Blog

  • ಎನ್ ಪಿಸಿಐಎಲ್ ನಲ್ಲಿ 200 ಹುದ್ದೆಗಳಿಗೆ ಅರ್ಜಿ ಆಹ್ವಾನ

    ಎನ್ ಪಿಸಿಐಎಲ್ ನಲ್ಲಿ 200 ಹುದ್ದೆಗಳಿಗೆ ಅರ್ಜಿ ಆಹ್ವಾನ

    ನ್ಯೂಕ್ಲಿಯರ್ ಪವರ್ ಕಾರ್ಪೋರೇಷನ್ ಆಫ್ ಇಂಡಿಯಾ (ಎನ್ ಪಿಸಿಐಎಲ್) ನಲ್ಲಿ    ಖಾಲಿ ಇರುವ ವಿವಿಧ 200 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ‌ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು 23- 02-2021ರಂದು ಆರಂಭವಾಗಲಿದ್ದು, 09 ಮಾರ್ಚ್ 2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ. ಹುದ್ದೆಗಳ ವಿವರ, ವಿದ್ಯಾರ್ಹತೆ, ನೇಮಕಾತಿ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಎಕ್ಸಿಕ್ಯುಟಿವ್ ಟ್ರೈನಿಂಗ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ‌.55,000/- ವೇತನ ನಿಗದಿಯಾಗಿದೆ.

    ವಿದ್ಯಾರ್ಹತೆ: ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ/ಬೋರ್ಡ್ ನಿಂದ ಬಿ.ಎಸ್ಸಿ/ಬಿ.ಇ/ಬಿ.ಟೆಕ್,ಎಂ.ಟೆಕ್, ಪಿ.ಎಚ್.ಡಿ ವಿದ್ಯಾರ್ಹತೆಯನ್ನು ಪಡೆದಿರಬೇಕು.

    ವಯೋಮಿತಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 41 ವಯೋಮಿತಿ ಹೊಂದಿರಬೇಕು. (02-04-2020 ರ ಅನ್ವಯದಂತೆ)
    ಒಬಿಸಿ,2ಎ,2ಬಿ,3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ,ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಪಿಡ್ಬ್ಯು ಡಿ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ: ಅರ್ಜಿ ಸಲ್ಲಿಸಲು 500 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆನ್ಲೈನ್ ಪಾವತಿ ವಿಧಾನದ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬಹುದು.
    ಸಾಮಾನ್ಯ,ಇಡ್ಬ್ಯುಎಸ್, ಇತರೆ ಹಿಂದುಳಿದ ವರ್ಗದ ಪುರುಷ ಅಭ್ಯರ್ಥಿಗಳಿಗೆ ರೂ.500, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಪಿಡ್ಬ್ಯು ಬಿಡಿ, ಎಕ್ಸ್ ಸರ್ವಿಸ್ ಮೆನ್ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

    ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ನೇರ ಸಂದರ್ಶನದ ಮೂಲಕ ನಡೆಯುತ್ತದೆ.

    ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 23-02-2021

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09-03-2021

    ಅಧಿಕೃತ ವೆಬ್ ಸೈಟ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಎಸ್ ಬಿಐ ಸಂದರ್ಶನ ಪ್ರವೇಶ ಪತ್ರ ಬಿಡುಗಡೆ : ಕೂಡಲೇ ಡೌನ್ಲೋಡ್ ಮಾಡಿ

    ಎಸ್ ಬಿಐ ಸಂದರ್ಶನ ಪ್ರವೇಶ ಪತ್ರ ಬಿಡುಗಡೆ : ಕೂಡಲೇ ಡೌನ್ಲೋಡ್ ಮಾಡಿ

    ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಪ್ರೊಬೆಷನರಿ ಹುದ್ದೆಯ ಸಂದರ್ಶನ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ.

    ಎಸ್ ಬಿ ಐ ಒಟ್ಟು 2000 ಪಿಓ ಹುದ್ದೆಗೆ ನೇಮಕಾತಿ ಮಾಡಲು ನಿರ್ಧರಿಸಿದ್ದು, ಅಭ್ಯರ್ಥಿಗಳಿಗೆ ಸಂದರ್ಶನ ಪತ್ರವನ್ನು ಬಿಡುಗಡೆ ಮಾಡಿದೆ.

    ಅಭ್ಯರ್ಥಿಗಳು ಎಸ್ ಬಿ ಐ ಅಧಿಕೃತ ವೆಬ್‌ಸೈಟ್‌ https://www.sbi.co.in/web/career ಗೆ ಭೇಟಿ ನೀಡಿ, ಎಸ್ ಬಿಐ ಪಿ.ಒ ಸಂದರ್ಶನ ಪ್ರವೇಶ ಪತ್ರ ಮೇಲೆ ಕ್ಲಿಕ್ ಮಾಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ, ನಂತರ ಪ್ರವೇಶ ಪತ್ರ ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದರ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ.

    ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ

  • ಕೆಎಸ್ ಯು ಟೀಚಿಂಗ್ ಹುದ್ದೆಗೆ ಅರ್ಜಿ ಆಹ್ವಾನ

    ಕೆಎಸ್ ಯು ಟೀಚಿಂಗ್ ಹುದ್ದೆಗೆ ಅರ್ಜಿ ಆಹ್ವಾನ

    ಕರ್ನಾಟಕ ಸಂಸ್ಕೃತಿ ಯುನಿವರ್ಸಿಟಿ ನಲ್ಲಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ‌ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು 17-02-2021ರಂದು ಆರಂಭವಾಗಿದೆ‌. ಹುದ್ದೆಗಳ ವಿವರ, ವಿದ್ಯಾರ್ಹತೆ, ನೇಮಕಾತಿ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಟೀಚಿಂಗ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 03 ಹುದ್ದೆಗಳು ಖಾಲಿ ಇವೆ. ಇದರಲ್ಲಿ ಶಾಸ್ತ್ರ ವ್ಯಾಕರಣ -02 , ಮನು ಸ್ಕ್ರಿಪ್ಟೋಲಜಿ -01 ಹುದ್ದೆಗಳಿವೆ. ಆಸಕ್ತ ಅಭ್ಯರ್ಥಿಗಳು 25, ಫೆಬ್ರವರಿ 2021 ರೊಳಗೆ ಆಫ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25-02-2021

    ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.22,000/- ವೇತನ ನಿಗದಿಯಾಗಿರುತ್ತದೆ.

    ವಿದ್ಯಾರ್ಹತೆ: ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ/ಬೋರ್ಡ್ ನಿಂದ ಮಾಸ್ಟರ್ಸ್ ಡಿಗ್ರಿ, ಪಿ.ಎಚ್.ಡಿ ವಿದ್ಯಾರ್ಹತೆಯನ್ನು ಪಡೆದಿರಬೇಕು.

    ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ವಿರುವುದಿಲ್ಲ.

    ವಯೋಮಿತಿ : ಅಭ್ಯರ್ಥಿಗಳು ಕೆಎಸ್ ಯು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು.

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ, ಅರ್ಜಿ ಡೌನ್‌ಲೋಡ್ ಮಾಡಿ, ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ದಿನಾಂಕ 25-02-2021 ರೊಳಗೆ ಈ ಕೆಳಗಿನ ವಿಳಾಸಕ್ಕೆ ರಿಜಿಸ್ಟರ್ ಪೋಸ್ಟ್ ಅಥವಾ ಸ್ಪೀಡ್ ಪೋಸ್ಟ್ ಮುಖಾಂತರ ಸಲ್ಲಿಸಬೇಕು.

    1. ವಿಳಾಸ : Registrar,
      Karnataka Sanskrit University,
      Pampa Mahakavi Road,
      Chamarajpet,Bengaluru-560018, Karnataka

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಯುಎಎಸ್ ಧಾರವಾಡದಲ್ಲಿ ನೇಮಕ : ಆಸಕ್ತರು ಅರ್ಜಿ ಸಲ್ಲಿಸಿ

    ಯುಎಎಸ್ ಧಾರವಾಡದಲ್ಲಿ ನೇಮಕ : ಆಸಕ್ತರು ಅರ್ಜಿ ಸಲ್ಲಿಸಿ

    ಯುನಿವರ್ಸಿಟಿ ಆಫ್ ಅಗ್ರಿಕಲ್ಚರ್ ಸೈನ್ಸಸ್ (ಯುಎಎಸ್) ಧಾರವಾಡನಲ್ಲಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ‌ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು ಅರ್ಜಿ ಸಲ್ಲಿಸಲು 27, ಫೆಬ್ರವರಿ 2021 ಕೊನೆಯ ದಿನಾಂಕವಾಗಿದೆ‌. ಹುದ್ದೆಗಳ ವಿವರ, ವಿದ್ಯಾರ್ಹತೆ, ನೇಮಕಾತಿ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಸೀನಿಯರ್ ರಿಸರ್ಚ್ ಫೆಲೋ (ಎಸ್ ಆರ್ ಎಸ್) 01 ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

    ವಿದ್ಯಾರ್ಹತೆ: ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ/ಬೋರ್ಡ್ ನಿಂದ ಎಂ.ಎಸ್ಸಿ ವಿದ್ಯಾರ್ಹತೆ ಯನ್ನು ಪಡೆದಿರಬೇಕು.

    ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ವಿರುವುದಿಲ್ಲ.

    ವಯೋಮಿತಿ : ಅಭ್ಯರ್ಥಿಗಳು ಯುಎಎಸ್ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು.

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ, ಅರ್ಜಿ ಡೌನ್‌ಲೋಡ್ ಮಾಡಿ, ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ದಿನಾಂಕ 27-02-2021 ರಂದು ನೇರ ಸಂದರ್ಶನಕ್ಕೆ ಈ ಕೆಳಗಿನ ವಿಳಾಸದಲ್ಲಿ ಸಮಯ 9.30a.m  ಹಾಜರಿರಬೇಕು.ಸಂದರ್ಶನದ ವಿಳಾಸ ಈ ಕೆಳಗಿನಂತಿವೆ:

    Office of the Associate Director of the Research (HQ),Krishinagar, Dharwad-580005

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

     

  • ಕರ್ನಾಟಕ ಯುನಿವರ್ಸಿಟಿ ಧಾರವಾಡದಲ್ಲಿ (KUD) ನೇಮಕ

    ಕರ್ನಾಟಕ ಯುನಿವರ್ಸಿಟಿ ಧಾರವಾಡದಲ್ಲಿ (KUD) ನೇಮಕ

    ಕರ್ನಾಟಕ ಯುನಿವರ್ಸಿಟಿ ಧಾರವಾಡ ನಲ್ಲಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌ ‌ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು ಅರ್ಜಿ ಸಲ್ಲಿಸಲು 25, ಫೆಬ್ರವರಿ 2021 ಕೊನೆಯ ದಿನಾಂಕವಾಗಿದೆ‌. ಹುದ್ದೆಗಳ ವಿವರ, ವಿದ್ಯಾರ್ಹತೆ, ನೇಮಕಾತಿ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಅರ್ಜಿ ಸಲ್ಲಿಸಲು ಕೊ‌ನೆಯ ದಿನಾಂಕ : 25-02-2021

    ಸಂದರ್ಶನದ ದಿನಾಂಕ : 27-02-2021 ಸಮಯ 12pm

    ಪ್ರೊಜೆಕ್ಟ್ ಅಸಿಸ್ಟೆಂಟ್-01 ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

    ವಿದ್ಯಾರ್ಹತೆ: ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ/ಬೋರ್ಡ್ ನಿಂದ ಎಂ.ಎಸ್ಸಿ ವಿದ್ಯಾರ್ಹತೆ ಯನ್ನು ಪಡೆದಿರಬೇಕು.

    ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ವಿರುವುದಿಲ್ಲ.

    ವಯೋಮಿತಿ : ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕೆಯುಡಿ ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರಬೇಕು.

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ, ಅರ್ಜಿ ಡೌನ್‌ಲೋಡ್ ಮಾಡಿ, ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ದಿನಾಂಕ 25-02-2021 ರೊಳಗೆ ಸಲ್ಲಿಸಬೇಕು. ಅಥವಾ ಈ ಮೈಲ್ ಮಾಡಬೇಕು. ( [email protected] )

    ಕಚೇರಿ ವಿಳಾಸ :
    Dr.Chetan J.D.
    Principal Investigator(DBT-NER twinning)
    Department of microbiology,
    Karnataka University,
    Dharwad -580003

    ಅಭ್ಯರ್ಥಿಗಳು ಅರ್ಜಿಯನ್ನು ಸ್ಪೀಡ್ ಪೋಸ್ಟ್ ಅಥವಾ ರಿಜಿಸ್ಟರ್ ಪೋಸ್ಟ್ ಮುಖಾಂತರ ಸಲ್ಲಿಸಬೇಕು. ಹಾಗೂ ಸಂದರ್ಶನಕ್ಕೆ ಆಯ್ಕೆಯಾದ ಅಭ್ಯರ್ಥಿಗಳು ತಮ್ಮ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸದಲ್ಲಿ ದಿನಾಂಕ 27-02-2021 ಸಮಯ 12.00pm ರಂದು ಉಪಸ್ಥಿತರಿರಬೇಕು.

    ಸಂದರ್ಶನ ವಿಳಾಸ : Department of microbiology and biotechnology, Karnataka University, Dharawad-580003

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕನ್ನು ಕ್ಲಿಕ್ ಮಾಡಿ

  • ಡಿಎಸ್ಆರ್ವಿಎಸ್ ನಲ್ಲಿ 433 ಹುದ್ದೆಗಳಿಗೆ ಅರ್ಜಿ ಆಹ್ವಾನ: ಕೂಡಲೇ ಅರ್ಜಿ ಸಲ್ಲಿಸಿ

    ಡಿಎಸ್ಆರ್ವಿಎಸ್ ನಲ್ಲಿ 433 ಹುದ್ದೆಗಳಿಗೆ ಅರ್ಜಿ ಆಹ್ವಾನ: ಕೂಡಲೇ ಅರ್ಜಿ ಸಲ್ಲಿಸಿ

    ಡಿಎಸ್ ಆರ್ ವಿ ಎಸ್ (ಡಿಜಿಟಲ್‌ ವಿಕಾಸ್ ಆಂಡ್ ರೋಜರ್ ವಿಕಾಸ್ ಸಂಸ್ಥಾನ್) ನಲ್ಲಿ 443 ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು ಅರ್ಜಿ ಸಲ್ಲಿಸಲು 11, ಮಾರ್ಚ್ 2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ,ನೇಮಕಾತಿ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಅರ್ಜಿ ಸಲ್ಲಿಕೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಹೊರತು ಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸುವಂತಿಲ್ಲ.

    ಡಿಇಒ, ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
    ವಿವರಗಳು ಈ ಕೆಳಗಿನಂತಿವೆ :
    ಡಾಟಾ ಎಂಟ್ರಿ ಅಪರೇಟರ್ 168, ವೆಬ್ ಡಿಸೈನರ್ 15, ಕಂಟೆಂಟ್ ರೈಟರ್ 165,
    ಕಂಪ್ಯೂಟರ್ ನೆಟ್ವರ್ಕಿಂಗ್ ಟೆಕ್ನಿಶಿಯನ್ 46, ಆಫೀಸ್ ಅಸಿಸ್ಟೆಂಟ್ 39 ಸೇರಿದಂತೆ ಒಟ್ಟು 433 ಹುದ್ದೆಗಳಿವೆ.

    ವಿದ್ಯಾರ್ಹತೆ : ಡಾಟಾ ಎಂಟ್ರಿ, ಆಫೀಸ್ ಅಸಿಸ್ಟೆಂಟ್, ಕಂಟೆಂಟ್ ರೈಟರ್ ಹುದ್ದೆಗೆ 12th ಅಥವಾ ಡಿಪ್ಲೋಮಾ ಹೊಂದಿರಬೇಕು. ವೆಬ್ ಡಿಸೈನರ್ ಹುದ್ದೆಗೆ ಬ್ಯಾಚುಲರ್ಸ್ ಡಿಗ್ರಿ ಹಾಗೂ ಎಂಸಿಎ,
    ಕಂಪ್ಯೂಟರ್ ನೆಟ್ವರ್ಕಿಂಗ್ ಟೆಕ್ನಿಶಿಯನ್ ಹುದ್ದೆಗೆ ಬ್ಯಾಚುಲರ್ಸ್ ಡಿಗ್ರಿ ಅಥವಾ ಡಿಪ್ಲೋಮಾ ವಿದ್ಯಾರ್ಹತೆ ಬಯಸಲಾಗಿದೆ.

    ವಯೋಮಿತಿ : ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ಹಾಗೂ ಗರಿಷ್ಠ 35 ಹೊಂದಿರಬೇಕು.

    ಅರ್ಜಿ ಶುಲ್ಕ ಎಷ್ಟು ?
    ಸಾಮಾನ್ಯ/ ಒಬಿಸಿ ಅಭ್ಯರ್ಥಿಗಳಿಗೆ ರೂ.550/- ಪಾವತಿಸಬೇಕು. ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ.400/- ನಿಗದಿಪಡಿಸಲಾಗಿದೆ. ಅಂಗವಿಕಲ ಅಭ್ಯರ್ಥಿಗಳಿಗೆ ರೂ. 400/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 11 ಮಾರ್ಚ್ 2021

    ವೆಬ್ ಮಾಹಿತಿ : www.dsrvsindia.ac.in.recruitment

    ಆನ್ಲೈನ್ ಅಪ್ಲಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

    Go back

    Your message has been sent

    Warning
    Warning
    Warning
    Warning

    Warning.

    ಮಾಡಿ