಪೋರ್ಟ್‌, ಸರ್ಕಾರಿ ನೌಕರರ ಐಡಿ ಇವುಗಳಲ್ಲಿ ಯಾವುದಾದರು ಒಂದನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು.

    ಬಾಗಲಕೋಟೆ ಜಿಲ್ಲೆಯಲ್ಲಿ46 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 18,487 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬಾಗಲಕೋಟೆಯಲ್ಲಿ 33 ಪರೀಕ್ಷಾ ಕೇಂದ್ರಗಳಲ್ಲಿ 12,968 ವಿದ್ಯಾರ್ಥಿಗಳು , ಜಮಖಂಡಿ ಯ 12 ಕೇಂದ್ರಗಳಲ್ಲಿ 5016 ಅಭ್ಯರ್ಥಿಗಳು, ಮುಧೋಳ 1 ಪರೀಕ್ಷಾ ಕೇಂದ್ರಗಳಲ್ಲಿ 503 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ ನಡೆಯುವ ಒಂದು ಗಂಟೆ ಮುಂಚಿತವಾಗಿ ಅಭ್ಯರ್ಥಿಗಳು ಹಾಜರಿರಬೇಕು. ಪರೀಕ್ಷೆ ಬೆಳಗ್ಗೆ ಮತ್ತು ಮಧ್ಯಾಹ್ನ ನಡೆಯಲಿದೆ. ಬೆಳಗ್ಗೆ 9.50 ರ ನಂತರ, ಮಧ್ಯಾಹ್ನ ‌1.50 ರ ನಂತರ ಬರುವ ಅಭ್ಯರ್ಥಿಗಳಿಗೆ ಪ್ರವೇಶವಿಲ್ಲ. ಪರೀಕ್ಷೆಗೆ ಮೊಬೈಲ್ ಫೋನ್ ಹಾಗೂ ಇತರ ಎಲೆಕ್ಟ್ರಿಕ್ ವಸ್ತುಗಳನ್ನು ತರುವುದನ್ನು ನಿಷೇಧಿಸಲಾಗಿದೆ. ಅವುಗಳನ್ನು ಪರೀಕ್ಷಾ ಕೇಂದ್ರದ ಮುಖ್ಯ ದ್ವಾರದಲ್ಲಿ ಇಡಲು ಅವಕಾಶ ವಿದೆ.

    ಕೋವಿಡ್ ಹಿನ್ನೆಲೆಯಲ್ಲಿ ಪರೀಕ್ಷಾ ಕೊಠಡಿಯನ್ನು ಸ್ಯಾನಿಟೈಝ್ ಮಾಡಲಾಗುತ್ತದೆ. ಪರೀಕ್ಷೆಗೆ ಬರುವ ಅಭ್ಯರ್ಥಿಗಳ ಥರ್ಮಲ್ ಸ್ಕ್ರೀನಿಂಗ್ ಹಾಗೂ ಆರೋಗ್ಯ ತಪಾಸಣೆ ಮಾಡಲಾಗುತ್ತದೆ.

    ಫೆಬ್ರವರಿ 28 ರಂದು ಎಫ್‍ಡಿಎ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಬೆಳಿಗ್ಗೆ 10 – 11.30 ವರೆಗೆ ಸಾಮಾನ್ಯ ಜ್ಞಾನ, ಮಧ್ಯಾಹ್ನ 2 – 3.30 ವರೆಗೆ ಸಾಮಾನ್ಯ ಕನ್ನಡ/ಸಾಮಾನ್ಯ ಇಂಗ್ಲಿಷ್ ವಿಷಯಗಳ ಪರೀಕ್ಷೆ ನಡೆಯಲಿದೆ.

  • ಜೆಎನ್ ಸಿಎಎಸ್ ಆರ್  ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

    ಜೆಎನ್ ಸಿಎಎಸ್ ಆರ್ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

    ಜೆಎನ್ ಸಿಎಎಸ್ಆರ್(ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈನ್ಟಿಫಿಕ್ ರಿಸರ್ಚ್) ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 11 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 24-02-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-03-2021(5pm)

    ಜೆಎನ್ ಸಿಎಎಸ್ಆರ್(ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈನ್ಟಿಫಿಕ್ ರಿಸರ್ಚ್) ನಲ್ಲಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸುವಂತೆ ಇಲ್ಲ.

    ಹುದ್ದೆಗಳ ವಿವರ ‌: ಜೆಎನ್ ಸಿಎಎಸ್ಆರ್(ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈನ್ಟಿಫಿಕ್ ರಿಸರ್ಚ್)ನಲ್ಲಿ ಇನ್ಸ್ಟ್ರುಮೆಂಟ್ ಮ್ಯಾನೇಜರ್ ಮತ್ತು ಅಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

    ಹುದ್ದೆ ಸಂಖ್ಯೆ : ಸಂಸ್ಥೆ ಯ ವತಿಯಿಂದ ಹುದ್ದೆ ಸಂಖ್ಯೆ ನಿಗದಿಯಾಗಿಲ್ಲ.

    ಅರ್ಜಿ ಶುಲ್ಕ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿಸುವಂತಿಲ್ಲ.

    ವಿದ್ಯಾರ್ಹತೆ : ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ/ ಬೋರ್ಡ್ ನಿಂದ ಎಂ.ಎಸ್ಸಿ ತೇರ್ಗಡೆ ಹೊಂದಿರಬೇಕು.

    ವಯೋಮಿತಿ : ಜೆಎನ್ ಸಿಎಆರ್ ನ ನೇಮಕಾತಿ ನಿಯಮಾನುಸಾರ ಅಭ್ಯರ್ಥಿಗಳು ವಯೋಮಿತಿ ಹೊಂದಿರಬೇಕು.

    ಅಭ್ಯರ್ಥಿಗಳು ತಮ್ಮ ಅರ್ಜಿ ಮತ್ತು ಎಲ್ಲಾ ದಾಖಲೆಗಳನ್ನು ಈ ಕೆಳಗಿನ ಈ ಮೈಲ್ ಐಡಿ ಗೆ ಕಳುಹಿಸಬೇಕು.
    [email protected] ಗೆ ದಿನಾಂಕ 11.03.2021 ರ ಸಂಜೆ 5 ಗಂಟೆಯ ಒಳಗೆ ಸಲ್ಲಿಸಬೇಕು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ