Blog

  • 841 ಆಫೀಸ್ ಅಟೆಂಡೆಂಟ್ ಹುದ್ದೆ : ಕೂಡಲೇ ಅರ್ಜಿ ಸಲ್ಲಿಸಿ

    841 ಆಫೀಸ್ ಅಟೆಂಡೆಂಟ್ ಹುದ್ದೆ : ಕೂಡಲೇ ಅರ್ಜಿ ಸಲ್ಲಿಸಿ

    ಆರ್ಬಿಐ ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 15, 2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಹುದ್ದೆಗಳ ವಿವರ: ಆರ್ಬಿಐ (ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ) ನಲ್ಲಿ 841 ಆಫೀಸ್ ಅಟೆಂಡೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 24-02-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:ಮಾರ್ಚ್ 15, 2021
    ಆಯ್ಕೆ ಪ್ರಕ್ರಿಯೆ: – ಅಟೆಂಡೆಂಟ್ ಹುದ್ದೆಗೆ ಆನ್ ಲೈನ್ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

    ಅರ್ಜಿ ಸಲ್ಲಿಕೆ: ಆರ್ಬಿಐ
    ನಲ್ಲಿರುವ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸುವಂತೆ ಇಲ್ಲ.

    ಅರ್ಜಿ ಶುಲ್ಕ: ರೂ. 500/- ಸಾಮಾನ್ಯ/ಒಬಿಸಿ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ ಮಾಜಿ ಸೈನಿಕ ಅಭ್ಯರ್ಥಿಗಳು ರೂ.50/- ಶುಲ್ಕ ನಿಗದಿಯಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆನ್ಲೈನ್ ಪಾವತಿ ವಿಧಾನದ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬಹುದು.

    ವಿದ್ಯಾರ್ಹತೆ: ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ/ ಮೆಟ್ರಿಕ್ಯುಲೇಶನ್ ತೇರ್ಗಡೆಯಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ವಯೋಮಿತಿ: ಕನಿಷ್ಠ18 ಹಾಗೂ ಗರಿಷ್ಠ 25 ವಯೋಮಿತಿ ಉಳ್ಳವರು ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ಒಬಿಸಿ/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.10,940/- ರಿಂದ ರೂ. 23,700/- ವೇತನವನ್ನು ನೀಡಲಾಗುತ್ತದೆ.

    ಅಭ್ಯರ್ಥಿಗಳು ಆರ್ಬಿಐ ನ ಅಧಿಕೃತ ವೆಬ್‌ಸೈಟ್‌ https://www.rbi.org.in/ ಗೆ ಭೇಟಿ ನೀಡಿ ಮಾಹಿತಿಯನ್ನು ಭರ್ತಿ ಮಾಡಿ ಮಾರ್ಚ್ 15, 2021 ರೊಳಗೆ ಸಲ್ಲಿಸಬೇಕು.

     

  • ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

    ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

    ಅಲ್ಪಸಂಖ್ಯಾತರ ಮೌಲಾನ ಅಜಾ಼ದ್ ಆಂಗ್ಲ ಮಾಧ್ಯಮ‌ ಶಾಲೆ ಧಾರವಾಡದಲ್ಲಿ ಹಿಂದಿ ಹಾಗೂ ಉರ್ದು ಭಾಷೆಯ ಬೋಧನೆ ಮಾಡಲು ಅತಿಥಿ ಶಿಕ್ಷಕರನ್ನು ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

    ಅನುಭವಿ ಶಿಕ್ಷಕರು , ನಿವೃತ್ತಿ ಪಡೆದ ಶಿಕ್ಷಕರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

    ಅರ್ಜಿ ಸಲ್ಲಿಸಲು ಆಸಕ್ತರಿರುವ ಅಭ್ಯರ್ಥಿಗಳು ದಿನಾಂಕ ಮಾರ್ಚ್ 02,2021 ರೊಳಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.

    ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದಿಂದ ಕಾರ್ಯನಿರ್ವಹಿಸುತ್ತಿರುವ ನವಲಗುಂದ ಮೌಲಾನಾ ಅಜಾ಼ದ್ ಆಂಗ್ಲ ಮಾದರಿ ಶಾಲೆಗೆ ಅತಿಥಿ ಶಿಕ್ಷಕರಾಗಿ ಕಾರ್ಯನಿರ್ವಹಿಸಬಹುದು.

    ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಈ ವಿಳಾಸವನ್ನು ಸಂಪರ್ಕಿಸಬಹುದು.

    ಜಿಲ್ಲಾ ಅಧಿಕಾರಿಗಳ ಕಾರ್ಯಾಲಯ,ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮಂದಿ ಪ್ಲಾಜಾ, 1 ನೇ ಮಹಡಿ, ಕೆ.ಸಿ.ಪಾರ್ಕ್ ಪೋಸ್ಟ್ ಆಫೀಸ್ ಎದುರುಗಡೆ, ಹಳಿಯಾಳ ರಸ್ತೆ, ಧಾರವಾಡ ಕಚೇರಿ

  • ದೆಹಲಿ ವಿಶ್ವವಿದ್ಯಾಲಯದಲ್ಲಿ ಬೋಧಕೇತರ ಹುದ್ದೆಗಳಿಗೆ ನೇಮಕಾತಿ

    ದೆಹಲಿ ವಿಶ್ವವಿದ್ಯಾಲಯದಲ್ಲಿ ಬೋಧಕೇತರ ಹುದ್ದೆಗಳಿಗೆ ನೇಮಕಾತಿ

     

    ದೆಹಲಿ ವಿಶ್ವವಿದ್ಯಾಲಯ(ಡಿ.ಯು) ದಲ್ಲಿ ವಿವಿಧ ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಅರ್ಹ ವಿದ್ಯಾರ್ಹತೆ/ಕಾರ್ಯಾನುಭವುಳ್ಳ ಭಾರತೀಯ ನಾಗರಿಕರಿಂದ ಅನ್ ಲೈನ್ ಅರ್ಜಿಗಳನ್ನು ಕರೆಯಲಾಗಿದ್ದು, ಇದನ್ನು ಮಾಹಿತಿ ಬುಲೆಟಿನ್ ನಲ್ಲೂ ನೋಡಬಹುದು. ಆನ್ಲೈನ್ ಅರ್ಜಿಯ ವಿವರಗಳು ಸೇರಿದಂತೆ ವಿದ್ಯಾರ್ಹತೆ, ಅನುಭವ (ಅಗತ್ಯ ವಿರುವ ಕಡೆ) ಮತ್ತು ಇತರೆ ಅರ್ಹತೆ ಮಾನದಂಡ ಇತ್ಯಾದಿಯನ್ನು https://recruitment.nta.nic.in

    www.du.ac.in ರಲ್ಲಿನ ಮಾಹಿತಿ  ಬುಲೆಟಿನ್ ನಲ್ಲಿ ಲಭ್ಯವಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮೇಲ್ಕಂಡ ವೆಬ್‌ಸೈಟ್‌ ಗಳಲ್ಲಿ ಆನ್ಲೈನ್ ಮೂಲಕ ಅರ್ಜಿಯನ್ನು 16.03.2021ರ (23-50ಗಂಟೆ) ವೇಳೆಗೆ ಸಲ್ಲಿಸಬಹುದಾಗಿದ್ದು, 17.03.2021 ರ (23:50 ಗಂಟೆ) ವೇಳೆಗೆ ಸೂಚಿಸಲಾದ ನಿಗದಿತ ಅರ್ಜಿ ಶುಲ್ಕವನ್ನು ಪಾವತಿಸುವುದು.

  • ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್ ಕೌನ್ಸಲಿಂಗ್ ದಿನಾಂಕ ಮುಂದೂಡಿಕೆ- ಪ್ರಕಟಣೆ

    ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್ ಕೌನ್ಸಲಿಂಗ್ ದಿನಾಂಕ ಮುಂದೂಡಿಕೆ- ಪ್ರಕಟಣೆ

    ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ  ಬೀದರಿನ ಅಡಿಯಲ್ಲಿ ಬರುವ ಮಹಾವಿದ್ಯಾಲಯಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ರವರು ನಡೆಸಿದ ಕೆ.ಸಿ.ಇ.ಟಿ ( KCET-2020)ಕೌನ್ಸಲಿಂಗ್ ಪ್ರಕ್ರಿಯೆಯಲ್ಲಿ ಭರ್ತಿ ಆಗದೆ ಉಳಿದಿರುವ ಸ್ನಾತಕ ಸೀಟುಗಳನ್ನು ಮುಕ್ತ ಕೌನ್ಸಲಿಂಗ್ ಆಯ್ಕೆ ಪ್ರಕ್ರಿಯೆಯ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಈ ಮೊದಲು‌ ಅರ್ಜಿ ಆಹ್ವಾನಿಸಲಾಗಿತ್ತು. ಮತ್ತು ಸದರಿ ಕೌನ್ಸಲಿಂಗನ್ನು ಪಶುವೈದ್ಯಕೀಯ ಮಹಾವಿದ್ಯಾಲಯ, ಹೆಬ್ಬಾಳ ಬೆಂಗಳೂರು ಇಲ್ಲಿ ದಿನಾಂಕ 01-03-2021 ರಂದು ನಡೆಸಲು ತೀರ್ಮಾನಿಸಿರುವುದನ್ನು ರದ್ದುಪಡಿಸಿ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನಂದಿನಗರ ಬೀದರ್ ಇಲ್ಲಿ ದಿನಾಂಕ 05-03-2021ರಂದು ಬೆಳಗ್ಗೆ 10.30 ರಿಂದ ಮುಕ್ತ ಕೌನ್ಸಲಿಂಗ್ ಮತ್ತು ಅಂತಿಮ‌ ಮಾಪಪ್ ಸುತ್ತಿನಲ್ಲಿ (final mop up round) ನಡೆಸಲಾಗುತ್ತದೆ. ಈ ಮುಕ್ತ ಕೌನ್ಸಲಿಂಗ್ ಸಂಬಂಧಪಟ್ಟಂತೆ ಹೆಚ್ಚಿನ ವಿವರಣೆಗಾಗಿ ವಿಶ್ವವಿದ್ಯಾಲಯದ ಅಧಿಕೃತ ಅಂತರ್ಜಾಲ www.kvafsu.edu.in ರಲ್ಲಿ ನೋಡಬಹುದು.

  • ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರ ದಲ್ಲಿ ಖಾಲಿ ಇರುವ ಹುದ್ದೆಗೆ ನೇರ ಸಂದರ್ಶನ

    ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರ ದಲ್ಲಿ ಖಾಲಿ ಇರುವ ಹುದ್ದೆಗೆ ನೇರ ಸಂದರ್ಶನ

    ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರ ದಲ್ಲಿ ಗುತ್ತಿಗೆ ಆಧಾರದಲ್ಲಿ ಈ ಕೆಳಕಂಡ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಲು‌ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ : ಟೆಕ್ನಿಕಲ್ ಕನ್ಸಲ್ಟೆಂಟ್ -01

    ವೇತನ : ತಿಂಗಳಿಗೆ 30,000 ವೇತನ ನಿಗದಿಯಾಗಿರುತ್ತದೆ.

    ವಿದ್ಯಾರ್ಹತೆ : ಎಂ.ಎಸ್ಸಿ ಇನ್ ಎನ್ವಿರಾನ್ಮೆಂಟಲ್ ಸೈನ್ಸಸ್/ಅಪ್ಲೈಡ್ ಬಾಟನಿ/ನ್ಯಾಚುರಲ್ ರಿಸೋರ್ಸ್ ಕಂಸರ್ವೇಶನ್ ಆಂಡ್ ಮ್ಯಾನೇಜ್ಮೆಂಟ್

    ಆಸಕ್ತ ಅಭ್ಯರ್ಥಿಗಳು ದಿನಾಂಕ 10-03-2021 ರ ಬೆಳಗ್ಗೆ 11.30 ಗೆ ಪ್ರಾಧಿಕಾರದ ಕಚೇರಿಯಲ್ಲಿ ಸಂದರ್ಶನವು ನಿಗದಿಯಾಗಿರುತ್ತದೆ.

    ವೈಯಕ್ತಿಕ ಮಾಹಿತಿಯನ್ನು ಒಳಗೊಂಡ ಮತ್ತು ವಿದ್ಯಾರ್ಹತೆ ಗೆ ಸಂಬಂಧಿಸಿದ ಪ್ರಮಾಣ ಪತ್ರಗಳ ಮೂಲ ಮತ್ತು ಛಾಯಾಪ್ರತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗತಕ್ಕದ್ದು. ಇದು ಸಂಪೂರ್ಣವಾಗಿ ತಾತ್ಕಾಲಿಕ ಹುದ್ದೆ ಆಗಿರುತ್ತದೆ. ಮತ್ತು ಯಾವುದೇ ಮಂಜೂರಾದ ಹುದ್ದೆ ಅಲ್ಲ. ಗುತ್ತಿಗೆ ಅವಧಿಯು 11 ತಿಂಗಳಿಗೆ ಮಾತ್ರ‌ ಮತ್ತು ಅಭ್ಯರ್ಥಿಯ ಕಾರ್ಯನಿರ್ವಹಣೆಯನ್ನು ಅವಲಂಭಿಸಿ ಗುತ್ತಿಗೆ ಆಧಾರದಲ್ಲಿ ವಿಸ್ತರಿಸಲಾಗುವುದು.

    ಕಚೇರಿ ವಿಳಾಸ : ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರ,4 ನೇ ಮಹಡಿ, ವನವಿಕಾಸ,18 ನೇ ಅಡ್ಡ ರಸ್ತೆ, ಮಲ್ಲೇಶ್ವರಂ,ಬೆಂಗಳೂರು-03

    ದೂರವಾಣಿ ಸಂಖ್ಯೆ : 23464089

  • ಎನ್ ಟಿಪಿಎಸ್ ನಲ್ಲಿ 230 ಹುದ್ದೆಗಳಿಗೆ ಅರ್ಜಿ ಆಹ್ವಾನ

    ಎನ್ ಟಿಪಿಎಸ್ ನಲ್ಲಿ 230 ಹುದ್ದೆಗಳಿಗೆ ಅರ್ಜಿ ಆಹ್ವಾನ

    ನ್ಯಾಷನಲ್ ಥರ್ಮಲ್ ಪವರ್ ಕೋರ್ಪರೇಷನ್ ಲಿಮಿಟೆಡ್ ( ಎನ್ ಟಿಪಿಸಿ) ನಲ್ಲಿ 230 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ದಿನಾಂಕ 24-02-2021 ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು 10 ಮಾರ್ಚ್ 2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 24-02-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-03-2021ಎನ್ ಟಿಪಿಸಿನಲ್ಲಿರುವ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ.

    ಹುದ್ದೆಗಳ ವಿವರ : ಅಸಿಸ್ಟೆಂಟ್ ಇಂಜಿನಿಯರ್ – 200
    ಅಸಿಸ್ಟೆಂಟ್ ಕೆಮಿಸ್ಟ್ – 30

    ಅರ್ಜಿ ಶುಲ್ಕ: ಅರ್ಜಿ ಸಲ್ಲಿಸಲು ಸಾಮಾನ್ಯ,ಇತರೆ ಹಿಂದುಳಿದ ವರ್ಗ, ಇಡ್ಬ್ಯುಎಸ್ ಅಭ್ಯರ್ಥಿಗಳಿಗೆ 300ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಪಿಡ್ಬ್ಯು ಬಿಡಿ, ಎಕ್ಸ್ ಸರ್ವಿಸ್ ಮ್ಯಾನ್ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆನ್ಲೈನ್ ಪಾವತಿ ವಿಧಾನದ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬಹುದು.

    ವಯೋಮಿತಿ: ಅಭ್ಯರ್ಥಿಗಳಿಗೆ ಗರಿಷ್ಠ 30 ವಯೋಮಿತಿ ಉಳ್ಳವರಾಗಿರಬೇಕು. ಇತರೆ ಹಿಂದುಳಿದ ವರ್ಗ,2A,2B,3A,3B ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 05 ವರ್ಷ, ಪಿಡ್ಬ್ಯುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಆನ್ಲೈನ್ ಅಪ್ಲಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

    ಅಧಿಕೃತ ವೆಬ್‌ಸೈಟ್‌ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ